ಹೊನ್ನಾವರ ಬಳಿ ಭೀಕರ ರಸ್ತೆ ಅಪಘಾತ ಐವರ ದುರ್ಮರಣ

Source: sonews | By Staff Correspondent | Published on 15th September 2018, 9:56 PM | Coastal News | State News | Incidents | Don't Miss |

ಹೊನ್ನಾವರ: ಟೆಂಪೋ ಹಾಗೂ ಗ್ಯಾಸ್ ಟ್ಯಾಂಕರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟಿದ್ದು ಹದಿನೈದಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಉತ್ತರನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕರ್ಕಿ ರಾಷ್ಟ್ರೀಯ ಹೆದ್ದಾರಿ (66)ರ ಕರ್ಕಿ ಮಠದ ಬಳಿ ಘಟನೆ ನಡೆದಿದೆ.

ರಸ್ತೆ ಅವಘಡದಲ್ಲಿ ಮೃತಪಟ್ಟವರನ್ನು ಕುಮಟಾ ತಾಲೂಕಿನ ಬಗ್ಗೋಣದ ಕಮಲಾಕರ ಭಂಡಾರಿ(೫೦), ಹೊನ್ನಾವರ ಕರ್ಕಿಯ ಮೋಹನ ಮೇಸ್ತಾ (೫೦), ಕುಮಟಾ ನಾಗೂರಿನ  ಸಮಂತ ಮಡಿವಾಳ (೩೪), ಸಿಂಚನಾ ಮಡಿವಾಳ (೬), ಹೊನ್ನಾವರ ನಗರೆಯ ನಾಗರಾಜ ನಾಯ್ಕ (೨೬) ಎಂದು ಗುರುತಿಸಲಾಗಿದೆ.

ಗಾಯಗೊಂಡವರನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ.

ಕುಮಟಾದಿಂದ ಹೊನ್ನಾವರ ಕಡೆ ತೆರಳುತ್ತಿದ್ದ  ಪ್ಯಾಸೆಂಜರ್ ಟೆಂಪೊ ಹಾಗೂ ಹೊನ್ನಾವರದಿಂದ ಕಾರವಾರ ಕಡೆ ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ನಡುವೆ ಈ ಅಪಘಾತ ಸಂಭವಿಸಿದ್ದು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

Read These Next

ಪ್ರಕೃತಿ ರಕ್ಷಣೆಗೆ  ಪ್ರತಿಯೊಬ್ಬರು ಎರಡು ಸಸಿಗಳನ್ನು ನೆಡಬೇಕು: ನೀಲಕಂಠಮಠದ ಮಹಾಸ್ವಾಮಿ

ಜೂನ್ ತಿಂಗಳು ಮುಗಿಯುತ್ತಾ ಬಂತು. ಆದರೆ ಸಮರ್ಪಕವಾದ ಮಳೆ ಮಾತ್ರ ಈವರೆಗೂ ಆಗಿಲ್ಲ. ಇದಕ್ಕೆಲ್ಲ ಅರಣ್ಯ ಸಂಪತ್ತಿನ ನಾಶವೇ ಕಾರಣ. ...

ಕೂರ್ಮಗಡ ದೋಣಿ ದುರಂತ; ಇದುವರೆಗೆ ೧೪ ಮೃತದೇಹ ಪತ್ತೆ;  ೧೯ ಜನರ ರಕ್ಷಣೆ; ಇಬ್ಬರ ಮೃತದೇಹಕ್ಕಾಗಿ ಶೋಧ

ಕಾರವಾರ: ೨೦೧೯ನೇ ವರ್ಷದ ಆರಂಭದಲ್ಲೇ ಉತ್ತರಕನ್ನಡ ಜಿಲ್ಲೆಯ ಕೂರ್ಮಗಡ ದೋಣಿ ದುರಂತ ಅತ್ಯಂತ ಭಯಾನಕವಾಗಿದ್ದು ೧೬ಮಂದಿಯನ್ನು ...