ಮಾರ್ಚ್ 21ರಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಆರಂಭ

Source: so news | By Manju Naik | Published on 17th March 2019, 12:07 AM | State News | Don't Miss |


ಶಿವಮೊಗ್ಗ: ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ.ಪರೀಕ್ಷೆಗಳು ಮಾರ್ಚ್ 21ರಿಂದ ಏಪ್ರಿಲ್ 04ರವರೆಗೆ ಜಿಲ್ಲೆಯ ವಿವಿಧ ತಾಲೂಕುಗಳು 83ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಸುಮಂಗಳ ಪಿ.ಕುಚಿನಾಡ ಅವರು ತಿಳಿಸಿದ್ಧಾರೆ.
ಇವುಗಳಲ್ಲಿ 45 ಸರ್ಕಾರಿ, 25 ಅನುದಾನಿತ ಹಾಗೂ 13 ಅನುದಾನ ರಹಿತ ಪರೀಕ್ಷಾ ಕೇಂದ್ರಗಳು ಇವೆ. ಇವುಗಳ ಪೈಕಿ 21ಕ್ಲಸಟ್ರ್ ಸಹಿತ, 26ಕ್ಲಸ್ಟರ್ ರಹಿತ ಹಾಗೂ 02ಪರೀಕ್ಷಾ ಕೇಂದ್ರಗಳು ಖಾಸಗಿ ವ್ಯಾಪ್ತಿಗೊಳಪಟ್ಟಿವೆ. ಈ ಪರೀಕ್ಷೆಗಳು ಸುಗಮವಾಗಿ ನಡೆಸಲು ಜಿಲ್ಲಾಡಳಿತದ ವತಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿರುವ ಅವರು, 12446 ವಿದ್ಯಾರ್ಥಿಗಳು ಹಾಗೂ 12169 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 24,615ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ. ಇವರಲ್ಲಿ ಭದ್ರಾವತಿ ತಾಲೂಕಿನ 4818, ಹೊಸನಗರ ತಾಲೂಕಿನ1648, ಸಾಗರ ತಾಲೂಕಿನ 2973, ಶಿಕಾರಿಪುರ ತಾಲೂಕಿನ 3491, ಶಿವಮೊಗ್ಗ ತಾಲೂಕಿನ7536, ಸೊರಬ ತಾಲೂಕಿನ2490 ಮತ್ತು ತೀರ್ಥಹಳ್ಳಿ ತಾಲೂಕಿನ 1839ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 24615ಪರೀಕ್ಷಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದವರು ತಿಳಿಸಿದ್ದಾರೆ.
ಈ ಪರೀಕ್ಷೆಗಳು ಪ್ರತಿದಿನ ಬೆಳಿಗ್ಗೆ 9.30ರಿಂದ ವiಧ್ಯಾಹ್ನ 12.30ರವರೆಗೆ ನಡೆಯಲಿವೆ. ಮಾರ್ಚ್ 21ರಂದು ಪ್ರಥಮ ಭಾಷೆ, 25ರಂದು ಗಣಿತ, 27ರಂದು ದ್ವಿತೀಯ ಭಾಷೆ, 29ರಂದು ಸಮಾಜ ವಿಜ್ಞಾನ, ಏಪ್ರಿಲ್ 02ರಂದು ವಿಜ್ಞಾನ ಹಾಗೂ 04ರಂದು ತೃತೀಯ ಭಾಷಾ ಪರೀಕ್ಷೆಗಳು ನಡೆಯಲಿವೆ.
ಈ ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಹಲವು ತಂಡಗಳನ್ನು ರಚಿಸಲಾಗಿದೆ. ಪ್ರಶ್ನೆಪತ್ರಿಕೆಗಳು ಸಕಾಲದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಸೇವೆಯನ್ನು ಬಳಸಿಕೊಳ್ಳಲು ಉದ್ದೇಶಿಸಲಾಗಿದೆ ಎಂದವರು ತಿಳಿಸಿದ್ದಾರೆ.
ಪ್ರಸಕ್ತ ಸಾಲಿನ ಪರೀಕ್ಷೆಯಲ್ಲಿ ಶಿವಮೊಗ್ಗ ಜಿಲ್ಲೆಯು ಉತ್ತಮ ಫಲಿತಾಂಶ ಪಡೆದು ರಾಜ್ಯದ ಅಗ್ರಪಂಕ್ತಿಯಲ್ಲಿ ಗುರುತಿಸಿಕೊಳ್ಳಬೇಕೆಂಬ ಸದುದ್ದೇಶದಿಂದ ಜಿಲ್ಲಾಧಿಕಾರಿಗಳ ಮಾರ್ಗದರ್ಶನ ಹಾಗೂ ಸಲಹೆಯಂತೆ ವಿವಿಧ ವಿಷಯಗಳ ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸಿ, ಕಲಿಕೆಯಲ್ಲಿ ಹಿಂದುಳಿದ ಶಾಲೆಗಳ ಮಕ್ಕಳಿಗೆ ತರಗತಿಗಳನ್ನು ನಡೆಸಲಾಗಿತ್ತಲ್ಲದೆ ಪ್ರೌಢಶಾಲಾ ಶಿಕ್ಷಕರಿಗೂ ಸರಳ ಭೋದನಾ ವಿಧಾನಗಳ ಬಗ್ಗೆ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು ಎಂದವರು ತಿಳಿಸಿದ್ದಾರೆ.
ನಿಷೇಧಾಜ್ಞೆ ಜಾರಿ : ಈ ಪರೀಕ್ಷೆಗಳು ನಡೆಯುವ ದಿನಾಂಕದಂದು ಬೆಳಿಗ್ಗೆ 8ರಿಂದ ಸಂಜೆ 4ರವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200ಮೀ. ಪ್ರದೇಶದ ವ್ಯಾಪ್ತಿಯಲ್ಲಿ ಸಾರ್ವಜನಿಕರು ಪ್ರವೇಶಿಸದಂತೆ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಗೆ ಸಂಬಂಧಪಟ್ಟ ಸಿಬ್ಬಂಧಿ, ಅಧಿಕಾರಿಗಳನ್ನು ಹೊರತುಪಡಿಸಿ ಇತರೆ ವ್ಯಕ್ತಿಗಳು ಪರೀಕ್ಷಾ ಕೇಂದ್ರ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ. ಐದು ಹಾಗೂ ಐದಕ್ಕಿಂತ ಹೆಚ್ಚು ಜನರು ನಿಷೇಧಿತ ಪ್ರದೇಶದ ವ್ಯಾಪ್ತಿಯಲ್ಲಿ ಸೇರುವುದನ್ನು ನಿಷೇಧಿಸಿದೆ. ಯಾವುದೇ ರೀತಿಯ ಘೋಷಣೆ ಕೂಗುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನಲ್ಲಿರುವ ಟೈಪಿಂಗ್, ಝೆರಾಕ್ಸ್ ಹಾಗೂ ಫ್ಯಾಕ್ಸ್ ಅಂಗಡಿಗಳು ಪರೀಕ್ಷಾ ಅವಧಿಯಲ್ಲಿ ತೆರೆಯುವುದನ್ನು ಹಾಗೂ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next