ಕೋವಿಡ್ ಬಿಕ್ಕಟ್ಟು: ಚಾಲಕರಿಗೆ ಆರ್ಥಿಕ ನೆರವು, ಉಚಿತ ಪಡಿತರ -ಕೇಜ್ರಿವಾಲ್‌ ಘೋಷಣೆ

Source: ಪಿಟಿಐ‌ | Published on 4th May 2021, 2:11 PM | National News |

ನವದೆಹಲಿ: ಕೋವಿಡ್‌ ಬಿಕ್ಕಟ್ಟಿನಿಂದ ಸಂಕಷ್ಟದಲ್ಲಿರುವ ದೆಹಲಿಯ 72 ಲಕ್ಷ ಪಡಿತರ ಚೀಟಿದಾರರಿಗೆ ಎರಡು ತಿಂಗಳ ಕಾಲ ಉಚಿತವಾಗಿ ಪಡಿತರ ಹಾಗೂ ಆಟೊ–ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ₹5 ಸಾವಿರ ಅರ್ಥಿಕ ನೆರವು ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಮಂಗಳವಾರ ಪ್ರಕಟಿಸಿದ್ದಾರೆ.

ಕೋವಿಡ್‌ ಸೋಂಕು ಪ್ರಸರಣ ತಡೆಗೆ ದೆಹಲಿಯಲ್ಲಿ ಎರಡು ತಿಂಗಳವರೆಗೆ ಲಾಕ್‌ಡೌನ್ ಜಾರಿಗೊಳಿಸುವುದಿಲ್ಲ. ಈಗ ದೆಹಲಿಯ ಪರಿಸ್ಥಿತಿ ಸುಧಾರಿಸುವ ವಿಶ್ವಾಸವಿದೆ. ಲಾಕ್‌ಡೌನ್ ಜಾರಿಗೊಳಿಸುವ ಅಗತ್ಯವೂ ಬರುವುದಿಲ್ಲ‘ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಕಳೆದ ವರ್ಷದ ಲಾಕ್‌ಡೌನ್ ಸಮಯದಲ್ಲಿ ದೆಹಲಿ ಸರ್ಕಾರ 1.56 ಲಕ್ಷ ಆಟೊ ಮತ್ತು ಟ್ಯಾಕ್ಸಿ ಚಾಲಕರಿಗೆ ತಲಾ ₹5ಸಾವಿರ ಆರ್ಥಿಕ ನೆರವು ನೀಡಿತ್ತು. ಈ ವರ್ಷವೂ ಅದೇ ರೀತಿ ಅವರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ‘ ಎಂದು ಕೇಜ್ರಿವಾಲ್ ಹೇಳಿದರು.

ಕೇಂದ್ರಗಳನ್ನು ತೆರೆಯಲು ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ.

Read These Next

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...

ಪತಂಜಲಿಯಿಂದ ನ್ಯಾಯಾಲಯದ ಆದೇಶ ಉಲ್ಲಂಘನೆ; ಕಾನೂನು ಕ್ರಮ ಎದುರಿಸಲು ಸಿದ್ದರಾಗಿ ಪತಂಜಲಿಗೆ ಸುಪ್ರೀಂ ಕೋರ್ಟ್ ಚಾಟಿ

ವೈಜ್ಞಾನಿಕ ತಳಹದಿಯ ಔಷಧಿಗಳನ್ನು ಟೀಕಿಸುವ ಹಾಗೂ ಜನರನ್ನು ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟಿಸುವುದನ್ನು ...