ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಶೀರ್ಘವೇ ಆರಂಭ-ಶಿಕ್ಷಣ ಸಚಿವ ಸುರೇಶ ಕುಮಾರ್

Source: sonews | By Staff Correspondent | Published on 4th June 2020, 8:44 PM | State News | Don't Miss |

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳ ಆರಂಭಕ್ಕೆ ಪಾಲಕ ಪೋಷಕರಿಂದ ತೀವ್ರ ಪ್ರತಿರೋಧದ ನಡುವೆಯೂ ಶಿಕ್ಷಣ ಸಚಿವ ಸುರೇಶ್ ಕುಮಾರ್ ಶೀಘ್ರವೇ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಕ್ರಿಯೆ ಆರಂಭಗೊಳಿಸುವುದಾಗಿ ಫೇಸ್ಬುಕ್ ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.  

ಶಾಲಾ ಪ್ರಾರಂಭದ ದಿನಾಂಕವನ್ನು ಪೋಷಕರ ಅಭಿಪ್ರಾಯ ಕ್ರೋಡೀಕರಿಸಿದ ನಂತರ ನಿರ್ಧಾರ ಕೈಗೊಳ್ಳಲಾಗುವುದು. ಆದರೆ, ಸರಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಕ್ರಿಯೆಯನ್ನು ಶೀಘ್ರವೇ ಪ್ರಾರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್‍ ಕುಮಾರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಬಡವರೂ ನಾನಾ ಕಾರಣಗಳಿಗಾಗಿ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುತ್ತಿದ್ದಾರೆ. ಒಂದು ಅಂಕಿಅಂಶದ ಪ್ರಕಾರ ಬಡ ಕುಟುಂಬದವರು ತಮ್ಮ ಆದಾಯದ ಶೇ.40ರಷ್ಟು ಹಣವನ್ನು ಮಕ್ಕಳ ಶಿಕ್ಷಣಕ್ಕೆ ಖರ್ಚು ಮಾಡುತ್ತಿದ್ದಾರೆ.

ಸರಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ಕೊಡಲಾಗುತ್ತದೆ ಎಂಬ ಭರವಸೆಯನ್ನು ಸಾರ್ವಜನಿಕರಿಗೆ ನೀಡುವ ಮೂಲಕ ಸರಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣವನ್ನು ಹೆಚ್ಚಿಸಬೇಕಿದೆ. ಆ ಮೂಲಕ ಬಡಕುಟುಂಬ ಖಾಸಗಿ ಶಾಲೆಗಳಿಗೆ ವ್ಯಯಿಸುವ ಹಣವನ್ನು ಕುಟುಂಬದ ಒಳಿತಿಗೋಸ್ಕರ ಉಪಯೋಗಿಸಿಕೊಳ್ಳಲು ಸಹಾಯ ಮಾಡಿದಂತಾಗುತ್ತದೆ. ಕೋವಿಡ್-19 ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಗಾಗಿಯೇ ಪ್ರತ್ಯೇಕ ವಾಹಿನಿಯೊಂದನ್ನು ಆರಂಭಿಸಲು ಚಿಂತನೆ ನಡೆಯುತ್ತಿದೆ. ಇದರ ಮೂಲಕ ಯಾವ ರೀತಿಯ ಶಿಕ್ಷಣ ನೀಡಬೇಕು ಹಾಗೂ ವಿದ್ಯಾರ್ಥಿಗಳನ್ನು ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಕುರಿತು ಚರ್ಚೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಜೂ.10ರಿಂದ ಪುನರ್ ಮನನ ತರಗತಿ

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಳೆದ ತಿಂಗಳು ಚಂದನ ವಾಹಿನಿಯಲ್ಲಿ ಪುನರ್ ಮನನ ತರಗತಿಗಳನ್ನು ಪ್ರಾರಂಭಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ವಿದ್ಯಾರ್ಥಿ ಹಾಗೂ ಪೋಷಕರಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ ಜೂ.10ರಿಂದ ಹತ್ತು ದಿನಗಳವರೆಗೆ ಎರಡನೇ ಸುತ್ತಿನ ಪುನರ್ ಮನನ ತರಗತಿಗಳು ಪ್ರಾರಂಭಿಸಲಾಗುತ್ತಿದೆ.

-ಸುರೇಶ್‍ ಕುಮಾರ್, ಶಿಕ್ಷಣ ಸಚಿವ

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...