ಹೊಸ ಪಕ್ಷ ಘೋಷಿಸಿದ ಗುಲಾಂ ನಬಿ ಆಜಾದ್, ಅದರ ಹೆಸರೇನು?

Source: INSA | By MV Bhatkal | Published on 27th September 2022, 12:35 AM | National News |

ಜಮ್ಮು: ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ಇತ್ತೀಚೆಗೆ ಕಾಂಗ್ರೆಸ್ ತೊರೆದ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಸೋಮವಾರ ಹೊಸ ಪಕ್ಷ ಘೋಷಿಸಿದ್ದಾರೆ. ಅದರ ಹೆಸರು ಡೆಮಾಕ್ರಟಿಕ್ ಆಜಾದ್ ಪಾರ್ಟಿ.

ಕಾಂಗ್ರೆಸ್ ಪಕ್ಷದಿಂದ ತೊರೆದ ಸರಿಯಾದ ಒಂದು ತಿಂಗಳಲ್ಲಿ ಹೊಸ ಪಕ್ಷವನ್ನು ಗುಲಾಂ ನಬಿ ಆಜಾದ್ ಘೋಷಿಸಿದ್ದಾರೆ. ಇಂದು ಶ್ರೀನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೊಸ ಪಕ್ಷ ಘೋಷಿಸಿದ ಅವರು, ತಮ್ಮ ನೂತನ ಪಕ್ಷ ಜಾತ್ಯತೀತ. ಪ್ರಜಾಸತ್ತಾತ್ಮಕ ಮತ್ತು ಸ್ವತಂತ್ರವಾಗಿರಲಿದ್ದು ಯಾವುದೇ ಪ್ರಭಾವ, ಆಮಿಷಗಳಿಗೆ ಒಳಗಾಗುವುದಿಲ್ಲ ಎಂದಿದ್ದಾರೆ.
ಪಕ್ಷದ ನೂತನ ಧ್ವಜವನ್ನು ಕೂಡ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದರು. ಅದು ಸಾಸಿವೆ, ಬಿಳಿ ಮತ್ತು ನೀಲಿ ಬಣ್ಣಗಳನ್ನು ಹೊಂದಿದೆ. ಸದ್ಯದಲ್ಲಿಯೇ ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆಯಲಿದೆ

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...