ನವಂಬರ್ 25 ರಿಂದ ಡಿಸೆಂಬರ್ 10 ರವೆರೆಗೆ ಜಿಲ್ಲೆಯಲ್ಲಿ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ: ಡಾ.ಬಿ.ಸಿ.ಸತೀಶ

Source: so news | Published on 20th November 2019, 12:01 AM | State News | Don't Miss |


ಧಾರವಾಡ: 2025 ರೊಳಗೆ ಭಾರತವನ್ನು ಕ್ಷಯರೋಗ ಮುಕ್ತ ರಾಷ್ಟçವಾಗಿ ರೂಪಿಸಲು ಭಾರತ ಸರಕಾರ ಗುರಿಹೊಂದಿದ್ದು, ಕ್ಷಯರೋಗ ನಿಯಂತ್ರಣ ಕಾರ್ಯಕ್ರಮಗಳೊಂದಿಗೆ ವಿಶೇಷವಾಗಿ ನವಂಬರ್ 25 ರಿಂದ ಡಿಸೆಂಬರ್ 10, 2019 ರವರೆಗೆ ಜಿಲ್ಲೆಯಲ್ಲಿ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಆರೋಗ್ಯ ಇಲಾಖೆ ಪೂರ್ಣ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ನಿರ್ವಾಹಕ ಅಧಿಕಾರಿ ಡಾ.ಬಿ.ಸಿ.ಸತೀಶ ಹೇಳಿದರು.

ಅವರು ಜಿಲ್ಲಾ ಪಂಚಾಯತಿಯಲ್ಲಿ ಅಭಿಯಾನದ ಪೂರ್ವಸಿದ್ಧತೆಗಳ ಕುರಿತ ಸಭೆ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಅಭಿಯಾನದಲ್ಲಿ ಜಿಲ್ಲೆಯ ವಿವಿಧ ಪ್ರದೆಶಗಳ 3,21,221 ಜನರನ್ನು ಪರೀಕ್ಷೆಗೆ ಒಳಪಡಿಸಿ ಮತ್ತು ಕೊಳಚೆ ಪ್ರದೇಶ, ಟ್ರಕ್ ಟರ್ಮಿನಲ್, ಶಾಲಾ ಕಾಲೇಜು ಸೇರಿದಂತೆ ವಿವಿಧ ಸ್ಥಳಗಳಲ್ಲಿ “ರೋಗವನ್ನು ದೂರವಿಡಿ; ರೋಗಿಯನ್ನಲ್ಲ” ಎಂಬ ಸಂದೇಶದೊAದಿಗೆ ಜನಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುತ್ತದೆ.

ಕ್ಷಯರೋಗ ಪತ್ತೆ ಅಭಿಯಾನದಲ್ಲಿ ಕೈಗಾರಿಕಾ ಪ್ರದೇಶ, ಕೊಳಚೆ ಪ್ರದೇಶ, ಶಾಲಾ ಕಾಲೇಜು, ವಾಹನಗಳ ಚಾಲಕರು, ಕಟ್ಟಡ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಸಂಬAಧಿತ ಸಂಘ ಸಂಸ್ಥೆಗಳು ಸಕ್ರೀಯವಾಗಿ ಅಭಿಯಾನದಲ್ಲಿ ತೊಡಗಿಸಿಕೊಳ್ಳಬೇಕೆಂದು ಅವರು ಹೇಳಿದರು.

ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ತನುಜಾ.ಕೆ.ಎನ್ ಮಾತನಾಡಿ, ಅಭಿಯಾನ ಯಶಸ್ವಿಗೊಳಿಸಲು 284 ತಂಡಗಳನ್ನು ರಚಿಸಲಾಗಿದೆ. ಇದರಲ್ಲಿ ಆಶಾ, ಆರೋಗ್ಯ ಕಾರ್ಯಕರ್ತರು, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿಗಳು ಸೇರಿದಂತೆ ಒಟ್ಟು 568 ಜನ ಪಾಲ್ಗೋಳ್ಳಲಿದ್ದಾರೆ ಎಂದರು.
ಜಿಲ್ಲೆಯಲ್ಲಿ ಕ್ಷಯರೋಗ ಪತ್ತೆಗಾಗಿ ಎಂಟು ಘಟಕಗಳಿವೆ. ಈಗಾಗಲೇ 1835 ಕ್ಷಯರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತು ಪ್ರತಿ ತಿಂಗಳು ಸಾವಿರದಿಂದ ಸಾವಿರದ ಐದು ನೂರು ಸಂಶಯಾಸ್ಪದ ಕ್ಷಯರೋಗಿಗಳ ಪರೀಕ್ಷೆ ಮಾಡಲಾಗುತ್ತಿದೆ. ಪ್ರಸ್ತುತ ವಿಶೇಷ ಅಭಿಯಾನದಲ್ಲಿ ಹೆಚ್ಚು ಜನರನ್ನು ಪರೀಕ್ಷಿಸುವ ಗುರಿ ಹೊಂದಲಾಗಿದೆ ಎಂದು ಅವರು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ ಮದೀನಕರ ಮಾತನಾಡಿ, ಕ್ಷಯರೋಗ ನಿಯಂತ್ರಣಕ್ಕಾಗಿ ಇಲಾಖೆಯಿಂದ ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಕ್ಷಯರೋಗಿಗಳಿಗೆ ಚಿಕಿತ್ಸೆ ಅವಧಿ ಪೂರ್ಣಗೊಳ್ಳುವರೆಗೆ ಪ್ರತಿತಿಂಗಳು ನಿಕ್ಷಯ ಪೋಷಣೆ ಯೋಜನೆಯಡಿ 500 ರೂ. ಗಳ ಸಹಾಯಧನ ನೀಡಲಾಗುತ್ತಿದೆ. ಕ್ಷಯರೋಗ ಸೇರಿದಂತೆ ಯಾವುದೇ ರೀತಿಯ ಕಾಯಿಲೆ ಹಾಗೂ ಆರೋಗ್ಯ ಸಮಸ್ಯೆಗಳ ಕುರಿತು ಆರೋಗ್ಯ ಸಹಾಯವಾಣಿ 104 ಕ್ಕೆ ಉಚಿತ ಕರೆ ಮಾಡಿ, ಸಾರ್ವಜನಿಕರು ಮಾಹಿತಿ ಪಡೆಯಬಹುದೆಂದು ಅವರು ಹೇಳಿದರು.

ಸಭೆಯಲ್ಲಿ ಜಿಲ್ಲಾ ಶಸ್ತç ಚಿಕಿತ್ಸಕ ಡಾ. ಶಿವಕುಮಾರ ಮಾನಕರ, ಆರ್.ಸಿ.ಎಚ್ ಅಧಿಕಾರಿ ಡಾ.ಎಸ್.ಎಂ.ಹೊನಕೇರಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ಸುಜಾತಾ ಹಸವಿಮಠ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಶಶಿ ಪಾಟೀಲ, ಧಾರವಾಡ ತಾಲೂಕು ವೈದ್ಯಾಧಿಕಾರಿ ಡಾ. ಅಯ್ಯನಗೌಡ ಪಾಟೀಲ, ಡಾ. ಎಸ್.ಎಂ.ನಿAಬಣ್ಣನವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿ ಡಾ. ಎಚ್.ಎಚ್ ಕುಕನೂರು, ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಅಶೋಕ ಆರ್. ಪಾಟೀಲ, ನಗರ ಆಟೋ ಚಾಲಕರ ಸಂಘದ ಎಂ.ಎA.ಬೇಪಾರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು, ವೈದ್ಯಾಧಿಕಾರಿಗಳು ಭಾಗವಹಿಸಿದ್ದರು.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...