ಸೌಹಾರ್ದ ಕ್ರಿಕೆಟ್: ಡಿ.ಸಿ ಇಲೆವೆನ್‌ಗೆ ಜಯ

Source: so news | Published on 17th February 2020, 6:49 AM | Coastal News | Don't Miss |

 

ಕಾರವಾರ: ನಗರದಲ್ಲಿ ಭಾನುವಾರ ನಡೆದ ಸೌಹಾರ್ದ ಕ್ರಿಕೆಟ್ ಪಂದ್ಯದಲ್ಲಿ ‘ಡಿ.ಸಿ. ಇಲೆವೆನ್’ ತಂಡವು, ‘ಪ್ರೆಸ್ ಇಲೆವೆನ್’ ತಂಡವನ್ನು ಮೂರು ರನ್‌ಗಳಿಂದ ಸೋಲಿಸಿ ರೋಚಕವಾಗಿ ಪ್ರಶಸ್ತಿ ಗೆದ್ದುಕೊಂಡಿತು.

‌ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ನೇತೃತ್ವದ ತಂಡವು ನಿಗದಿತ 12 ಓವರ್‌ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 104 ರನ್ ಗಳಿಸಿತು. ಸವಾಲನ್ನು ಬೆನ್ನತ್ತಿದ ಜಿಲ್ಲಾಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಟಿ.ಬಿ.ಹರಿಕಂತ್ರ ನಾಯಕತ್ವದ ‘ಪ್ರೆಸ್ ಇಲೆವೆನ್’ ತಂಡವು ಆರಂಭಿಕ ಆಘಾತ ಕಂಡಿತು. ನಂತರ ಚೇತರಿಸಿಕೊಂಡರೂ 12 ಓವರ್‌ಗಳಲ್ಲಿ ಏಳು ವಿಕೆಟ್ ಕಳೆದುಕೊಂಡು 102 ರನ್ ಗಳಿಸಲಷ್ಟೇ ಸಾಧ್ಯವಾಯಿತು. ‘ಪಂದ್ಯದ ಆಟಗಾರ’ನಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು, ‘ಉತ್ತಮ ಬ್ಯಾಟ್ಸ್‌ಮನ್’ ಆಗಿ ಪತ್ರಕರ್ತ ದರ್ಶನ್ ನಾಯ್ಕ ಹಾಗೂ ‘ಉತ್ತಮ ಬೌಲರ್’ ಆಗಿ ಪಿ.ಎಸ್‌.ಐ ಸಂಪತ್ ಕುಮಾರ್ ಪ್ರಶಸ್ತಿ ಪಡೆದುಕೊಂಡರು. ಪಂದ್ಯಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಟಿ.ಗೋವಿಂದಯ್ಯ ಚಾಲನೆ ನೀಡಿದರು

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...