ಸರಕಾರ ದೇಶದ್ರೋಹ ಅಸ್ತ್ರ ಬಳಸಿ ವಾಕ್ ಸ್ವಾತಂತ್ರ್ಯ ಮೊಟಕುಗೊಳಿಸುತ್ತಿದೆ- ನ್ಯಾಯಮೂರ್ತಿ ಲೋಕೂರ್ ಆರೋಪ

Source: sonews | By Staff Correspondent | Published on 15th September 2020, 3:11 PM | National News | Don't Miss |

ಹೊಸದಿಲ್ಲಿ: ವಾಕ್‌ ಸ್ವಾತಂತ್ರ್ಯವನ್ನು ಮೊಟಕುಗೊಳಿಸಲು ದೇಶದ್ರೋಹ ಕಾನೂನನ್ನು ಸರಕಾರ ಅಸ್ತ್ರವಾಗಿ ಬಳಸುತ್ತಿದೆ ಎಂದು ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಂ.ಬಿ.ಲೋಕೂರ್ ಗಂಭೀರ ಆರೋಪ ಮಾಡಿದ್ದಾರೆ.

ನ್ಯಾಯಾಂಗ ಹೊಣೆಗಾರಿಕೆ ಮತ್ತು ಸುಧಾರಣೆಗಳ ಅಭಿಯಾನ (ಸಿಜೆಎಆರ್) ಮತ್ತು ಸ್ವರಾಜ್ ಅಭಿಯಾನ್ ಆಯೋಜಿಸಿದ್ದ ವೆಬಿನಾರ್‌ನಲ್ಲಿ ಅವರು ಮಾತನಾಡುತ್ತಿದ್ದರು.

"ಸರಕಾರ ಸಂವಿಧಾನಾತ್ಮಕ ವಿಧಾನದಲ್ಲಿ ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕಬಹುದು ಮತ್ತು ತಡೆಯಬಹುದು/ ಆದರೆ ಸರಕಾರ ಇದಕ್ಕಾಗಿ ದೇಶದ್ರೋಹ ಕಾನೂನನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ. ದಿಢೀರನೇ ದೇಶದ್ರೋಹದ ಆರೋಪ ಪ್ರಕರಣಗಳು ಹೆಚ್ಚುತ್ತಿವೆ" ಎಂದು ಹೇಳಿದರು.

ಈಶಾನ್ಯ ದಿಲ್ಲಿ ಗಲಭೆಗೆ ಕುಮ್ಮಕ್ಕು ನೀಡಿದ ಆರೋಪದಲ್ಲಿ ಜೆಎನ್‌ಯು ವಿದ್ಯಾರ್ಥಿ ಮುಖಂಡ ಉಮರ್ ಖಲೀದ್ ಅವರನ್ನು ಬಂಧಿಸಿದ ಬೆನ್ನಲ್ಲೇ ನ್ಯಾಯಮೂರ್ತಿಗಳು ಈ ಅಭಿಪ್ರಾಯ ವ್ಯಕ್ತಪಡಿಸಿರುವುದಕ್ಕೆ ವಿಶೇಷ ಮಹತ್ವ ಬಂದಿದೆ. ಕಾನೂನುಬಾಹಿರ ಚಟುವಟಿಕೆಗಳು ಮತ್ತು ತಡೆ ಕಾಯ್ದೆ (ಯುಎಪಿಎ), ದೇಶದ್ರೋಹ ಸೇರಿದಂತೆ ಭಾರತೀಯ ದಂಡಸಂಹಿತೆಯ ವಿವಿಧ ವಿಧಿಗಳ ಅನ್ವಯ ಖಲೀದ್ ವಿರುದ್ಧ ಪ್ರಕರಣ ದಾಖಲಾಗಿದೆ.

ದೇಶದ ಏಕತೆ ಮತ್ತು ಸಮಗ್ರತೆ ಬಗ್ಗೆ ಮಾತನಾಡುವವರನ್ನು 'ದೇಶ ವಿಭಜಕರು' ಎಂದು ಕಾಣಲಾಗುತ್ತಿದ್ದು, ಅವರನ್ನು ಮುಂಜಾಗ್ರತಾ ಕ್ರಮವಾಗಿ ಜೈಲಿಗೆ ಅಟ್ಟಲಾಗುತ್ತಿದೆ. ದೇಶಕ್ಕೆ ಒಳ್ಳೆಯದು ಮಾಡುವ ಬಗ್ಗೆ ಯುವಕರು, ವಿದ್ಯಾರ್ಥಿಗಳು ಮಾತನಾಡುತ್ತಿದ್ದಾರೆ; ಆದರೆ ನಿಮ್ಮನ್ನು ಕಾನೂನುಬಾಹಿರ ಚಟುವಟಿಕೆಗಳು ಮತ್ತು ದೇಶದ್ರೋಹ ಆರೋಪದಲ್ಲಿ ಬಂಧಿಸುತ್ತಿದ್ದೇವೆ ಎಂದು ಸರ್ಕಾರ ಹೇಳುತ್ತಿದೆ ಎಂದು ನ್ಯಾಯಮೂರ್ತಿ ವಿಶ್ಲೇಷಿಸಿದರು.

Read These Next

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...