ಕೃಷಿ ಕ್ಷೇತ್ರದಲ್ಲಿ ಮೂಲಭೂತ ಬದಲಾವಣೆಯ ಅಗತ್ಯವಿದೆ-ಸಚಿವ ಪ್ರಲ್ಹಾದ ಜೋಶಿ

Source: SO News | By Laxmi Tanaya | Published on 28th November 2022, 9:20 PM | State News | Don't Miss |

ಧಾರವಾಡ : ದೇಶದ ಆರ್ಥಿಕತೆಯ ಅಭಿವೃದ್ಧಿಗೆ ಕೃಷಿಯ ಕೊಡುಗೆ ಅಮೂಲಾಗ್ರವಾಗಿದ್ದು, ಆಧುನಿಕ ವಿಜ್ಞಾನ ತಂತ್ರಜ್ಞಾನಗಳ ಇಂದಿನ ದಿನಮಾನಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗತ್ಯ ಬದಲಾವಣೆಗಳು ಆಗಬೇಕಿವೆಯೆಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ ಜೋಶಿ ಅಭಿಪ್ರಾಯಪಟ್ಟರು.

 ಸೋಮವಾರ ಕೃಷಿ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಜರುಗಿದ 36ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಾ, ಭಾರತವು ಯುವಜನಾಂಗದ ದೇಶವಾಗಿದೆ. ಈ ಯುವ ಜನಾಂಗವೇ ಈ ದೇಶದ ಸಂಪನ್ಮೂಲವಾಗಿದೆ. ಕೃಷಿ ಪದವಿಧರರು ಕೌಶಲ್ಯ ಆಧಾರಿತ ನೂತನ ಕೃಷಿ ಉತ್ಪನ್ನಗಳನ್ನು ಬಳಸಿ ಉದ್ಯಮಿಗಳಾಗಬೇಕೆಂದು ತಿಳಿಸಿದರು.

 ಕೃಷಿ ವಿದ್ಯಾಲಯಗಳಲ್ಲಿ ನಡೆಯುತ್ತಿರುವ ಪ್ರಯೋಗದ ಫಲಿತಾಂಶಗಳು ಕ್ಷೇತ್ರಮಟ್ಟಕ್ಕೆ ತಲುಪಬೇಕಿದೆ. ಲ್ಯಾಬ್ ಟೂ ಲ್ಯಾಂಡ್ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆಯೆಂದರು.

 ಜಗತ್ತಿನ ಆಹಾರ ಭದ್ರತೆಗೆ ಭಾರತದ ಕೊಡುಗೆ ಅಪಾರ. ಇಡೀ ಜಗತ್ತೇ ಇಂದು ಭಾರತದತ್ತ ನೋಡುತ್ತಿದೆ. ಭಾರತದ ರೀತಿ-ನೀತಿ, ಆಹಾರ ಪದ್ಧತಿ, ಜೀವನ ಪದ್ಧತಿ, ಯೋಗ, ಆಚಾರ, ವಿಚಾರಗಳಿಗೆ ಇಡೀ ಜಗತ್ತು ಒಪ್ಪಿಕೊಂಡಿದೆ. ಮುಂಬರುವ ದಿನಮಾನಗಳಲ್ಲಿ ಭಾರತವು 3ನೇ ದೊಡ್ಡ ಆರ್ಥಿಕ ದೇಶವಾಗಲಿದೆ. ಈ ಹಿನ್ನೆಲೆಯಲ್ಲಿ ಕೃಷಿ ವಿಜ್ಞಾನಿಗಳು ಹಾಗೂ ಕೃಷಿ ಪದವಿಧರರು ಹೊಸ ಉದ್ಯಮಗಳನ್ನು ಸ್ಥಾಪಿಸಲು ಮುಂದಾಗಬೇಕೆಂದರು.

 ರೈತರಿಗೆ ಕಡಿಮೆ ಖರ್ಚಿನಲ್ಲಿ ಕಡಿಮೆ ನೀರಿನಲ್ಲಿ ಹೆಚ್ಚು ಉತ್ಪಾದನೆ ನೀಡುವ ತಳಿಗಳನ್ನು ವಿಜ್ಞಾನಿಗಳು ಹೆಚ್ಚು ಹೊರ ತರಬೇಕಿದೆ ಎಂದರು. 

 ಕೃಷಿ ವಿಶ್ವವಿದ್ಯಾಲಯದ ನೂತನ ಕುಲಪತಿ ಡಾ. ಪಿ.ಎಲ್. ಪಾಟೀಲ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಆರ್ಥಿಕ ಇಳುವರಿ ಪಡೆಯಲು ಅಭಿವೃದ್ಧಿಪಡಿಸಿದ 40 ಬೇಸಾಯ ತಂತ್ರಜ್ಞಾನಗಳನ್ನು ರೈತರಿಗೆ ಬಿಡುಗಡೆ ಮಾಡಲಾಗಿದೆಯೆಂದರು. ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ 5 ಹೊಸ ಸಂಶೋಧನಾ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳಿಗೆ 274 ಕೋಟಿ ಅನುದಾನದ ಯೋಜನೆಗಳು ಪ್ರಗತಿಯಲ್ಲಿವೆ. ರಾಜ್ಯ ಸರ್ಕಾರದಿಂದ 332 ಕೋಟಿ ರೂ.ಗಳ 3 ಹೊಸ ಸಂಶೋಧನಾ ಕಾರ್ಯಕ್ರಮಗಳು ಪ್ರಗತಿಯಲ್ಲಿವೆಯೆಂದರು. ವಿಶ್ವಬ್ಯಾಂಕ್ ನೆರವಿನ ಜಲಾನಯ ಅಭಿವೃದ್ಧಿ ಇಲಾಖೆಯ ರಿವಾರ್ಡ್ ಯೋಜನೆಯಡಿ ಒಟ್ಟು 272 ಕೋಟಿ ರೂ.ಗಳ ಯೋಜನೆ ಪ್ರಗತಿಯಲ್ಲಿದೆಯೆಂದು ಡಾ. ಪಾಟೀಲ ತಿಳಿಸಿದರು.

 ದೆಹಲಿಯ ಭಾರತೀಯ ಕೃಷಿ ಅನುಸಂಧಾನ ಪರಿಷತ್‍ನ ಮಹಾನಿರ್ದೇಶಕರಾದ ಡಾ.ಸುರೇಶಕುಮಾರ ಚೌಧರಿ ಮಾತನಾಡಿ, ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಕೊಡುಗೆ, ಸ್ಥಾನಮಾನ ಸಂಶೋಧನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿವಿಧ ಹೊಸ ಸಂಶೋಧನೆಗಳು, ಮಳೆಯಾಶ್ರಿತ ಪ್ರದೇಶದ ರಿವಾರ್ಡ್ ಯೋಜನೆಗಳು ಇಡೀ ರಾಜ್ಯಕ್ಕೆ ಮಾದರಿಯಾಗಲಿವೆ ಎಂದರು. 

ಶಾಸಕರಾದ ಅರವಿಂದ ಬೆಲ್ಲದ, ಮಹಾಪೌರರಾದ ಈರೇಶ ಅಂಚಟಗೇರಿ, ಶಾಸಕರಾದ ಶಾಂತಾರಾಮ ಸಿದ್ಧಿ, ಬಯಲು ಸೀಮೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ತವನಪ್ಪ ಅಷ್ಟಗಿ ಹಾಗೂ ಆಡಳಿತ ಮಂಡಳಿಯ ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. 

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...