ಪರಿಶಿಷ್ಟರಿಗೆ ಮೀಸಲಿಟ್ಟ ಹಣ, ಅನ್ನ ಉದ್ದೇಶಕ್ಕೆ ಬಳಸುವುದಿಲ್ಲ; ಸಿಎಂ ಸ್ಪಷ್ಟನೆ

Source: Vb | By I.G. Bhatkali | Published on 4th August 2023, 11:20 AM | State News |

ಬೆಂಗಳೂರು: ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗೆ ಮೀಸಲಿಟ್ಟ ಅನುದಾನವನ್ನು ಇತರ ಉದ್ದೇಶಕ್ಕೆ ಬಳಸಲಾಗುತ್ತಿದೆ ಎಂದು ಕೆಲವರು ದಿಕ್ಕು ತಪ್ಪಿಸುತ್ತಿದ್ದಾರೆ. ಆದರೆ, ಯಾವುದೇ ಸಂದರ್ಭದಲ್ಲಿ ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿಟ್ಟ ಹಣವನ್ನು ಇತರ ಉದ್ದೇಶಗಳಿಗೆ ಬಳಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ಗುರುವಾರ ಪ್ರಕಟನೆ ನೀಡಿರುವ ಸಿಎಂ ಕಾರ್ಯಾಲಯ, ಎಸ್ ಸಿಪಿ- ಟಿಎಸ್‌ ಕಾಯ್ದೆ 2013ರ ಸೆಕ್ಷನ್ 7(ಡಿ) ಅಡಿಯಲ್ಲಿ ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿಟ್ಟ ಅನುದಾನ ಅನ್ಯ ಉದ್ದೇಶಕ್ಕೆ ಬಳಕೆ ಮಾಡಲು ಅವಕಾಶವಿದ್ದ ಆ ಸೆಕ್ಷನ್ 7 (ಡಿ) ರದ್ದು ಮಾಡಲಾಗಿದೆ. ಎಸ್‌ಪಿ-ಟಿಎಸ್‌ಪಿ ಯೋಜನೆಯಡಿ ಮೀಸಲಿಟ್ಟ ಒಟ್ಟು 11,144 ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಒದಗಿಸಿದೆ. ಇಷ್ಟು ಹಣವನ್ನು ಕಡ್ಡಾಯವಾಗಿ ಪರಿಶಿಷ್ಟ ಕುಟುಂಬಗಳಿಗಾಗಿ ಬಳಕೆ ಮಾಡಬೇಕೆಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದೆ. ಎಸ್‌ಪಿ-ಟಿಎಸ್‌ ಅನುದಾನವನ್ನು ಗೃಹಲಕ್ಷ್ಮಿ-5,075 ಕೋ.ರೂ., ಅನ್ನಭಾಗ್ಯ-2,779 ಕೋ.ರೂ., ಗೃಹಜ್ಯೋತಿ-2,410 ಕೋ.ರೂ., ಶಕ್ತಿ-812 ಕೋ.ರೂ. ಹಾಗೂ ಯುವನಿಧಿ-67 ಕೋಟಿ ರೂ. ಸೇರಿದಂತೆ ಒಟ್ಟು 11,144 ಕೋಟಿ ರೂ.ಗಳನ್ನು ಪರಿಶಿಷ್ಟ ಕುಟುಂಬಗಳಿಗೆ ಗ್ಯಾರಂಟಿ ಯೋಜನೆಗಳಿಗೆ ಒದಗಿಸಲಾಗಿದೆ ಎಂದು ಪ್ರಕಟನೆಯಲ್ಲಿ ಮಾಹಿತಿ ನೀಡಲಾಗಿದೆ.

Read These Next

ಹನೂರು: ಇಂಡಿಗನ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂಗೆ ಹಾನಿ ತಹಶೀಲ್ದಾರ್, ಇನ್‌ಸ್ಪೆಕ್ಟರ್, ಚುನಾವಣಾಧಿಕಾರಿ ಸಹಿತ ಹಲವರಿಗೆ ಗಾಯ

ಮಹದೇಶ್ವರ ಬೆಟ್ಟ ಸಮೀಪದ ಇಂಡಿಗನತ್ತ ಮೆಂದಾರೆ ಮತಗಟ್ಟೆ ಬಳಿ ಮತದಾನ ನಡೆಯುವ ಬದಲು ರಣರಂಗವಾಗಿ ಮಾರ್ಪಟ್ಟು ಮತಗಟ್ಟೆ ಸಂಪೂರ್ಣ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...