ಹೊಸದಿಲ್ಲಿ: ಶೇ.7.3ರಷ್ಟು ಕುಗ್ಗಿದ ಜಿಡಿಪಿ, ನಾಲ್ಕು ದಶಕಗಳಲ್ಲೇ ಅತ್ಯಧಿಕ ಕುಸಿತ

Source: VB | By S O News | Published on 1st June 2021, 1:15 PM | National News |

ಹೊಸದಿಲ್ಲಿ: ಈ ವರ್ಷದ ಮಾ.31ಕ್ಕೆ ಅಂತ್ಯಗೊಂಡ ನಾಲ್ಕನೇ ತ್ರೈಮಾಸಿಕದಲ್ಲಿ ಭಾರತದ ಒಟ್ಟು ಆಂತರಿಕ ಉತ್ಪನ್ನ (ಜಿಡಿಪಿ ) ದರವು ಶೇ.1.6 ಬೆಳವಣಿಗೆಯನ್ನು ದಾಖಲಿಸಿದೆ. ಆದರೆ 2019-20ನೇ ಸಾಲಿನ ಶೇ.4ಕ್ಕೆ ಹೋಲಿಸಿದರೆ 2020-21ನೇ ಆರ್ಥಿಕ ವರ್ಷದಲ್ಲಿ ಜಿಡಿಪಿ ಬೆಳವಣಿಗೆಯು ಮೈನಸ್ ಶೇ.7.3ರಷ್ಟು ಕುಗ್ಗಿರುವುದಾಗಿ ಅಂದಾಜಿಸಲಾಗಿದೆ.ಇದು ಕಳೆದ 40 ವರ್ಷಗಳಲ್ಲಿ ಗರಿಷ್ಠಮಟ್ಟದ ಮೊದಲ ವಾರ್ಷಿಕ ಆರ್ಥಿಕ ಸಂಕುಚನವಾಗಿದೆ ಎಂದು ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಜಾರಿ ಸಚಿವಾಲಯವು ಸೋಮವಾರ ಬಿಡುಗಡೆಗೊಳಿಸಿರುವ ದತ್ತಾಂಶಗಳು ತೋರಿಸಿವೆ.

2021,ಜ.29ರಂದು ಬಿಡುಗಡೆಗೊಳಿಸಿದ್ದ 2019-20ನೇ ಸಾಲಿನ ಮೊದಲ ಪರಿಷ್ಕೃತ ಜಿಡಿಪಿ ಅಂದಾಜು 145.69 ಲ.ಕೋ.ರೂ.ಗೆ ಹೋಲಿಸಿದರೆ 2020-21ನೇ ಸಾಲಿನಲ್ಲಿ ಜಿಡಿಪಿಯು 135.13 ಲ.ಕೋ.ರೂ.ಆಗಬಹುದು ಎಂದು ಅಂದಾಜಿಸಲಾಗಿದೆ ಎಂದು ಸಚಿವಾಲಯವು ಹೇಳಿಕೆಯಲ್ಲಿ ತಿಳಿಸಿದೆ.

ಕಳೆದ ವರ್ಷ ಕೋವಿಡ್ ಹಿನ್ನೆಲೆಯಲ್ಲಿ ರಾಷ್ಟ್ರಾದ್ಯಂತ ಕಟ್ಟುನಿಟ್ಟಿನ ಲಾಕ್‌ಡೌನ್‌ನಿಂದಾಗಿ ಸತತ ಎರಡು ತ್ರೈಮಾಸಿಕಗಳಲ್ಲಿ ಆರ್ಥಿಕತೆಯು ಸಂಕುಚನಗೊಳ್ಳುವುದರೊಂದಿಗೆ ಭಾರತವು ತನ್ನ ಮೊದಲ ತಾಂತ್ರಿಕ ಹಿನ್ನಡೆಯನ್ನು ಅನುಭವಿಸಿದೆ. 2020-21ನೇ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಆರ್ಥಿಕತೆಯು ಶೇ.24.4ರಷ್ಟು ಕುಸಿತವನ್ನು ದಾಖಲಿಸಿತ್ತು. ಆದರೆ ಎರಡನೇ ತ್ರೈಮಾಸಿಕದಲ್ಲಿ ಆರ್ಥಿಕ ಚಟುವಟಿಕೆಗಳು ಹೆಚ್ಚುವುದರೊಂದಿಗೆ ಜಿಡಿಪಿ ಕುಸಿತವು ಶೇ.7.3ಕ್ಕೆ ಸೀಮಿತಗೊಂಡಿತ್ತು. 2020 ಡಿಸೆಂಬರ್ 31ಕ್ಕೆ ಅಂತ್ಯಗೊಂಡ ಮೂರನೇ ತ್ರೈಮಾಸಿಕದಲ್ಲಿ ಜಿಡಿಪಿಯು ಶೇ.0.4ರಷ್ಟು ಬೆಳವಣಿಗೆ ದರವನ್ನು ದಾಖಲಿಸಿತ್ತು.

ಕೋವಿಡ್ ಎರಡನೇ ಅಲೆಯನ್ನು ಭಾರತವು ಎಷ್ಟು ಬೇಗ ನಿಯಂತ್ರಿಸುತ್ತದೆ ಎನ್ನುವುದನ್ನು ದೇಶದ ಆರ್ಥಿಕತೆಯ ಬೆಳವಣಿಗೆಯು ಈ ಗ ಅವಲಂಬಿಸಿದೆ ಎಂದು ಆರ್ ಬಿಐ ಇತ್ತೀಚಿನ ತನ್ನ ವಾರ್ಷಿಕ ವರದಿಯಲ್ಲಿ ಹೇಳಿದೆ.

ತನ್ಮಧ್ಯೆ ದೇಶದಲ್ಲಿ ನಿರುದ್ಯೋಗ ದರವು ಮೇ 23ಕ್ಕೆ ಅಂತ್ಯಗೊಂಡ ವಾರದಲ್ಲಿ ಸುಮಾರು ಒಂದು ವರ್ಷದ ಗರಿಷ್ಠ ಮಟ್ಟವಾದ ಶೇ.14.73ಕ್ಕೇರಿದೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಇಕಾನಮಿ ತಿಳಿಸಿದೆ.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...