“ಬೇಟಿ ಬಚಾವೋ ಬೇಟಿ ಪಡಾವೋ” ಹೆಸರಲ್ಲಿ ವಂಚನೆ; ಎಚ್ಚರಿಕೆಯಿಂದಿರಲು ಸೂಚನೆ

Source: sonews | By Staff Correspondent | Published on 23rd July 2019, 6:22 PM | Coastal News | Don't Miss |

ಉತ್ತರ ಕನ್ನಡ ಜಿಲ್ಲೆಯಲ್ಲಿಬೇಟಿ ಬಚಾವೋ ಬೇಟಿ ಪಡಾವೋಕಾರ್ಯಕ್ರಮ ಜಾರಿಯಲ್ಲಿರುವುದಿಲ್ಲ. ಯೋಜನೆಯ ಹೆಸರಿನಲ್ಲಿ ನಕಲಿ ಅರ್ಜಿಗಳನ್ನು ವಿತರಿಸಿ ಹಣ ಸಂಗ್ರಹಿಸುತ್ತಿರುವ ಬಗ್ಗೆ ವರದಿಯಾಗುತ್ತಿದ್ದು ಕುರಿತು ಸಾರ್ವಜನಿಕರು ಯಾವುದೇ ಆಮಿಷಗಳಿಗೆ ಬಲಿಯಾಗದೆ ಯೋಜನೆಯ ಕುರಿತು ಯಾವುದೇ ವ್ಯಕ್ತಿಗಳು ಜಿಲ್ಲೆಯಲ್ಲಿ ಪ್ರಚಾರಗೊಳಿಸುತ್ತಿರುವ ಅಥವಾ ಅರ್ಜಿಯನ್ನು ನೀಡುವುದಾಗಿ/ಪಡೆಯುವುದಾಗಿ ತಿಳಿಸಿದಲ್ಲಿ ಅಂತವರ ಮಾಹಿತಿಯನ್ನು ನಿಮ್ಮ ಸಮೀಪದ ಅಂಗನವಾಡಿ ಕಾರ್ಯಕರ್ತೆ/ಗ್ರಾಮ ಪಂಚಾಯತ್/ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಹಾಗೂ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ ಇವರಿಗೆ ನೀಡುವುದು.

ಬೇಟಿ ಬಚಾವೋ ಬೇಟಿ ಪಡಾವೋಯೋಜನೆಯು ಕೇಂದ್ರ ಸರ್ಕಾರದ ಯೋಜನೆಯಾಗಿದ್ದು ಕೆಲವು ಆಯ್ದ ಜಿಲ್ಲೆಗಳಲ್ಲಿ ಮಾತ್ರ ಜಾರಿಯಲ್ಲಿರುತ್ತದೆ. ಬಡ ಕುಟುಂಬಗಳ ಹೆಣ್ಣುಮಕ್ಕಳ ಭ್ರೂಣ ಹತ್ಯೆ ತಡೆಯುವುದು,ಕಡ್ಡಾಯ ಶಿಕ್ಷಣ ಯೋಜನೆಯ ಮೂಲ ಉದ್ದೇಶವಾಗಿದೆ. ಯೋಜನೆಯಡಿ ನೇರ ನಗದು ಪಾವತಿ ವ್ಯವಸ್ತೆ ಇರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 

Read These Next

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...