ಸಂವಿಧಾನ ಪೀಠಿಕೆಯ ಜಾಗತಿಕ ವಾಚನ; ಮನುಸೃತಿಯಿಂದ ಗುಲಾಮ ಪದ್ದತಿ ಜಾರಿ; ಮುಖ್ಯಮಂತ್ರಿ ಸಿದ್ದರಾಮಯ್ಯ

Source: Vb | By I.G. Bhatkali | Published on 16th September 2023, 12:59 AM | State News |

ಬೆಂಗಳೂರು: ಸಂವಿಧಾನವನ್ನು ನಾಶಪಡಿಸಿ ಮನುಸ್ಮೃತಿ ಜಾರಿಯಾದಲ್ಲಿ ಭಾರತೀಯರು ಗುಲಾಮ ಪದ್ಧತಿಯಲ್ಲಿ ಸಿಲುಕಿಕೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದರು.

ಅಂತರ್‌ರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆ ಶುಕ್ರವಾರ ವಿಧಾನಸೌಧದ ವಿಧಾನಸೌಧದ ಆವರಣದಲ್ಲಿ ಆಯೋಜಿಸಿದ್ದ ಭಾರತದ ಸಂವಿಧಾನ ಪೀಠಿಕೆಯ ಜಾಗತಿಕ ವಾಚನದ ಕಾರ್ಯಕ್ರಮವನ್ನು ಸಂವಿಧಾನ ಪೀಠಿಕೆ ಓದುವ ಉದ್ಘಾಟಿಸಿ ಅವರು ಮಾತನಾಡಿದರು. ಮೂಲಕ

ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನ ವನ್ನು ನಾಶಗೊಳಿಸಿ ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ. ಈ ಬಗ್ಗೆ ಎಚ್ಚರ ಮತ್ತು ಜಾಗೃತಿ ಇರಬೇಕು. ಅದೂ ಅಲ್ಲದೆ, ಸಂವಿಧಾನ ನಾಶಪಡಿಸಿ ಮನುಸ್ಮೃತಿ ಜಾರಿ ಎಂದರೆ ಶೇ.90 ರಷ್ಟು ಭಾರತೀಯರನ್ನು ಮತ್ತೆ ಗುಲಾಮಗಿರಿಗೆ ತಳ್ಳುವುದಾಗಿದೆ. ಇದಕ್ಕಾಗಿ ಬಹಳ ಕುತಂತ್ರಗಳು ನಡೆಯುತ್ತಿವೆ ಎಂದು ಎಚ್ಚರಿಸಿದರು.

ನಾವು ಭಾರತೀಯರು ಎನ್ನುವ ಮೂಲಕವೇ ನಮ್ಮ ಸಂವಿಧಾನ ತೆರೆದುಕೊಳ್ಳುತ್ತದೆ ಎಂದ ಅವರು, ಸಂವಿಧಾನದ ಆಶಯಗಳನ್ನು ಪರಿ ಣಾಮಕಾರಿಯಾಗಿ ಅರ್ಥೈಸಿಕೊಂಡು ಪಾಲಿಸ ದಿದ್ದರೆ ಸಮಸಮಾಜ ನಿರ್ಮಾಣ ಸಾಧ್ಯವಿಲ್ಲ. ಸಂವಿಧಾನದ ಸಮಸಮಾಜ ಮತ್ತು ಜಾತ್ಯತೀತ ತತ್ವದ ಆಶಯಗಳಂತೆಯೇ ನಮ್ಮ ಸರಕಾರ ಸರ್ವರ ಏಳಿಗೆಯ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಜನರ ಹಣವನ್ನು ಮತ್ತೆ ಜನರ ಬದುಕಿಗೇ ಮರಳಿಸುವುದು ನಮ್ಮ ಕಾರ್ಯಕ್ರಮಗಳ ಉದ್ದೇಶವಾಗಿದೆ ಎಂದು ಅವರು ಉಲ್ಲೇಖಿಸಿದರು.

ಸಂವಿಧಾನ ಜಾರಿಯಾದ ಬಳಿಕ ಭಾರತದಲ್ಲಿ ಅಧಿಕೃತವಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಾಯಿತು. ಬುದ್ಧ, ಬಸವ ಕಾಲದಿಂದಲೂ ಪ್ರಜಾಪ್ರಭುತ್ವ ವ್ಯವಸ್ಥೆ ನಮ್ಮ ನೆಲದಲ್ಲಿ ರೂಪುಗೊಂಡಿದೆ. ಸಂವಿಧಾನ ಜಾರಿ ಆಗುವ ಸಂದರ್ಭದಲ್ಲಿ ಪಾರ್ಲಿಮೆಂಟಿನಲ್ಲಿ ನಡೆದ ಚರ್ಚೆಗಳು ನಮ್ಮ ಸಂವಿಧಾನದ ಮಹತ್ವಕ್ಕೆ ಮತ್ತು ಸಂವಿಧಾನ ವಿರೋಧಿಗಳ ಮನಸ್ಥಿತಿಗೆ ಕನ್ನಡಿ ಹಿಡಿದಂತಿವೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಕೆ.ಎಚ್.ಮುನಿಯಪ್ಪ, ರಾಮಲಿಂಗಾರೆಡ್ಡಿ, ಶಿವರಾಜ್ ತಂಗಡಗಿ, ಮಂಕಾಳ ವೈದ್ಯ, ಸತೀಶ್ ಜಾರಕಿಹೊಳಿ, ಕೆ.ಜೆ. ಜಾರ್ಜ್, ಈಶ್ವರ್ ಖಂಡ್ರೆ, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಗೋವಿಂದರಾಜು, ವಿಧಾನ ಪರಿಷತ್ ಸದಸ್ಯ ಸುದಾಮ್ ದಾಸ್ ಸೇರಿ ಹಲವರು ಪಾಲ್ಗೊಂಡಿದ್ದರು.

ವಿಶ್ವ ದಾಖಲೆ: ಅಂತ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರಿನ ವಿಧಾನಸೌಧದ ಮುಂಭಾಗ ಆಯೋಜಿಸಿದ್ದ ಸಂವಿಧಾನ ಪೀಠಿಕೆ ಓದು' ಕಾರ್ಯಕ್ರಮವು ವರ್ಲ್ಡ್ ಬುಕ್ ಆಫ್ ರೆಕಾರ್ಡ್ ಹೆಗ್ಗಳಿಕೆಗೆ ಪಾತ್ರವಾಗಿದೆ.

ಮೊದಲೇ ನೋಂದಣಿ ಮಾಡಿಕೊಂಡಿದ್ದ ರಾಜ್ಯ, ದೇಶ, ವಿದೇಶಗಳಿಂದ 2.27 ಕೋಟಿಗೂ ಅಧಿಕ ಸಂಖ್ಯೆಯ ಜನರು ಆನ್ ಲೈನ್ ಮೂಲಕ 'ಸಂವಿಧಾನ ಪೀಠಿಕೆ ಓದು' ಕಾರ್ಯಕ್ರಮದಲ್ಲಿ ಭಾಗಿಯಾದರೆ, ಗ್ರಾಮ ಪಂಚಾಯತ್‌ ನಿಂದ ಹಿಡಿದು ರಾಜ್ಯದ ಆಡಳಿತದ ಶಕ್ತಿ ಕೇಂದ್ರ ವಿಧಾನಸೌಧದ ಸಚಿವಾಲಯದ ವರೆಗಿನ ಎಲ್ಲ ಕಚೇರಿ ಸಂಘ-ಸಂಸ್ಥೆಗಳು, ಶಾಲಾ-ಕಾಲೇಜುಗಳು, ಕಂಪೆನಿಗಳು ಸೇರಿದಂತೆ ಹಲವೆಡೆ ತಾವಿರುವ ಸ್ಥಳದಲ್ಲೇ 'ಸಂವಿಧಾನದ ಪೀಠಿಕೆ ಓದು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಜತೆಗೆ ಆಸ್ಟ್ರೇಲಿಯ, ಅಮೆರಿಕ, ಕೆನಡಾ, ಸೌದಿ ಅರೇಬಿಯ, ಸ್ಪೇನ್, ಸ್ವೀಡನ್, ಜರ್ಮನಿ, ತೈವಾನ್, ಇಟಲಿ ಸೇರಿದಂತೆ ಸುಮಾರು 20 ದೇಶಗಳ ಜನರು ಸಂವಿಧಾನ ಪೀಠಿಕೆಯ ಓದು ಅಭಿಯಾನದಲ್ಲಿ ಭಾರೀ ಸಂಖ್ಯೆಯಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ಲಂಡನ್‌ ಸಂಸ್ಥೆಯ ಸಿಬ್ಬಂದಿ ಸಮಾಜ ಕಲ್ಯಾಣ ಇಲಾಖೆಗೆ ದಾಖಲೆಯ ಪ್ರಮಾಣ ಪತ್ರ ವಿತರಣೆ ಮಾಡಿದರು.

ಈ ಕುರಿತು ಪ್ರತಿಕ್ರಿಯಿಸಿದ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, 'ಈ ಪ್ರಪಂಚವು ಸಮಾನತೆ, ಪ್ರೀತಿ, ವ್ಯಕ್ತಿ ಗೌರವ ಹಾಗೂ ಸಾಮಾಜಿಕ ಭದ್ರತೆಯನ್ನು ಬಯಸುತ್ತಿದ್ದು, ಪ್ರಜಾಪ್ರಭುತ್ವದ ವ್ಯವಸ್ಥೆಯ ಮೇಲೆ ಹೆಚ್ಚಿನ ಭರವಸೆ ಇಟ್ಟಿದೆ. ಭಾರತವು ಜಗತ್ತಿನ ಪ್ರಬಲ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಅಸಮಾನತೆಯನ್ನು ಮೆಟ್ಟಿ, ಸುಸ್ಥಿರ ಅಭಿವೃದ್ಧಿಯ ಕಡೆಗೆ ಗಮನ ಹರಿಸಬೇಕು' ಎಂದು ನುಡಿದರು.

'ಪರಸ್ಪರ ವ್ಯಕ್ತಿ ಗೌರವ, ಘನತೆ, ನ್ಯಾಯ, ಹಕ್ಕುಗಳು, ಸಹಿಷ್ಣುತೆ, ಮಹಿಳಾ ಹಕ್ಕುಗಳ ರಕ್ಷಣೆ, ವಾಕ್ ಸ್ವಾತಂತ್ರ್ಯ ಮತ್ತು ಪತ್ರಿಕಾ ಸ್ವಾತಂತ್ರ್ಯವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಆಗದಂತೆ ಎಲ್ಲರ ಘನತೆಯನ್ನು ಕಾಪಾಡುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಅವರು ತಿಳಿಸಿದರು.

Read These Next

ಜಿಲ್ಲೆಯಲ್ಲಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಶುದ್ಧ ಕುಡಿಯವ ನೀರು ಪೂರೈಸಲು ಅಗತ್ಯ ಕ್ರಮ : ಸಚಿವ ಮಧು ಎಸ್ ಬಂಗಾರಪ್ಪ

ಶಿವಮೊಗ್ಗ : ಪ್ರಸಕ್ತ ಸಾಲಿನ ಮುಂಗಾರು ವಿಫಲವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ...

ಕುಡಿಯುವ ನೀರು-ಜಾನುವಾರು ಮೇವಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಸಚಿವರ ಸೂಚನೆ

ಶಿವಮೊಗ್ಗ : ಮುಂಬರುವ ದಿನಗಳಲ್ಲಿ ತಾಲ್ಲೂಕಿನಲ್ಲಿ ಕುಡಿಯುವ ನೀರು ಹಾಗೂ ಜಾನುವಾರು ಮೇವಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ...

ಐ.ಟಿ.ಎಫ್ ಕಲಬುರಗಿ ಓಪನ್-2023ಗೆ ತೆರೆ. ಕಲಬುರಗಿಯಲ್ಲಿ ಟೆನಿಸ್ ತರಬೇತಿ ಕೇಂದ್ರ ಸ್ಥಾಪಿಸಿ: ಪ್ರಿಯಾಂಕ್ ಖರ್ಗೆ

ಕಲಬುರಗಿ : ರಾಜ್ಯದಲ್ಲಿ ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಟೆನಿಸ್ ಕ್ರೀಡೆಗೆ ಹೆಚ್ಚಿನ ಉತ್ತೇಜನ ನೀಡಲು ಕರ್ನಾಟಕ ರಾಜ್ಯ ...

ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿ.ಪಂ ಸಿಇಓ ಸ್ವರೂಪ ಟಿ.ಕೆ.

ಧಾರವಾಡ : ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮ ಮೂಲಕ ರಾಜ್ಯದಲ್ಲಿ ಮಕ್ಕಳು ಮತ್ತು ಗರ್ಭಿಣಿ ಮಹಿಳೆಯರು ಅನೀಮಿಯಾದಿಂದ ...