ಗಾಂಧಿಜಿಯವರ 150ನೇ ಜಯಂತಿ ಆಚರಣೆ ಸ್ವಚ್ಛತಾ ಆಂದೋಲನ ನಿರಂತರವಾಗಿ ನಡೆಯಲಿ ಸಚಿವೆ ಶಶಿಕಲಾ ಜೊಲ್ಲೆ

Source: S O News Service | By I.G. Bhatkali | Published on 2nd October 2019, 2:13 PM | Coastal News |

ಕಾರವಾರ :  ಸ್ವಚ್ಛತಾ ಆಂದೋಲನ ಕೇವಲ ದಿನಾಚರಣೆಗೆ ಮಾತ್ರ ಸೀಮಿತಗೊಳಿಸದೇ ಅದು ನಿರಂತರವಾಗಿ ನಡೆಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಅವರು ಹೇಳಿದರು.

ಅವರು ಮಂಗಳವಾರ ರವೀಂದ್ರನಾಥ ಠಾಗೋರ ಕಡಲತೀರದಲ್ಲಿ ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾದ ಸ್ವಚ್ಛತಾ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿ ಕಳೆದ ನಾಲ್ಕು ವರ್ಷಗಳಿಂದ ಮಹಾತ್ಮ ಗಾಂಧಿಜಿಯವರ ಜನ್ಮ ದಿನಾಚರಣೆ ಅಂಗವಾಗಿ ಸ್ವಚ್ಛತಾ ಆಂದೋಲನ ಹಮ್ಮಿಕೊಳ್ಳಲಾಗುತ್ತಿದೆ. ಈ ವರ್ಷದಿಂದ ಪ್ಲಾಸ್ಟಿಕ್ ಮುಕ್ತ ಪರಿಸರ ಮಾಡುವ ಸಂಕಲ್ಪ ಹೊಂದಲಾಗಿದೆ.   ಕೇವಲ ಸರಕಾರದಿಂದ ಮಾತ್ರ ಪ್ಲಾಸ್ಟಿಕ್ ನಿಯಂತ್ರಣಕ್ಕೆ ತರಲು ಸಾಧ್ಯವಾಗುವಂತಹದ್ದಲ್ಲ. ಇದಕ್ಕೆ ಎಲ್ಲರೂ ಕೈ ಜೋಡಿಸಬೇಕು. ನಮ್ಮಿಂದಲೇ ಎಂದು ಪ್ರಾರಂಭಿಸಬೇಕು. ಈ ಸ್ವಚ್ಛತಾ ಆಂದೋಲನದಲ್ಲಿ ಪ್ರತಿಯೊಬ್ಬರು ಸ್ವಯಂ ಪ್ರೇರಣೆಯಿಂದ ಭಾಗವಹಿಸಬೇಕು. ಗಾಂಧಿಜಿಯವರು ಗ್ರಾಮ ಸ್ವರಾಜ್ಯ ಮತ್ತು ಸ್ವಚ್ಚ ಗ್ರಾಮ, ಶ್ರಮದಾನದ ಕನಸು ಕಂಡವರು. ಅವರ ಕನಸಿನ ಕಲ್ಪನೆ ನಮಗೆ ಆದರ್ಶವಾಗಬೇಕಿದೆ. ಅದನ್ನು ನನಸಾಗಿಸುವುದು ನಮ್ಮೆಲ್ಲರ ಜವಾಭ್ದಾರಿಯಾಗಿದೆ.  ಮಹಾತ್ಮ ಗಾಂಧಿ ಮತ್ತು ಲಾಲಬಹದ್ದೂರ ಶಾಸ್ತ್ರಿಯವರ ಆದರ್ಶಗಳನ್ನು ಅಳವಡಿಸಿಕೊಂಡಾಗ ಮಾತ್ರ ಅವರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಿದಂತಾಗುತ್ತದೆ ಎಂದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕಿ ರೂಪಾಲಿ ನಾಯ್ಕ ಮಾತನಾಡಿ, ಮಹಾತ್ಮಾ ಗಾಂಧೀಜಿಯವರು ಹಾಕಿ ಕೊಟ್ಟಂತಹ ಸನ್ಮಾರ್ಗದಲ್ಲಿ ನಡೆದು ಅವರ ಸ್ವಚ್ಚ ದೇಶದ ಕನಸನ್ನು ನನಸಾಗಿ ಮಾಡಬೇಕು. ಇದನ್ನು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸದೇ, ಪ್ರತಿ ದಿನ ಒಣ ಕಸ ಹಸಿ ಕಸ ಎಂದು ಬೆರ್ಪಡಿಸಿ, ನಾಗರಿಕರೆಲ್ಲರೂ ಸ್ವಯಂ ಪ್ರೇರಿತರಾಗಿ ಸ್ವಚ್ಚತೆಗೆ ಸಹಕರಿಸಬೇಕೆಂದರು. 

  ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಅಧಿಕಾರಿ ಸಿಬ್ಬಂದಿಗಳು, ಸಾರ್ವಜನಿಕರು ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ರವೀಂದ್ರನಾಥ ಠಾಗೋರ ಕಡಲತೀರವನ್ನು ಸ್ವಚ್ಛಗೊಳಿಸುವದರ ಮೂಲಕ ಮಹಾತ್ಮ ಗಾಂಧಿಜಿಯವರ 150ನೇ ಜನ್ಮ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದರು. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,  ನಗರಸಭೆ ಕಾರವಾರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಗಾಂಧಿಜಿಗೆ ನಮನ :  ನಗರಸಭೆ ಉದ್ಯಾನದಲ್ಲಿರುವ ಗಾಂಧಿ ಪ್ರತಿಮೆಗೆ ನಮನ ಸಲ್ಲಿಸುವ ಮೂಲಕ ಸಚಿವೆ ಶಶಿಕಲಾ ಜೊಲ್ಲೆ ಗಾಂಧಿ ಜಯಂತಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.

 ಕಾರವಾರ ತಾಲೂಕ ಪಂಚಾಯತ ಅಧ್ಯಕ್ಷೆ ಪ್ರಮೀಳಾ ನಾಯ್ಕ, ಜಿಲ್ಲಾಧಿಕಾರಿ ಡಾ.ಹರೀಶಕುಮಾರ ಕೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ರೋಶನ್,  ಜಿಲ್ಲಾ ಪೊಲೀಸ್‍ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜ, ನಗರಸಭೆ ಪೌರಾಯುಕ್ತ ಎಸ್.ಯೋಗೇಶ್ವರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read These Next

ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ರಾಸಾಯನಿಕ ಬಳಕೆ ಕುರಿತು ವ್ಯಾಪಕವಾಗಿ ಪರಿಶೀಲಿಸಿ : ಜಿಲ್ಲಾಧಿಕಾರಿ

ಕಾರವಾರ :ಜಿಲ್ಲೆಯಲ್ಲಿನ ಆಹಾರ ತಯಾರಿಕಾ ಘಟಕಗಳು, ಬೀದಿ ಬದಿ ವ್ಯಾಪಾರಿಗಳು ತಯಾರಿಸುವ ಆಹಾರ ಪದಾರ್ಥಗಳಲ್ಲಿ ಸಾರ್ವಜನಿಕರ ಆರೋಗ್ಯದ ...

ಮಳೆಗಾಲದಲ್ಲಿ ಮುನ್ನೆಚ್ಚರಿಕೆ; ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರವಹಿಸಲು ಆರೋಗ್ಯ ಇಲಾಖೆಗೆ ಜಿಲ್ಲಾಧಿಕಾರಿ ಸೂಚನೆ

ಮಳೆಗಾಲದಲ್ಲಿ ಕಂಡು ಬರಬಹುದಾದ ಡೆಂಗಿ, ಚಿಕುನ್ ಗುನ್ಯಾ, ಮಲೇರಿಯಾ, ಮಿದುಳು ಜ್ವರ ಮತ್ತಿತರ ರೋಗಗಳ ಲಕ್ಷಣಗಳು, ಅವುಗಳ ಹರಡುವಿಕೆ ಹಾಗೂ ...

ಸರ್ಕಾರದಿಂದ ಕೋಟಿಗಟ್ಟಲೆ ಅನುದಾನ ಬಂದರೂ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಭಟ್ಕಳ ತಾಲೂಕು

ನೀರಿನ ಸಮಸ್ಯೆಯಿಂದಾಗಿ ಭಟ್ಕಳದ ನಗರ ಮತ್ತು ಗ್ರಾಮೀಣ ಪ್ರದೇಶಗಳ ನಿವಾಸಿಗಳು ಟ್ಯಾಂಕರ್ ಮೂಲಕ ಸರಬರಾಜು ಮಾಡುವ ನೀರಿಗಾಗಿ ಸರತಿ ...