ಗಾಳಿಪಟ ಜೊತೆ ಹಾರಿದ ಮಗು. ಅಂತೂ ಬಚಾವ್.

Source: S O News | By Laxmi Tanaya | Published on 31st August 2020, 4:49 PM | Global News |

ತೈವಾನ್‌ : ತೈವಾನನ ಹ್ಸಿಂಚು ನಗರದಲ್ಲಿ ನಡೆದ ಗಾಳಿಪಟ ಉತ್ಸವದಲ್ಲಿ ‌ಮಗುವೊಂದು ಅಪಘಾತದಿಂದ ಪಾರಾಗಿದೆ.

ಅಂತರಾಷ್ಟ್ರೀಯ ಗಾಳಿಪಟ ಉತ್ಸವದಲ್ಲಿ ಈ ಘಟನೆ ನಡೆದಿದೆ. ಗಾಳಿಪಟದ ಬಾಲದಲ್ಲಿ ಸಿಲುಕಿಕೊಂಡು ಮಗು 30 ಸೆಂಕೆಂಡ್ ಕಾಲ  ಗಾಳಿಯಲ್ಲಿ ಹಲವು ಬಾರೀ ಡೈವಿಂಗ್ ಮಾಡಿ ಹಾರಾಡಿದೆ. ಬಳಿಕ ಕೆಳಕ್ಕೆ ಬಂದಾಗ ಮಗುವನ್ನ ರಕ್ಷಿಸಲಾಗಿದೆ. ಘಟನೆಯಲ್ಲಿ ಮಗುವಿಗೆ  ಸಣ್ಣಪುಟ್ಟ ಗಾಯವಾಗಿದೆ. ಘಟನೆಯ ಚಿತ್ರಣ  ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ತೈವಾನ್‌ನ ಹ್ಸಿಂಚು ನಗರದಲ್ಲಿ ಅಂತರರಾಷ್ಟ್ರೀಯ ಗಾಳಿಪಟ ಉತ್ಸವ ನಡೆಯುತ್ತಿದೆ. ಬಾಲಕಿ ದೊಡ್ಡ ಗಾಳಿಪಟದ ಬಾಲದಲ್ಲಿ ಸಿಲುಕಿಕೊಂಡು ಹಲವಾರು ಬಾರಿ ಡೈವಿಂಗ್ ಮಾಡಿದ ನಂತರ  ಕೆಳಗೆ ಬಂದಾಗ, ಜನರು ಅವಳನ್ನು ಹಿಡಿದು ರಕ್ಷಿಸಿದ್ದಾರೆ.  ಈ ಘಟನೆಗೆ ಬಗ್ಗೆ ಹ್ಸಿಂಚು ನಗರ ಮೇಯರ್ ಲಿನ್ ಚಿ-ಚೆನ್ ಫೇಸ್‌ಬುಕ್‌ನಲ್ಲಿ ಕ್ಷಮೆಯಾಚಿಸಿದ್ದಾರೆ.

Read These Next

ಕಾಬೂಲ್: ಅಫ್ಘಾನಿಸ್ತಾನ: ಕಂದಹಾರ್‌ಗೆ ತಾಲಿಬಾನ್ ಲಗ್ಗೆ ಭಾರತದಿಂದ ರಾಯಭಾರ ಕಚೇರಿ ತೆರವು

ಅಫ್ಘಾನಿಸ್ತಾನದ ದಕ್ಷಿಣ ಪ್ರಾಂತದ ಕಂದಹಾರ್ ನಲ್ಲಿ ಇನ್ನಷ್ಟು ಪ್ರದೇಶ ತಾಲಿಬಾನ್ ಪಡೆಗಳ ನಿಯಂತ್ರಣಕ್ಕೆ ಬಂದಿದ್ದು ನಗರದಲ್ಲಿ ...

ರಿಯೊಡಿಜನೈರೊ: ಕೋವ್ಯಾಕ್ಸಿನ್ ಖರೀದಿ ಒಪ್ಪಂದ ವಿವಾದ: ಬ್ರೆಝಿಲ್ ಅಧ್ಯಕ್ಷರ ವಿರುದ್ಧ ತನಿಖೆಗೆ ಸುಪ್ರೀಂ ಒಪ್ಪಿಗೆ

ಭಾರತದಿಂದ ಕೋವ್ಯಾಕ್ಸಿನ್ ಲಸಿಕೆ ಖರೀದಿ ಪ್ರಕ್ರಿಯೆಯಲ್ಲಿ ಕರ್ತವ್ಯಲೋಪ ಎಸಗಿದ ಆರೋಪ ಎದುರಿಸುತ್ತಿರುವ ಬ್ರೆಝಿಲ್ ಅಧ್ಯಕ್ಷ ಜೈರ್ ...

ಹಜ್ಜ್ ಯಾತ್ರೆಗೆ ಹೊರಗಿನವರಿಗೆ ಪರ್ವೇಶ್ ವಿಲ್ಲಾ; ಈ ವರ್ಷವು ಸೀಮಿತ್ ಮಂದಿಗೆ ಅವಕಾಶ'

ಕೊರೊನಾ ಸೋಂಕಿನಿಂದಾಗಿ ಈ ಬಾರಿ ಹಜ್ ಯಾತ್ರೆಗೆ ಸೌದಿ ಅರೇಬಿಯಾದ  60 ಸಾವಿರ ಮಂದಿಗೆ ಮಾತ್ರ ಅವಕಾಶ ಕಲ್ಪಿಸಿ ಸೌದಿ ಅರೇಬಿಯಾ ಸರ್ಕಾರ ...

ಏ.10 ರಿಂದ 20 ರ ವರೆಗೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೊರೋನಾ ಕರ್ಫ್ಯೂಜಾರಿ-ಜಿಲ್ಲಾಧಿಕಾರಿ

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂದಿಸಿದಂತೆ ಜಿಲ್ಲಾಡಳಿತ ಎಲ್ಲಾ ಅವಶ್ಯ ಕ್ರಮಗಳನ್ನು ...