ಚೀನಾದಲ್ಲಿ ಅನಿಲ ಸ್ಫೋಟ: 11 ಸಾವು, 37 ಜನರಿಗೆ ಗಾಯ

Source: PTI | By MV Bhatkal | Published on 13th June 2021, 4:54 PM | National News | Don't Miss |

ಬೀಜಿಂಗ್:  ಮಧ್ಯ ಚೀನಾದ ಹುಬೈ ಪ್ರಾಂತ್ಯದಲ್ಲಿ ಭಾನುವಾರ ಸಂಭವಿಸಿದ ಭಾರಿ ಅನಿಲ ಸ್ಫೋಟದಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಮತ್ತು 37 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕೃತ ಮಾಧ್ಯಮ ವರದಿ ಮಾಡಿದೆ.
ಶಿಯಾನ್ ಜಿಲ್ಲೆಯ ಶಿಯಾನ್ ತರಕಾರಿ ಮಾರುಕಟ್ಟೆ ಬಳಿ ಸ್ಥಳೀಯ ಕಾಲಮಾನ 6.30 ವೇಳೆಗೆ ಸ್ಫೋಟ ಸಂಭವಿಸಿದ್ದು, ಅನೇಕ ಕಟ್ಟಡಗಳಿಗೆ ಹಾನಿಯಾಗಿದೆ ಎಂದು ಸಿಜಿಟಿನ್ ಟಿವಿ ವರದಿ ಮಾಡಿದೆ. 
ಅನೇಕ ನಿವಾಸಿಗಳು ಮಾರುಕಟ್ಟೆಯಲ್ಲಿ ತರಕಾರಿಗಳನ್ನು ಖರೀದಿಸುತ್ತಿದ್ದಾಗ, ಕೆಲವರು ಉಪಹಾರ ಸೇವಿಸುತ್ತಿದ್ದಾಗ ಶಿಯಾನ್‌ ನ ಯಾನ್ಹು ಮಾರುಕಟ್ಟೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಹಾಂಗ್ ಕಾಂಗ್ ಮೂಲದ ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿದೆ. 
ಘಟನೆ ನಂತರ ಅನೇಕ ಮಂದಿ ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿರುವ ಸಾಧ್ಯತೆಯಿದೆ ಎಂದು ನಗರದ ಮುನ್ಸಿಪಲ್ ಅಧಿಕಾರಿಗಳು ಹೇಳಿದ್ದಾರೆ. ಕಟ್ಟಡ ಅವಶೇಷಗಳನ್ನು ತೆರವುಗೊಳಿಸುವಲ್ಲಿ ರಕ್ಷಣಾ ಸಿಬ್ಬಂದಿಗಳು ಮುಂದಾಗಿರುದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿರುವ ಹಲವು ಫೋಟೋಗಳಿಂದ ತಿಳಿದುಬಂದಿದೆ.  ಘಟನೆ ಬಗ್ಗೆ ತನಿಖೆ ಮುಂದುವರೆದಿದೆ.

 

 

 

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...