ಏ.23ರಂದು ಮತದಾನಕ್ಕಾಗಿ ಸಾರ್ವತ್ರಿಕ ರಜೆ ಘೋಷಣೆ

Source: so news | By Manju Naik | Published on 12th April 2019, 12:03 AM | Coastal News | Don't Miss |

 

ಕಾರವಾರ: ಏಪ್ರಿಲ್ 23ರಂದು ಎರಡನೇ ಹಂತದಲ್ಲಿ ನಡೆಯಲಿರುವ ಉತ್ತರ ಕನ್ನಡ ಲೋಕಸಭಾ ಚುನಾವಣೆ ಮತದಾನಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾದ್ಯಂತ ಅಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ಮತದಾರರಿಗೆ ಮತ ಚಲಾಯಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಎಲ್ಲ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳಿ ಒಳಗೊಂಡಂತೆ) ಹಾಗೂ ಸರ್ಕಾರಿ ಸ್ವಾಮ್ಯದ  ಸಂಸ್ಥೆಗಳು ಒಳಗೊಂಡಂತೆ ಎಲ್ಲ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಮತ್ತು ಇನ್ನಿತರೆ ಸಂಶ್ಥೆಗಳಲ್ಲಿ ಖಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಪ್ರಜಾ ಪ್ರತಿನಿಧಿ ಕಾಯ್ದೆಯಡಿ ವೇತನ ಸಹಿತ ರಜೆ ಘೋಷಿಸಿ ಸರ್ಕಾರ ಆದೇಶಿದೆ ಎಂದು ಕಾರವಾರ ಸಹಾಯಕ ಕಮಿಷನರ್ ಪ್ರಕಟಣೆ ತಿಳಿಸಿದೆ.

Read These Next