ಐಸಿಸಿ ಮುಖ್ಯಸ್ಥ ಸ್ಥಾನಕ್ಕೆ ಗಂಗೂಲಿ ಸೂಕ್ತ ವ್ಯಕ್ತಿ: ಕುಮಾರ ಸಂಗಕ್ಕಾರ

Source: uni | Published on 28th July 2020, 12:33 AM | Sports News | Don't Miss |


ನವದೆಹಲಿ: ಚುರುಕಿನ ಮನಸ್ಥಿತಿ ಮತ್ತು ಆಡಳಿತಗಾರನಾಗಿ ಸಾಕಷ್ಟು ಅನುಭವ ಹೊಂದಿರುವ ಸೌರವ್ ಗಂಗೂಲಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ನ (ಐಸಿಸಿ) ಮುಖ್ಯಸ್ಥ ಸ್ಥಾನಕ್ಕೆ ಸೂಕ್ತ ವ್ಯಕ್ತಿ ಎಂದು ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಕುಮಾರ್ ಸಂಗಕ್ಕಾರ ಅಭಿಪ್ರಾಯಪಟ್ಟಿದ್ದಾರೆ.
ನಾನು ಗಂಗೂಲಿ ಅವರ ದೊಡ್ಡ ಅಭಿಮಾನಿ. ಬಿಸಿಸಿಐ ಅಧ್ಯಕ್ಷ ರಾಗಿರುವ ಸೌರವ್ ವಿಶಾಲ ಮನೋಭಾವ ಹೊಂದಿದ್ದು, ಐಸಿಸಿ ಮುಖ್ಯಸ್ಥನ ಹುದ್ದೆಯನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸಬಲ್ಲರು ಎಂದು ಮೆರಿಲ್ ಬೋನ್ ಕ್ರಿಕೆಟ್ ಕ್ಲಬ್ (ಎಂಸಿಸಿ) ಅಧ್ಯಕ್ಷರಾಗಿರುವ ಸಂಗಕ್ಕಾರ ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ.
ಕ್ರಿಕೆಟ್ ಆಟಗಾರರ ಮಧ್ಯೆ ಸಂಬಂಧಗಳನ್ನು ಬೆಸೆಯುವ ಸಾಮರ್ಥ್ಯ ಗಂಗೂಲಿ ಅವರಲ್ಲಿದೆ. ಬಿಸಿಸಿಐ ಅಧ್ಯಕ್ಷರಾಗುವ ಮುಂಚಿತವಾಗಿಯೇ ಅವರಲ್ಲಿ ಈ ಗುಣವನ್ನು ನಾನು ನೋಡಿದ್ದೆ. ಐಸಿಸಿಯಂತಹ ಮಹತ್ವದ ಹುದ್ದೆಗೆ ಇಂತಹ ಗುಣ ಅತ್ಯಗತ್ಯ ಎಂದು ಸಂಗಕ್ಕಾರ ಹೇಳಿದ್ದಾರೆ.
ಐಸಿಸಿ ಮುಖ್ಯಸ್ಥರಾಗಿದ್ದ ಶಶಾಂಕ್ ಮನೋಹರ್ ಈ ತಿಂಗಳ ಆರಂಭದಲ್ಲಿ ಹುದ್ದೆ ತೊರೆದಿದ್ದು, ಮುಂದಿನ ಮುಖ್ಯಸ್ಥರ ಚುನಾವಣೆ ನಡೆಯುವವರೆಗೂ ಉಪ ಮುಖ್ಯಸ್ಥರಾಗಿದ್ದ ಇಮ್ರಾನ್ ಖ್ವಾಜಾ ಹಂಗಾಮಿ ಮುಖ್ಯಸ್ಥನ ಸ್ಥಾನದಲ್ಲಿದ್ದಾರೆ. 
ಈ ಹಿಂದೆ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ ನಿರ್ದೇಶಕ ಗ್ರೇಮ್ ಸ್ಮಿತ್ ಕೂಡಾ ಗಂಗೂಲಿಯನ್ನು ಐಸಿಸಿ ಮುಖ್ಯಸ್ಥನ ಸ್ಥಾನಕ್ಕೆ ಸೂಕ್ತ ಎಂದಿದ್ದರು.ಈ ಕುರಿತಂತೆ ಇತ್ತೀಚಿಗೆ ಪ್ರತಿಕ್ರಿಯಿಸಿದ್ದ ಗಂಗೂಲಿ, ಐಸಿಸಿ ಮುಖ್ಯಸ್ಥನ ಸ್ಥಾನಕ್ಕೆ ಸ್ಪರ್ಧಿಸಲು ಆತುರ ವಿಲ್ಲ ಎಂದಿದ್ದರು

Read These Next

ಮೊದಲ ಬಾರಿ ಟ್ವೆಂಟಿ-20 ವಿಶ್ವಕಪ್ ಗೆದ್ದ ಆಸ್ಟ್ರೇಲಿಯ; ವಾರ್ನರ್, ಮಾರ್ಷ್ ಅಬ್ಬರದ ಬ್ಯಾಟಿಂಗ್

ಆಲ್‌ರೌಂಡರ್ ಮಿಚೆಲ್ ಮಾರ್ಷ್ (ಔಟಾಗದೆ 77, 50 ಎಸೆತ, 6 ಬೌಂಡರಿ, 4 ಸಿಕ್ಸರ್) ಹಾಗೂ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ (53, 38 ಎಸೆತ, 4 ...

ಐತಿಹಾಸಿಕ ಸ್ವರ್ಣ ಗೆದ್ದ ಸುಮಿತ್, ಅವನಿ; ಭಾರತಕ್ಕೆ ಒಂದೇ ದಿನ 2 ಚಿನ್ನ ಸಹಿತ ಐದು ಪದಕ

ಪ್ಯಾರಾಲಿಂಪಿಕ್ ಗೇಮ್ಸ್‌ನಲ್ಲಿ ಪ್ಯಾರಾಲಿಂಪಿಕ್ಸ್ ಅಂಟಿಲ್ ಎಫ್64 ಸ್ಪರ್ಧೆಯಲ್ಲಿ 68.55 ಮೀ.ದೂರಕ್ಕೆ * ಜಾವಲಿನ್ ಎಸೆದು ತನ್ನದೇ ವಿಶ್ವ ...

ಅಬಕಾರಿ ದಾಳಿ: ಅಕ್ರಮ ಮದ್ಯ ವಶ

ಶಿವಮೊಗ್ಗ : ತೀರ್ಥಹಳ್ಳಿಯ ಇಂದಿರಾನಗರ, ತಾಲೂಕಿನ ಮಾರಿಗುಣಿ, ತಲ್ಲೂರು ಅಂಗಡಿ ಕೈಮರ ಗ್ರಾಮಗಳಲ್ಲಿ ಅಬಕಾರಿ ಇಲಾಖೆಯ ಆಯುಕ್ತರು ಹಾಗೂ ...

ಕೋವಿಡ್ ತಜ್ಞರ ಸಮಿತಿ ಸಭೆ. ಎರಡು ಲಸಿಕೆ ಪಡೆದವರಿಗೆ ಗಂಭೀರ ರೋಗ ಲಕ್ಷಣ ಸಾಧ್ಯತೆ ಅತಿ ಕಡಿಮೆ

ಶಿವಮೊಗ್ಗ : ಕೋವಿಡ್ ಮೂರನೇ ಅಲೆಯಲ್ಲಿ ಹಲವೆಡೆ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದರೂ, ಆತಂಕಪಡದೇ ಶಾಲಾ ...