ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಸರಕಾರ ಅನುಮತಿ; ಸಿಬಿಐ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್‌ನಿಂದ ಇತ್ಯರ್ಥ

Source: Vb | By I.G. Bhatkali | Published on 13th January 2023, 10:19 AM | State News |

ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತವರ ಕುಟುಂಬಸ್ಥರಿಗೆ ಸೇರಿದ ಹೆಚ್ಚುವರಿ ಆಸ್ತಿ ಜಪ್ತಿ ಪ್ರಕ್ರಿಯೆಗೆ ಸರಕಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ.

ಜನಾರ್ದನ ರೆಡ್ಡಿ ಮತ್ತವರ ಕುಟುಂಬಸ್ಥರಿಗೆ ಸೇರಿದ ಹೆಚ್ಚುವರಿ ಆಸ್ತಿಗಳನ್ನು ಜಪ್ತಿ ಮಾಡಲು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಅನುಮತಿ ಕೋರಿಸಲ್ಲಿ ಸಿರುವ ಮನವಿಯನ್ನು ಪರಿಗಣಿಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಸಿಬಿಐ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು.

ಅರ್ಜಿಯು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಈ ವೇಳೆ ಸರಕಾರದ ಪರ ವಕೀಲರು, ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಅರ್ಜಿಸಲ್ಲಿಸಲು ಸಿಬಿಐಗೆ ಅನುಮತಿ ನೀಡಿ ಗೃಹ ಇಲಾಖೆ ಹೊರಡಿ ಸಿರುವ ಆದೇಶದ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ಸರಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸಿಬಿಐ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿತು. ಆಗಸ್ಟ್‌ ನಲ್ಲೇ ಸಿಬಿಐ ಅರ್ಜಿ ಸಲ್ಲಿಸಿತ್ತು. ತೆಲಂಗಾಣ, ಆಂಧ್ರ ಪ್ರದೇಶದಲ್ಲಿನ ಆಸ್ತಿ ಜಪ್ತಿಗೆ ಅನುಮತಿ ಕೇಳಿತ್ತು, ಸರಕಾರದ ವಿಳಂಬ ಹಿನ್ನೆಲೆಯಲ್ಲಿ ಸಿಬಿಐ ಹೈಕೋಟ್ ೯ಗೆ ಮೊರೆ ಹೋಗಿತ್ತು. ಸಿಬಿಐ ಪರ ವಿಶೇಷ ಸರಕಾರಿ ಅಭಿಯೋಜಕ ಪಿ.ಷಸನ ಕುಮಾರ್ ವಾದ ಮಂಡಿಸಿದ್ದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...