845 ಕಾಮಗಾರಿಗಳನ್ನು ಮುಂದುವರೆಸಲು ಸರ್ಕಾರದ ಅನುಮೋದನೆ: ಕೆ.ಎಸ್.ಗುರುಮೂರ್ತಿ

Source: SO News | By Laxmi Tanaya | Published on 12th October 2020, 5:24 PM | State News | Don't Miss |

ಶಿವಮೊಗ್ಗ : ಪ್ರಸ್ತುತ ಸಾಲಿನಲ್ಲಿ 845ಕಾಮಗಾರಿಗಳನ್ನು ಮುಂದುವರೆಸಲು ಸರ್ಕಾರ ಅನುಮೋದನೆ ದೊರೆತಿದ್ದು, ಬಾಕಿ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು 33ಕೋಟಿ ರೂ. ಅಗತ್ಯವಿದೆ ಎಂದು ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಡಳಿಯ ಸರ್ವ ಸದಸ್ಯರ ಪ್ರಥಮ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.

ಪ್ರಸ್ತುತ ಸಾಲಿನ 845 ಕಾಮಗಾರಿಗಳ ಪೈಕಿ 348ಕಾಮಗಾರಿಗಳು ಪೂರ್ಣಗೊಂಡಿದ್ದು, 23ಕೋಟಿ ರೂ. ಭರಿಸಲಾಗಿದೆ. 497ಕಾಮಗಾರಿಗಳು ವಿವಿಧ ಹಂತದಲ್ಲಿವೆ. ಪ್ರಗತಿಯಲ್ಲಿರುವ ಎಲ್ಲಾ ಕಾಮಗಾರಿಗಳನ್ನು ಇದೇ ಆರ್ಥಿಕ ವರ್ಷದಲ್ಲಿ ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ. 2019-20ನೇ ಸಾಲಿನಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ ತಲಾ 1ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ. ಆದರೆ ಈ ಅನುದಾನ ಇದುವರೆಗೆ ಬಿಡುಗಡೆಯಾಗಿಲ್ಲ ಎಂದು ಅವರು ಹೇಳಿದರು.

ಮಲೆನಾಡಿನಲ್ಲಿ ಒತ್ತುವರಿ ಸಮಸ್ಯೆ, ಅಡಿಕೆ ಬೆಳೆಗಾರರ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳಿವೆ. ಮಂಡಳಿಯಿಂದ ಮುಂದಿನ ದಿನಗಳಲ್ಲಿ ರೈತರಿಗೆ ಅನುಕೂಲಕರವಾದಂತಹ ಯೋಜನೆಗಳನ್ನು ಅನುಷ್ಟಾನಗೊಳಿಸಲು ಉದ್ದೇಶಿಸಲಾಗಿದೆ. ಕೃಷಿ ವಿಜ್ಞಾನಿಗಳ ನೆರವನ್ನು ಪಡೆದು ರೈತರಿಗೆ ತಾಂತ್ರಿಕ ನೆರವನ್ನು ಮಂಡಳಿ ವತಿಯಿಂದ ಒದಗಿಸಲಾಗುವುದು ಎಂದು ಅವರು ಹೇಳಿದರು.

ಒಮ್ಮತದ ತಿರಸ್ಕಾರ: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ವ್ಯಾಪ್ತಿಯಿಂದ ಹೊರಗಿಡುವ ಪ್ರಸ್ತಾಪವನ್ನು ಸಭೆಯಲ್ಲಿ ತಿರಸ್ಕರಿಸಲಾಯಿತು. ಶಿರಸಿ, ಕಾರ್ಕಳದಂತಹ ಕರಾವಳಿಯ ಹಲವು ತಾಲೂಕುಗಳು ಮಲೆನಾಡು ವ್ಯಾಪ್ತಿಯಲ್ಲಿ ಬರುವುದರಿಂದ ಮಂಡಳಿ ವ್ಯಾಪ್ತಿಯಲ್ಲಿ ಮುಂದುವರಿಸುವ ಕುರಿತು ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲು ತೀರ್ಮಾನಿಸಲಾಯಿತು.

ಸಾಲ ಪಡೆಯುವ ಬಗ್ಗೆ ಚರ್ಚೆ: ಮಂಡಳಿಯ ಅಭಿವೃದ್ದಿ ಕಾರ್ಯಗಳಿಗೆ ಕೇವಲ ಸರ್ಕಾರದಿಂದ ಅನುದಾನ ಪಡೆಯುವುದು ಮಾತ್ರವಲ್ಲದೆ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಲು ಬೈಲಾದಲ್ಲಿ ಅವಕಾಶವಿದೆ. ಈ ಹಿನ್ನೆಲೆಯಲ್ಲಿ ನಬಾರ್ಡ್ ಅಥವಾ ವಿಶ್ವಬ್ಯಾಂಕ್‍ನಿಂದ ಸಾಲ ಪಡೆಯುವ ಕುರಿತು ಪ್ರಸ್ತಾವನೆಯನ್ನು ಸಿದ್ಧಪಡಿಸಿ ಯೋಜನಾ ಇಲಾಖೆಯ ಅನುಮೋದನೆಗೆ ಸಲ್ಲಿಸುವ ಕುರಿತು ಶಾಸಕರಾದ ಸುನೀಲ್ ಕುಮಾರ್ ಹಾಗೂ ಕುಮಾರ ಬಂಗಾರಪ್ಪ ಅವರು ಪ್ರಸ್ತಾಪಿಸಿದರು.

ಅನುದಾನಕ್ಕೆ ಮನವಿ: ಮಂಡಳಿಯ ವ್ಯಾಪ್ತಿಯ ಜಿಲ್ಲಾ ಪಂಚಾಯತ್‍ಗಳಿಗೆ ಸಹ ಅಧ್ಯಕ್ಷರ ವಿವೇಚನೆಯಲ್ಲಿ ಅಭಿವೃದ್ಧಿಗಾಗಿ ಅನುದಾನವನ್ನು  ಮಂಜೂರು ಮಾಡಬೇಕು ಶಿವಮೊಗ್ಗ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಎಸ್ ಕುಮಾರ್ ಹಾಗೂ ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಮನವಿ ಮಾಡಿದರು.

ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಎಂಎಡಿಬಿ ಕಾರ್ಯದರ್ಶಿ ಮಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕರಾದ, ಪ್ರಸನ್ನ ಕುಮಾರ್, ಆಯನೂರು ಮಂಜುನಾಥ ಸೇರಿದಂತೆ ಎಂಎಡಿಬಿ ವ್ಯಾಪ್ತಿಯ ಶಾಸಕರು, ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...