ಹೊಸದಿಲ್ಲಿ: ಮಾಧ್ಯಮಗಳಿಂದ ಸರಕಾರದ ಟೀಕೆ ದೇಶದ್ರೋಹವಲ್ಲ: ಸುಪ್ರೀಂ ಕೋರ್ಟ್

Source: VB | By S O News | Published on 1st June 2021, 1:17 PM | National News |

ಹೊಸದಿಲ್ಲಿ: ಸರಕಾರವನ್ನು ಟೀಕಿಸಿ ಟಿವಿ ವಾಹಿನಿಗಳಲ್ಲಿ ಕಾರ್ಯಕ್ರಮ ಪ್ರಸಾರ ಮಾಡುವುದು ಹಾಗೂ ಮುದ್ರಣ ಮಾಧ್ಯಮದಲ್ಲಿ ನಿಲುವುಗಳನ್ನು ಪ್ರಕಟ ಮಾಡುವುದು ದೇಶದ್ರೋಹ ಅಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

ಆಂಧ್ರಪ್ರದೇಶದಲ್ಲಿ ಕೊರೋನ ಪರಿಸ್ಥಿತಿಯನ್ನು ಜಗನ್ ರೆಡ್ಡಿ ಸರಕಾರ ನಿರ್ವಹಿಸಿದ ರೀತಿಯ ಬಗ್ಗೆ ವೈಎಸ್‌ಆರ್‌ಪಿಯ ಬಂಡಾಯ ಸಂಸದ ಕೃಷ್ಣಂ ರಾಜು ಅವರ ವಿಮರ್ಶಾತ್ಮಕ ನಿಲುವನ್ನು ಪ್ರಸಾರ ಮಾಡಿರುವುದಕ್ಕೆ ದೇಶದ್ರೋಹದ ಆರೋಪ ಎದುರಿಸುತ್ತಿರುವ ಟಿವಿ ವಾಹಿನಿಗಳ ವಿರುದ್ಧ ಪೊಲೀಸರು ಬಲವಂತದ ಕ್ರಮಗಳನ್ನು ತೆಗೆದುಕೊಳ್ಳುವುದಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ಕೃಷ್ಣಂ ರಾಜು ಅವರ ನಿಂದನಾತ್ಮಕ ಭಾಷಣವನ್ನು ಪ್ರಸಾರ ಮಾಡಿರುವುದಕ್ಕೆ ದೇಶದ್ರೋಹದ ಆರೋಪ ಎದುರಿಸುತ್ತಿರುವ ಎರಡು ತೆಲುಗು ಸುದ್ದಿ ವಾಹಿನಿಗಳಾದ ಟಿವಿ5 ಹಾಗೂ ಎಬಿಎನ್ ಆಂಧ್ರಜ್ಯೋತಿ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳದಂತೆ ಸುಪ್ರೀಂ ಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ.

ಇದು ದೇಶದ್ರೋಹದ ಮಿತಿಯನ್ನು ವ್ಯಾಖ್ಯಾನಿಸುವ ಸಮಯ ಎಂದು ಕೂಡ ಸುಪ್ರೀಂ ಕೋರ್ಟ್‌ ತಿಳಿಸಿದೆ.

ದೇಶದ್ರೋಹ ಕಾಯ್ದೆ ಸೇರಿದಂತೆ ವಿವಿಧ ಕಾಯ್ದೆಗಳ ಅಡಿಯಲ್ಲಿ ಆರೋಪಗಳನ್ನು ಎದುರಿಸುತ್ತಿರುವ ಟಿವಿ ವಾಹಿನಿಗಳ ಮನವಿಗೆ ನಾಲ್ಕು ವಾರಗಳ ಒಳಗೆ ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರಕಾರಕ್ಕೆ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠ ತಿಳಿಸಿದೆ.

ಪ್ರಸಾರ ಕುರಿತ ಎಫ್‌ಐಆರ್‌ಗೆ ಸಂಬಂಧಿಸಿ ಸುದ್ದಿ ವಾಹಿನಿಗಳ ಉದ್ಯೋಗಿಗಳು ಅಥವಾ ಸಿಬ್ಬಂದಿಯ ಐವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್ ಹಾಗೂ ಎಸ್. ರವೀಂದ್ರ ಭಟ್ ಅವರನ್ನು ಕೂಡ ಒಳಗೊಂಡ ನ್ಯಾಯಪೀಠ ಹೇಳಿದೆ.

“124ಎ (ದೇಶದ್ರೋಹ) ಹಾಗೂ 153 (ವರ್ಗಗಳ ನಡುವೆ ದ್ವೇಷದ ಉತ್ತೇಜನ)ರ ನಿಯಮಗಳನ್ನು, ಮುಖ್ಯವಾಗಿ ಮಾಧ್ಯಮ ಹಕ್ಕು ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ವ್ಯಾಖ್ಯಾನಿಸುವ ಅಗತ್ಯತೆ ಇದೆ ಎಂಬ ನಿಲುವನ್ನು ನಾವು ಹೊಂದಿದ್ದೇವೆ" ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...