ಗಾಣಿಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಫೆ.7ಕ್ಕೆ

Source: S O News Service | By Office Staff | Published on 28th January 2020, 8:30 PM | Coastal News |

ಹೊನ್ನಾವರ: ತಾಲೂಕಿನ ಹಲವು ಸಾಮಾಜಿಕ ಕಾರ್ಯಕ್ರಮದ ಮೂಲಕ ಜನಮನ್ನಣೆ ಪಡೆದಿರುವ ಶ್ರೀನಿಧಿ ಸೇವಾ ವಾಹಿನಿ ಸಂಘದ ವತಿಯಿಂದ ಗಾಣಿಗ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 
ಫೆಬ್ರವರಿ 7ರಂದು ಬೆಳಿಗ್ಗೆ 10.30ಕ್ಕೆ ಬಾಳೆಗದ್ದೆಯ ಶ್ರೀವೆಂಕಟ್ರಮಣ ಸಭಾಭವನದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ. ಕಳೆದ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ 80ರಷ್ಟು ಅಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಗುವುದು. ಪ್ರತಿಭಾ ಪುರಸ್ಕಾರದ ವಿದ್ಯಾರ್ಥಿಗಳು ದೃಢೀಕೃತ ಅಂಕಪಟ್ಟಿಯೊಂದಿಗೆ ಆಗಮಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆರ್.ಬಿ.ಶೆಟ್ಟಿ (ಮೊ.ಸಂ: 94839 38363) ಅವರನ್ನು ಸಂಪರ್ಕಿಸಬಹುದು ಎಂದು ಶ್ರೀನಿಧಿ ಸೇವಾ ವಾಹಿನಿ ಅಧ್ಯಕ್ಷ ಗೋಪಾಲ ಶೆಟ್ಟಿ ಕವಲಕ್ಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Read These Next

ಭಟ್ಕಳದಲ್ಲಿ ಭಾವೈಕ್ಯತೆ ಮತ್ತು ಧರ್ಮ ಸಮನ್ವಯತೆ ಸಾರುವ ಚೆನ್ನಪಟ್ಟಣ ಶ್ರೀಹನುಮಂತ ದೇವರ ರಥೋತ್ಸವ ಸಂಪನ್ನ

ಭಟ್ಕಳ: ತಾಲೂಕಿನ ಐತಿಹಾಸಿಕ ಚೆನ್ನಪಟ್ಟಣ ಶ್ರೀ ಹನುಮಂತ ದೇವರ ಭಾವೈಕ್ಯದ ಬ್ರಹ್ಮರಥೋತ್ಸವ ಬುಧವಾರ ಸಂಜೆ ಅತ್ಯಂತ ಸಡಗರ ...