ದ್ವೀತಿಯ ಪಿ.ಯು.ಸಿ ಮತ್ತು ಎಸ್.ಎಸ್.ಎಲ್.ಸಿ ವಿಧ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

Source: so news | Published on 16th June 2020, 12:17 AM | State News | Don't Miss |

ಧಾರವಾಡ: ಕೋವಿಡ್-19ರ ಕಾರಣದಿಂದಾಗಿ ಮುಂದೂಡಲ್ಪಟ್ಟಿದ್ದ ಕರ್ನಾಟಕದ ದ್ವೀತಿಯ ಪಿ.ಯು.ಸಿ ಮತ್ತು  ಎಸ್.ಎಸ್.ಎಲ್.ಸಿ. ವಿಧ್ಯಾರ್ಥಿಗಳಿಗೆ #ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಉಚಿತ ಬಸ್ ವ್ಯವಸ್ಥೆ ಮಾಡಿದೆ.  
2019-20ನೇ ಸಾಲಿನ ಅಂತಿಮ ಪರೀಕ್ಷೆಗಳು ದ್ವೀತಿಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಜೂನ್ 18 ರಂದು ಮತ್ತು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಜೂನ್ 25 ರಿಂದ ಜುಲೈ 04 ರವರೆಗೆ ನಡೆಯಲಿವೆ. ಪರೀಕ್ಷೆ ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಮತ್ತು ಹಿಂದಿರುಗುವಾಗ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...