ಹೊಸ ವರ್ಷ ಆಚರಣೆ ಸಂಬಂಧವಾಗಿ ಸರ್ಕಾರದ ಮಾರ್ಗಸೂಚಿಗಳು

Source: SO News | By Laxmi Tanaya | Published on 26th December 2020, 9:02 PM | State News | Don't Miss |

ಧಾರವಾಡ : ಹೊಸ ವರ್ಷಾಚರಣೆ ಸಂಬಂಧವಾಗಿ ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರದ ಗೃಹ ಮಂತ್ರಾಲಯದ ಆದೇಶದಂತೆ ಕೋವಿಡ್-19ರ ನಿಗಾವಣೆ, ನಿಯಂತ್ರಣ ಮತ್ತು ಜಾಗ್ರತೆಗಾಗಿ ಮಾರ್ಗ ಸೂಚಿಗಳನ್ನು ಹೊರಡಿಸಿದೆ. ಜಿಲ್ಲೆಯ ಕ್ಲಬ್, ಪಬ್, ರೆಸ್ಟೋರೆಂಟ್ ಹಾಗೂ ಅದೇ ತೆರನಾದ ಸ್ಥಳ, ಪ್ರದೇಶಗಳಲ್ಲಿ ಹೆಚ್ಚು ಜನ ಸೇರುವ ವಿಶೇಷ ಯೋಜಿತ ಒಟ್ಟುಗುಡುವಿಕೆಯನ್ನು ನಿರ್ಬಂಧಿಸಲಾಗಿದೆ. ಆದರಿಂದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಸರ್ಕಾರದ ಮಾರ್ಗಸೂಚಿಗಳನ್ನು ಸಾರ್ವಜನಿಕರಿಗೆ ತಿಳಿಯ ಪಡಿಸುವದಕ್ಕಾಗಿ, ಪ್ರಕಟಣೆ ನೀಡಿರುವ ಅವರು, ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಮೇಲ್ವಿಚಾರಕರು, ಆಯೋಜಕರು ಕಟ್ಟುನಿಟ್ಟಿನ ಕ್ರಮ ವಹಿಸತಕ್ಕದ್ದು.  
ಹಬ್ಬದ ಆಚರಣೆಯ ಸಂದರ್ಭದಲ್ಲಿ ಕೋವಿಡ್-19 ಸಾಂಕ್ರಾಮಿಕ ಸೋಂಕು ತಡೆಗಟ್ಟಲು ಸಾರ್ವಜನಿಕರ ಹಸ್ತಲಾಘವ ಮತ್ತು ಆಲಿಂಗನವನ್ನು ನಿಷೇಧಿಸಿದೆ. 
ಡಿಸೆಂಬರ್ 30, 2020 ರಿಂದ ಜನೆವರಿ 2, 2021 ರವರೆಗೆ ಕ್ಲಬ್, ಪಬ್, ರೇಸ್ಟೋರೆಂಟ್ ಹಾಗೂ ಅದೇ ತೆರನಾದ ಸ್ಥಳ, ಪ್ರದೇಶಗಳಲ್ಲಿ ಸಾಮಾಜಿಕ ಅಂತರವಿಲ್ಲದೇ ಹೆಚ್ಚು ಜನರು ಸೇರುವ ವಿಶೇಷ ಯೋಜಿತ ಒಟ್ಟುಗೂಡುವಿಕೆ, ವಿಶೇಷ ಡಿ.ಜೆ-ಡಾನ್ಸ್ ಕಾರ್ಯಕ್ರಮಗಳನ್ನು, ವಿಶೇಷ ಪಾರ್ಟಿ, ಇತ್ಯಾದಿ ನಿμÉೀಧಿಸಿದೆ. ಆದರೆ ಕ್ಲಬ್, ಪಬ್, ರೆಸ್ಟೋರೆಂಟಗಳನ್ನು ಪ್ರತಿನಿತ್ಯದಂತೆ ತೆರೆದಿದ್ದು, ನಡೆಸಲು ನಿರ್ಬಂಧವಿಲ್ಲ.

ಹೊಸ ವರ್ಷಾಚರಣೆ ಸಂಬಂಧದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ, ಮುಖ್ಯ ರಸ್ತೆಗಳಲ್ಲಿ ಮತ್ತು ಸಾಮಾಜಿಕ ಅಂತರವಿಲ್ಲದ ಹೆಚ್ಚಿನ ಸಂಖ್ಯೆಯಲ್ಲಿ ಜನರ ಸಂಭ್ರಮಾಚರಣೆಯನ್ನು ನಿಷೇಧಿಸಿದೆ. ಆದರೆ  ಈ ಸ್ಥಳಗಳಲ್ಲಿ ಪ್ರತಿನಿತ್ಯದ ಸಾಮಾನ್ಯ ಸೇರುವಿಕೆಯನ್ನು ಹಾಗೂ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳಲು ನಿರ್ಬಂಧವಿಲ್ಲ.

ಆಯ್ದ ರಸ್ತೆ, ಸ್ಥಳಗಳಿಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿಗಳು ಹೆಚ್ಚಿನ ನಿಬರ್ಂಧಗಳನ್ನು ವಿಧಿಸಬಹುದು.
 ನವೆಂಬರ್ 27, 2020ರಲ್ಲಿನ ಸರ್ಕಾರದ ಆದೇಶದಂತೆ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು, ಅದರಂತೆ ಬಹು ಮುಖ್ಯವಾಗಿ 65 ವರ್ಷದ ಮೇಲ್ಪಟ್ಟ ಹಿರಿಯರು ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಇರತಕ್ಕದು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಮತ್ತು ಹೋಟೆಲ್‍ಗಳು, ಮಾಲ್‍ಗಳು, ಪಬ್, ರೆಸ್ಟೋರೆಂಟ್‍ಗಳು ಹಾಗೂ ಅಂತಹ ಪ್ರದೇಶಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆಯನ್ನು ಕಾಡ್ಡಾಯವಾಗಿ ಇರಿಸತಕ್ಕದು.
 ಹೋಟೆಲ್‍ಗಳು, ಮಾಲ್‍ಗಳು, ಪಬ್, ರೆಸ್ಟೋರೆಂಟ್‍ಗಳು ಹಾಗೂ ಅಂತಹ ಸ್ಥಳ, ಪ್ರದೇಶಗಳಲ್ಲಿ ಅದರ ಮಾಲೀಕರು ಕಡ್ಡಾಯವಾಗಿ ಸರ್ಕಾರದ ಆದೇಶದಂತೆ ಕೊವಿಡ್-19 ರ ನಿಯಂತ್ರಣಕ್ಕಾಗಿ ಸಾಮಾಜಿಕ ಅಂತರದಿಂದ ಜನರು ಸೇರಲು ಜಾಗ್ರತೆ ವಹಿಸುವುದು. ಅಗತ್ಯವಿದ್ದಲ್ಲಿ, ಜನರನ್ನು ಸರದಿಯಲ್ಲಿ ಪ್ರವೇಶಿಸಲು ಅಥವಾ ಆನ್‍ಲೈನ್ ಮುಖಾಂತರ, ಟೋಕನ್ ಪದ್ಧತಿಯಲ್ಲಿ ಸ್ಥಳ ಕಾಯ್ದಿರಿಸಲು ವ್ಯವಸ್ಥೆಯನ್ನು ಕಲ್ಪಿಸುವುದು. 
ಪ್ರಾಂಗಣಗಳಲ್ಲಿ, ಉಪಹಾರ ಸ್ಥಳಗಳಲ್ಲಿ, ವ್ಯವಸ್ಥಿತ ಕಟ್ಟಡ ಸಮುಚ್ಚಯಗಳಲ್ಲಿ ಜನರು ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ವ್ಯವಸ್ಥೆ ಕಲ್ಪಿಸತಕ್ಕದ್ದು.

ಸರ್ಕಾರದ ಮಾರ್ಗಸೂಚಿಯಂತೆ ಕಾಡ್ಡಾಯವಾಗಿ ಹಸಿರು ಪಟಾಕಿಗಳನ್ನು ಮಾತ್ರ ಹಚ್ಚತಕ್ಕದ್ದು, 
ಕೊವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ಸಂಬಂಧಪಟ್ಟ ಪ್ರಾಧಿಕಾರಗಳು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು. ಅಲ್ಲದೇ, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೆÇಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆ, ಕಾಪೆರ್Çರೇಷನ್, ಪ್ರಾಧಿಕಾರಗಳಿಂದ ಹೊರಡಿಸಲಾದ ಮಾರ್ಗಸೂಚಿಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು.

 ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ, ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ರ ಅಡಿಯಲ್ಲಿ ಶಿಸ್ತಿನ, ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೇ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು . 

Read These Next

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...