ಪತ್ರಕರ್ತರ ಸಂಘದಿಂದ ಡಾ. ಚಿತ್ತರಂಜನ್ ಸ್ಮಾರಕ ಪ್ರಶಸ್ತಿ ಘೋಷಣೆ

Source: S.O. News Service | By MV Bhatkal | Published on 1st March 2021, 7:28 PM | Coastal News |

ಭಟ್ಕಳ: ಜಿಲ್ಲಾ ಪತ್ರಿಕಾಭವನದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭೆಯಲ್ಲಿ ಡಾ. ಚಿತ್ತರಂಜನ್ ಸ್ಮಾರಕ ಜಿಲ್ಲಾ ಪತ್ರಕರ್ತರ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷ ರಾಧಾಕೃಷ್ಣ ಭಟ್ಟ ಅವರು ಘೋಷಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಉತ್ತರ ಕನ್ನಡ ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಕನಸು ಕಂಡಿದ್ದ ಅಜಾತ ಶತ್ತು ಡಾ. ಯು. ಚಿತ್ತರಂಜನ್ ಅವರ ನೆನಪನ್ನು ಶಾಶ್ವತಗೊಳಿಸುವುದಕ್ಕಾಗಿ ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಂಕಲ್ಪ ಮಾಡಿದ್ದು ಈ ಬಗ್ಗೆ ಈಗಾಗಲೇ ಪ್ರಾರಂಭಿಕ ಠೇವಣಿಯನ್ನು ಮಾಡಲಾಗಿದೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ದೊಡ್ಡ ಮೊತ್ತದ ಹಣವನ್ನು ಶಾಶ್ವತ ಠೇವಣಿಯನ್ನಾಗಿರಿಸಿ ಅದರ ಬಡ್ಡಿಯಿಂದ ಪ್ರತಿವರ್ಷವೂ ಜಿಲ್ಲೆಯ ಓರ್ವ ಪತ್ರಕರ್ತರಿಗೆ ಡಾ. ಯು. ಚಿತ್ತರಂಜನ್ ಹೆಸರಿನಲ್ಲಿ ಪ್ರಶಸ್ತಿಯನ್ನು ನೀಡಲು ಬಯಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಡಾ, ಚಿತ್ತರಂಜನ್ ಅಭಿಮಾನಿಗಳು ಈ ಯೋಜನೆಗೆ ಉತ್ತಮ ಸಹಕಾರ ನೀಡುತ್ತಾರೆನ್ನುವ
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಡಾ. ಚಿತ್ತರಂಜನ್ ಪ್ರಶಸ್ತಿಯನ್ನು ಘೋಷಣೆ ಮಾಡಿರುವುದು.
ಭರವಸೆ ಇದ್ದು ಈಗಾಗಲೇ ಹಲವರು ತಮ್ಮ ಸಹಮತವನ್ನು ಹಂಚಿಕೊಂಡಿದ್ದಾರೆ ಎಂದರು. ಸಭೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಜಿ. ಸುಬ್ರಾಯಭಟ್ಟಬಕ್ಕಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಹ ಆಡಿ, ಉಪಾಧ್ಯಕ್ಷ ಪ್ರದೀಪ ಶೆಟ್ಟಿ ಶಿರಸಿ,
ಬಸವರಾಜ ಪಾಟೀಲ್ ಮುಂಡಗೋಡ, ಅನಂತ ದೇಸಾಯಿ ಜೊಯಿಡಾ, ಖಜಾಂಚಿ ಸುಮಂಗಲ ಹೊನ್ನೆಕೊಪ್ಪ, ಕಾರ್ಯದರ್ಶಿ ಯಶ್ವಂತ ನಾಯ್ಕ, ಕೆಕ್ಕಾರ್ ನಾಗರಾಜ ಭಟ್ಟ ಸಿದ್ದಾಪುರ, ಕಾರ್ಯಕಾರಿ ಸದಸ್ಯರು ಉಪಸ್ಥಿತರಿದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...