ಗೋಕರ್ಣ ಪೂಜಾ ವಿವಾದ: ರಾಮಚಂದ್ರಾಪುರ ಮಠಕ್ಕೆ ಮಹತ್ವದ ಗೆಲುವು

Source: SO News | By Laxmi Tanaya | Published on 26th August 2020, 7:46 PM | Coastal News | State News | National News |

ಗೋಕರ್ಣ: ಕುಮಟಾ ತಾಲೂಕಿನ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಪೂಜೆ ಮಾಡಿಸುವ ಹಾಗೂ ಭಕ್ತರಿಂದ ದಕ್ಷಿಣೆ ಸ್ವೀಕರಿಸಲು ಅನುವು ಮಾಡಿಕೊಡಬೇಕು ಎಂದು ಕೋರಿದ ಅರ್ಜಿ ಸಂಬಂಧ ಕಾರವಾರ ಜಿಲ್ಲಾ ನ್ಯಾಯಾಲಯ ನೀಡಿದ್ದ ಆದೇಶವನ್ನು ರಾಜ್ಯ ಹೈಕೋರ್ಟ್ ನ ಧಾರವಾಡ ಪೀಠ ವಜಾ ಮಾಡಿದೆ.

ಅನಂತ್ ದತ್ತಾತ್ರೇಯ ಅಡಿ ಹಾಗೂ ಇತರ 24 ಮಂದಿ ಸಲ್ಲಿಸಿದ್ದ ಅರ್ಜಿ ಸಂಬಂಧ ಕಾರವಾರ ಜಿಲ್ಲಾ ನ್ಯಾಯಾಲಯ ನೀಡಿದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿದ ರಾಮಚಂದ್ರಾಪುರ ಮಠ ಮತ್ತು ಶ್ರೀಕ್ಷೇತ್ರ ಗೋಕರ್ಣದ ಉಪಾದಿವಂತ ಮಂಡಳಿಗೆ ಜಯ ಸಿಕ್ಕಿದೆ.

ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಪಾರಂಪರಿಕ ಪೂಜೆ ಮಾಡಿಸುವ ಹಾಗೂ ಭಕ್ತರಿಂದ ದಕ್ಷಿಣೆ ಸ್ವೀಕರಿಸಲು ಆಡಳಿತ ಮಂಡಳಿ ಅಡ್ಡಿಪಡಿಸದಂತೆ ಶಾಶ್ವತ ನಿರ್ಬಂಧಕಾಜ್ಞೆ ನೀಡಬೇಕು ಎಂದು ಕೋರಿ ಅರ್ಜಿದಾರರು ಕುಮಟಾ ಸೀನಿಯರ್ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಜತೆಗೆ ತಾತ್ಕಾಲಿಕವಾಗಿ ಪೂಜೆ ಹಾಗೂ ದಕ್ಷಿಣೆ ಸ್ವೀಕಾರಕ್ಕೆ ಅವಕಾಶ ಕೋರಿದ್ದರು. ಇದಕ್ಕೆ ದೇವಾಲಯ ಆಡಳಿತ ಮಂಡಳಿ ಆಕ್ಷೇಪ ಸಲ್ಲಿಸಿತ್ತು.

ಹೈಕೋರ್ಟ್ ಆದೇಶದ ಅನ್ವಯ ಈ ದಾವೆ ವಿಚಾರಣೆಯನ್ನು ಪ್ರಧಾನ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿತ್ತು. ಕಾರವಾರ ನ್ಯಾಯಾಲಯ ಉಭಯ ಪಕ್ಷಗಳ ವಾದವನ್ನು ಆಲಿಸಿ ಅರ್ಜಿದಾರರ ಅರ್ಜಿಯನ್ನು ಭಾಗಶಃ ಪುರಸ್ಕರಿಸಿ ಆದೇಶ ಮಾಡಿತ್ತು.
ಈ ಆದೇಶದ ವಿರುದ್ಧ ದೇವಾಲಯ ಆಡಳಿತವನ್ನು ನೋಡಿಕೊಳ್ಳುತ್ತಿರುವ ಶ್ರೀ ರಾಮಚಂದ್ರಾಪುರ ಮಠ ಮತ್ತು ಶ್ರೀಕ್ಷೇತ್ರ ಗೋಕರ್ಣ ಉಪಾದಿವಂತ ಮಂಡಳಿ ವತಿಯಿಂದ ಪ್ರತ್ಯೇಕ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ನಡೆಸಿದ ಏಕಸದಸ್ಯ ಪೀಠ ಮಹತ್ವದ ಆದೇಶ ಹೊರಡಿಸಿ, ಶ್ರೀಮಠ ಹಾಗೂ ಉಪಾದಿವಂತ ಮಂಡಳಿ ಸಲ್ಲಿಸಿದ ಮೇಲ್ಮನವಿಯನ್ನು ಪುರಸ್ಕರಿಸಿ, ಜಿಲ್ಲಾ ನ್ಯಾಯಾಲಯದ ಆದೇಶವನ್ನು ವಜಾ ಮಾಡಿದೆ. ಜತೆಗೆ ವಾದಿಗಳು ಸಲ್ಲಿಸಿದ್ದ ತಾತ್ಕಾಲಿಕ ಅರ್ಜಿಯನ್ನು ಕೂಡಾ ತಿರಸ್ಕರಿಸಿದೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...