ಏ.10ಕ್ಕೆ ಭಟ್ಕಳದಲ್ಲಿ ಉಚಿತ ಆಯುರ್ವೇದ ಆರೋಗ್ಯ ಶಿಬಿರ

Source: S O News service | By I.G. Bhatkali | Published on 6th April 2021, 11:40 AM | Coastal News |

ಭಟ್ಕಳ: ಕುಂದಾಪುರ ಕೋಟೇಶ್ವರ ಅಮೃತೇಶ್ವರಿ ಆಯುರ್ವೇದ ಆಸ್ಪತ್ರೆ, ಭಟ್ಕಳದ ಹಿರಿಯ ಧುರೀಣ ಇನಾಯಿತುಲ್ಲಾ ಶಾಬಂದ್ರಿ ಅಭಿಮಾನಿ ಬಳಗ ಇವರ ಆಶ್ರಯದಲ್ಲಿ ಸರಕಾರಿ ಆಯುರ್ವೇದ ಮೆಡಿಕಲ್ ಕಾಲೇಜು ಬೆಂಗಳೂರು ಇವರ ಸಹಯೋಗದೊಂದಿಗೆ ಏ.10ರಂದು ಭಟ್ಕಳ ಶ್ರೀನಿವಾಸ ಡೀಲಕ್ಸ್ ಹಿಂಬದಿಯ ಅಕೀಬ್ ವಿಲ್ಲಾ ಸಮುದಾಯ ಭವನದಲ್ಲಿ ಉಚಿತ ಆಯುರ್ವೇದ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿದೆ.

ಈ ಕುರಿತು ಸೋಮವಾರ ಕೋಟೇಶ್ವರ ಅಮೃತೇಶ್ವರಿ ಆಯುರ್ವೇದ ಆಸ್ಪತ್ರೆಯ ವೈದ್ಯ ಡಾ.ಪ್ರಸನ್ನ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಸಂಧಿವಾತದಂತಹ ನರ ಸಂಬಂಧಿ ಕಾಯಿಲೆಗಳು, ಕಣ್ಣು, ಕಿವಿ, ಮೂಗು, ನಾಲಿಗೆಯ ಸಮಸ್ಯೆಗಳು, ಮೂಲವ್ಯಾಧಿ, ಸ್ತ್ರೀರೋಗ ಕಾಯಿಲೆಗಳಿಗೆ ತಪಾಸಣೆ ಮತ್ತು ಚಿಕಿತ್ಸೆ ನೀಡಲಾಗುತ್ತದೆ. ಭಟ್ಕಳದ ಜನರು ಈ ಶಿಬಿರದ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು. ಬೆಂಗಳೂರು ಸರಕಾರಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯ ಡಾ.ಶ್ರೀಧರ ಮಾತನಾಡಿ, ಜಗತ್ತಿನಲ್ಲಿ ಆಯುರ್ವೇದಕ್ಕೆ ಹೆಚ್ಚಿನ ಮಹತ್ವ ಇದೆ. ಇತ್ತೀಚಿನ ದಿನಗಳಲ್ಲಿ ಕೊರೊನಾದಂತಹ ವೈರಾಣು ಸಂಬಂಧಿ ಕಾಯಿಲೆಗಳಿಗೆ ಜನರು ಭಯ ಪಡುವಂತಾಗಿದೆ. ಸರಿಯಾದ ಊಟ, ಮಲ, ಮೂತ್ರ ವಿಸರ್ಜನೆಗಳು ಮನುಷ್ಯನನ್ನು ಆರೋಗ್ಯವಾಗಿಡುತ್ತವೆ. ರೋಗ ಬಂದ ನಂತರ ಚಿಕಿತ್ಸೆ ನೀಡುವುದಕ್ಕಿಂತ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸಿಕೊಳ್ಳುವುದು ಅತಿ ಮುಖ್ಯವಾಗಿದೆ. ಈ ದಿಶೆಯಲ್ಲಿ ಭಟ್ಕಳದಲ್ಲಿ ಆಯುರ್ವೇದ ಆರೋಗ್ಯ ಶಿಬಿರವನ್ನು ಆಯೋಜಿಸಲಾಗುತ್ತಿದ್ದು, ಇಂತಹ ಶಿಬಿರಗಳು ಹೆಚ್ಚು ನಡೆಯಬೇಕಾಗಿದೆ, ರೋಗನಿರೋಧಕ ಶಕ್ತಿ ವೃದ್ಧಿಗಾಗಿ ಶಿಬಿರಾರ್ಥಿಗಳಿಗೆ ಉಚಿತವಾಗಿ ಔಷಧಿಯನ್ನು ವಿತರಿಸಲಾಗುವುದು ಎಂದು ವಿವರಿಸಿದರು.

ಇನಾಯಿತುಲ್ಲಾ ಶಾಬಂದ್ರಿ, ಪುರಸಭಾ ಮಾಜಿ ಅಧ್ಯಕ್ಷ ಸಾದೀಕ್ ಮಟ್ಟಾ ಮೊದಲಾದವರು ಉಪಸ್ಥಿತರಿದ್ದರು. 
 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...