ಜೂನ್ ತ್ರೈಮಾಸಿಕದಲ್ಲಿ ದೇಶದ ಜಿಡಿಪಿಯಲ್ಲಿ ಶೇ.20.1ರಷ್ಟು ಪ್ರಗತಿ

Source: VB | By I.G. Bhatkali | Published on 1st September 2021, 2:11 PM | National News | Don't Miss |

ಹೊಸದಿಲ್ಲಿ: ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ದೇಶದ ಆರ್ಥಿಕತೆಯು ಎರಡಂಕಿಗಳ ಬೆಳವಣಿಗೆಯನ್ನು ಸಾಧಿಸಿದೆ. ಎಪ್ರಿಲ್-ಜೂನ್ ತೈಮಾಸಿಕದಲ್ಲಿ ದೇಶದ ಒಟ್ಟು ಆಂತರಿಕ ಉತ್ಪನ್ನ(ಜಿಡಿಪಿ)ವು ಶೇ.20.1ರಷ್ಟು ಏರಿಕೆಯನ್ನು ದಾಖಲಿಸಿದೆ. ಆದರೆ ಆರ್ಥಿಕತೆಯು ಶೇ.24.4ರಷ್ಟು ಕುಗ್ಗಿದ್ದ ಹಿಂದಿನ ಹಣಕಾಸು ವರ್ಷದ ಎಪ್ರಿಲ್-ಜೂನ್ ತೈಮಾಸಿಕದ ಜಿಡಿಪಿಗೆ ಹೋಲಿಸಿದರೆ ಈ ದಾಖಲೆಯ ಬೆಳವಣಿಗೆಯಾಗಿದೆ ಎನ್ನುವುದನ್ನು ಇಲ್ಲಿ ಗಮನಿಸಬೇಕು.

2021-22ರ ಎಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿಯು ವಿಶ್ಲೇಷಕರು ಮತ್ತು ರೇಟಿಂಗ್ ಏಜೆನ್ಸಿಗಳ ಮುನ್ನಂದಾಜುಗಳಿಗೆ ಅನುಗುಣವಾಗಿದೆ. ರಾಯಿಟರ್ಸ್ ನ 41 ಆರ್ಥಿಕ ತಜ್ಞರು ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿಯಲ್ಲಿ ಶೇ.20ರಷ್ಟು ಏರಿಕೆಯನ್ನು ನಿರೀಕ್ಷಿಸಿದ್ದರು. ದೇಶದ ಜಿಡಿಪಿಯು ಶೇ.21.4ರಷ್ಟು ಬೆಳೆಯಲಿದೆ ಎಂದು ಆರ್‌ಬಿಐ ಭವಿಷ್ಯ ನುಡಿದಿತ್ತು.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...