ಕೋವಿಡ್ ಸೋಂಕಿತರು ಮೃತಪಟ್ಟರೇ ಮನಾಪಾಲಿಕೆಯಿಂದ ಅಂತ್ಯಸಂಸ್ಕಾರದ ವೆಚ್ಚ: ಶಾಸಕ ವೇದವ್ಯಾಸ ಕಾಮತ್.

Source: SO News | By Laxmi Tanaya | Published on 21st April 2021, 11:09 PM | Coastal News |

ಮಂಗಳೂರು :  ಮಹಾನಗರ ಪಾಲಿಕೆ ವ್ಯಾಾಪ್ತಿಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರದ ವೆಚ್ಚವನ್ನು ಮಂಗಳೂರು ಮಹಾನಗರ ಪಾಲಿಕೆ ಭರಿಸಲಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ಮಂಗಳವಾರ ಸಂಸದರ ವಾರ್ ರೂಂನಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ.

ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ೨ ವಿದ್ಯುತ್ ಚಿತಾಗಾರಗಳಿವೆ.
ಅದರಲ್ಲಿ ತಾಂತ್ರಿಕ ಕಾರಣಗಳಿಂದ ಬೋಳೂರಿನ ಚಿತಾಗಾರ ಕಾರ್ಯ ನಿರ್ವಹಿಸದಿರುವ ಕಾರಣ
ಕಟ್ಟಿಗೆಯ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನಡೆಯುತ್ತಿದೆ. ಇದಕ್ಕೆ ೮ ಸಾವಿರ
ರು. ದರವಿದ್ದುದನ್ನು ೫,೫೦೦ ರು.ಗೆ ಇಳಿಕೆ ಮಾಡಲಾಗಿದೆ. ಆದರೆ ಕೋವಿಡ್ ಸಾವಿನ
ಸನ್ನಿವೇಶಗಳಲ್ಲಿ ದುಪ್ಪಟ್ಟು ಹಣ ಕೇಳುತ್ತಾರೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದೆ. ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರದ ವೆಚ್ಚವನ್ನು ಮಹಾನಗರ ಪಾಲಿಕೆಯೇ ಭರಿಸುವಂತೆ ಮೇಯರ್ ಹಾಗೂ ಆಯುಕ್ತರ ಜೊತೆ
ಮಾತುಕತೆ ನಡೆಸಿ ಸೂಚನೆ ನೀಡಲಾಗಿದೆ.

ಕೋವಿಡ್ ಸಂಕಷ್ಟದ ಸನ್ನಿವೇಶದಲ್ಲಿ ಸಂಸದರು, ಶಾಸಕರು ಹಾಗೂ ಮೇಯರೇ ಅವರು ಕೈಗೊಂಡ ಈ ಕ್ರಮಕ್ಕೆ
ಸಾರ್ವಜನಿಕ ವಲಯದಿಂದ ಅಭಿನಂದನೆ ವ್ಯಕ್ತವಾಗಿದೆ.

ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್,ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ನಿತಿನ್ ಕುಮಾರ್, ಮೈಸೂರು ಎಲೆಕ್ಟ್ರಿಕಲ್ ಲಿಮಿಟೆಡ್ ಅದ್ಯಕ್ಷರಾದ ಸಂತೋಷ್ ರೈ ಬೋಳಿಯಾರು, ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಜೀ, ಬಿಜೆಪಿ ಜಿಲ್ಲಾಧ್ಯಕ್ಷ  ಸುದರ್ಶನ ಎಂ, ಮಂಗಳೂರು ನಗರ ದಕ್ಷಿಣ ಮಂಡಲ ಬಿಜೆಪಿ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ, ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಲೀಲಾವತಿ ಪ್ರಕಾಶ್, ಸಂದೀಪ್ ಗರೋಡಿ, ಪಾಲಿಕೆ ಮುಖ್ಯ ಸಚೇತಕರಾದ ಸುಧೀರ್ ಶೆಟ್ಟಿ ಕಣ್ಣೂರು, ಪಾಲಿಕೆ ಸದಸ್ಯರಾದ ದಿವಾಕರ್ ಪಾಂಡೇಶ್ವರ, ಪೂರ್ಣಿಮಾ, ಜಗದೀಶ್ ಶೆಟ್ಟಿ ಬೋಳೂರು, ಶಕಿಲಾ ಕಾವಾ, ಮನೋಹರ್ ಶೆಟ್ಟಿ, ಶೈಲೇಶ್ ಶೆಟ್ಟಿ ಅತ್ತಾವರ, ಭರತ್, ಗಣೇಶ್ ಕುಲಾಲ್, ವೀಣಾ ಮಂಗಲ, ಪಾಲಿಕೆ ನಾಮ ನಿರ್ದೇಶಿತ ಸದಸ್ಯರಾದ ರಾಧಾಕೃಷ್ಣ, ಭಾಸ್ಕರ್ ಚಂದ್ರ ಶೆಟ್ಟಿ, ರಮೇಶ್ ಕಂಡೆಟ್ಟು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ‌ಪ್ರಧಾನ ಕಾರ್ಯದರ್ಶಿ ರೂಪಾ ಡಿ. ಬಂಗೇರ, ಸುರೇಂದ್ರ ಜಪ್ಪಿನಮೊಗರು, ಬಿಜೆಪಿ ಮುಖಂಡರಾದ ಮೋನಪ್ಪ ಭಂಡಾರಿ, ಡಾ. ಅಣ್ಣಯ್ಯ ಕುಲಾಲ್, ಸಂಜಯ್ ಪ್ರಭು, ಜಿತೇಂದ್ರ ಕೊಟ್ಟಾರಿ, ಡಾ. ಜಿ.ಕೆ ಭಟ್, ಸುಜನ್ ದಾಸ್ ಕುಡುಪು, ರಘು ಸಾಲ್ಯಾನ್, ಜಮಾಲ್, ನೀರಜ್ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...