ಕಾರವಾರ: ಗಣೇಶ ಹಬ್ಬದ ಪ್ರಯುಕ್ತ ಹೆಚ್ಚುವರಿ ಸಾರಿಗೆ ವ್ಯವಸ್ಥೆ

Source: S O News service | By I.G. Bhatkali | Published on 7th September 2021, 6:51 PM | Coastal News | Don't Miss |

ಕಾರವಾರ: ಗಣೇಶ ಹಬ್ಬ ಆಚರಿಸಲು ಸರ್ಕಾರವು ಕೋವಿಡ್-19 ಮಾರ್ಗಸೂಚಿಯಂತೆ ಅನುಮತಿ ನೀಡಿದ್ದು, ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಸೆ. 8 ಮತ್ತು 9ರಂದು ಹೆಚ್ಚಿನ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. 

ಹಬ್ಬದ ಪ್ರಯುಕ್ತ ಬೆಂಗಳೂರು ಮತ್ತು ಇತರೇ ಪ್ರಮುಖ ಸ್ಥಳಗಳಿಂದ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಂತ ಊರುಗಳಿಗೆ  ತೆರಳುವವರಿಗೆ ಅನುಕೂಲವಾಗುವಂತೆ ಹೆಚ್ಚುವರಿ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಿದೆ. ಹುಬ್ಬಳ್ಳಿ, ಧಾರವಾಡ, ಹಾವೇರಿ, ಚಿಕ್ಕೋಡಿ, ಗದಗ, ಬೆಳಗಾವಿ, ಬಾಗಲಕೋಟ, ಉತ್ತರ ಕನ್ನಡ, ವಿಭಾಗಗಳ ಪ್ರಮುಖ ಬಸ್ ನಿಲ್ದಾಣಗಳಿಂದ ವಿಶೇಷ ಸಾರಿಗೆ ವ್ಯವಸ್ಥೆ ಕೈಗೊಳ್ಳಲಿದೆ. 

ಗಣೇಶ ಚತುರ್ಥಿ ಹಬ್ಬ ಆಚರಿಸಿ ಮರಳಿ ಬೆಂಗಳೂರು ಹಾಗೂ ಇತರೇ ಸ್ಥಳಗಳಿಗೆ ಹೋಗುವ ಪ್ರಯಾಣಿಕರಿಗಾಗಿ ಸೆ. 12 ಮತ್ತು 13 ರಂದು ಎಲ್ಲಾ ವಿಭಾಗಗಳ ಪ್ರಮುಖ ಬಸ್ ನಿಲ್ದಾಣಗಳಿಂದ ಬೆಂಗಳೂರು ಮತ್ತು ಪ್ರಮುಖ ಸ್ಥಳಗಳಿಗೆ ಹೆಚ್ಚುವರಿಯಾಗಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದ್ದು, ಪ್ರಯಾಣಿಕರು ಮುಂಗಡ ಟಿಕೇಟ್‍ಗಳನ್ನು www.ksrtc.karnataka.gov.in      ವೆಬ್‍ಸೈಟ್‍ನಲ್ಲಿ ಬುಕಿಂಗ್ ಮಾಡಿಕೊಳ್ಳಬಹುದಾಗಿದೆ. 

ಸಾರ್ವಜನಿಕ ಪ್ರಯಾಣಿಕರು ಕೋವಿಡ್-19 ರ ಮಾರ್ಗಸೂಚಿಗಳನ್ನು ಪಾಲಿಸಿ ವಿಶೇಷ ಹೆಚ್ಚುವರಿ ಸಾರಿಗೆ ಸೌಲಭ್ಯದ ಪ್ರಯೋಜನ ಪಡೆಯುವಂತೆ, ವಾ.ಕ.ರ.ಸಾ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಕಾರವಾರ : ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ 2022 ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ

ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ 2022 ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಜಿಲ್ಲೆಯಾದ್ಯಂತ ...

ಕಾರವಾರ: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾನವ ಸಂಪನ್ಮೂಲ ಪಡೆಯಲು ಅಲ್ಪಾವಧಿ ಟೆಂಡರ

ಜಿಲ್ಲಾ ಕನ್ನಡ ಮತ್ತು ಸಂಸ್ಕøತಿ ಇಲಾಖೆಯು 2021-22 ನೇ ಸಾಲಿನ ಕ್ರಿಯಾ ಯೋಜನೆ ಅಡಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಆರು ತಿಂಗಳ ಅವಧಿಗೆ ...

ದಸರಾ ರಜೆಗೆ ಮುರುಡೇಶ್ವರವನ್ನು ತುಂಬಿಕೊಂಡ ಪ್ರವಾಸಿಗರು; ಕಡಲತಡಿಯಲ್ಲಿ ಜನವೋ ಜನ; ವಾಹನ ದಟ್ಟಣೆ ನಿಭಾಯಿಸಲು ಪೊಲೀಸ್ ಸಾಹಸ

ಸರಣಿ ರಜೆಯಿಂದಾಗಿ ವಿಶ್ವ ಪ್ರಸಿದ್ಧ ಪ್ರವಾಸಿ ತಾಣ ಮುರುಡೇಶ್ವರ ಪ್ರವಾಸಿಗರಿಂದ ತುಂಬಿ ಹೋಗಿದೆ. ಕಡಲ ತಡಿಯಲ್ಲಿ ಕಣ್ಣು ...

ಭಟ್ಕಳ: ಶ್ರೀವಲಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪವಿತ್ರಾ ನಾಯ್ಕ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ

ಶ್ರೀವಲಿ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಪವಿತ್ರಾ ಜಯಕರ ನಾಯ್ಕ ದಿಶಾ ಭಾರತ ಸಂಸ್ಥೆ ಹಾಗೂ ಈಸ್ಟ್ ವೆಸ್ಟ್ ...