ಸರ್ಕಾರ,ಚಿತಾಗಾರದ ದಾಖಲೆಯಲ್ಲಿ ವ್ಯತ್ಯಾಸ: ಸತ್ತವರು 66, ಅಂತ್ಯಸಂಸ್ಕಾರ 462

Source: S.O. News Service | By MV Bhatkal | Published on 26th April 2021, 3:02 PM | National News | Don't Miss |

ಕಾನ್ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಕಾನ್ಪುರದಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆಗೆ ಸಂಬಂಧಿಸಿದಂತೆ ಸರ್ಕಾರ ನೀಡುತ್ತಿರುವ ಲೆಕ್ಕಕ್ಕೂ, ಚಿತಾಗಾರಗಳು ನೀಡುತ್ತಿರುವ ಲೆಕ್ಕಕ್ಕೂ ಭಾರಿ ವ್ಯತ್ಯಾಸವಿದೆ.
ಏಪ್ರಿಲ್ 19ರಿಂದ ಏಪ್ರಿಲ್ 24ರ ನಡುವೆ ಕಾನ್ಪುರದಲ್ಲಿ 66 ಮಂದಿ ಮಾತ್ರ ಕೋವಿಡ್‌ನಿಂದ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತವು ತನ್ನ ಪ್ರಕಟಣೆಯಲ್ಲಿ ಹೇಳಿದೆ. ಆದರೆ, ಇದೇ ಅವಧಿಯಲ್ಲಿ ಕಾನ್ಪುರದ ಎರಡು ಚಿತಾಗಾರಗಳಲ್ಲಿ 462 ಶವಸಂಸ್ಕಾರ ನಡೆಸಲಾಗಿದೆ. ಚಿತಾಗಾರಗಳ ಎದುರು ಜನರು, ಶವಗಳನ್ನು ಇರಿಸಿಕೊಂಡು ಗಂಟೆಗಟ್ಟಲೆ ಕಾಯಬೇಕಾದ ಸ್ಥಿತಿ ಇದೆ.
‘ಪ್ರತಿದಿನ ದಹನ ಮಾಡುತ್ತಿರುವ ಶವಗಳ ಸಂಖ್ಯೆಯಲ್ಲಿ ಹಲವು ಪಟ್ಟು ಏರಿಕೆಯಾಗಿದೆ. ಈ ಹಿಂದೆ ಪ್ರತಿದಿನ 10 ಶವಗಳನ್ನು ಸುಡುತ್ತಿದ್ದೆವು. ಆದರೆ, ಈಗ ಪ್ರತಿದಿನ 50ಕ್ಕೂ ಹೆಚ್ಚು ಶವಗಳನ್ನು ಸುಡುತ್ತಿದ್ದೇವೆ. ಏಪ್ರಿಲ್ 21ರಂದು ಒಂದೇ ದಿನ 91 ಶವವನ್ನು ಸುಟ್ಟಿದ್ದೇವೆ’ ಎಂದು ಭೈರೋಘಾಟ್ ಚಿತಾಗಾರದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಈ ಅವಧಿಯಲ್ಲಿ, ಇಲ್ಲಿ 406 ಶವಗಳನ್ನು ದಹನ ಮಾಡಲಾಗಿದೆ.
ಭಗವತ್‌ಘಾಟ್‌ನಲ್ಲಿ 56 ಶವಗಳನ್ನು ದಹನ ಮಾಡಲಾಗಿದೆ. ಇದರ ಜತೆಯಲ್ಲೇ ಮುಸ್ಲಿಮರ ಖಬರಸ್ತಾನದಲ್ಲಿ ನೂರಾರು ಶವಗಳ ಅಂತ್ಯಸಂಸ್ಕಾರ ಮಾಡಲಾಗಿದೆ. ಇವುಗಳ ಮಾಹಿತಿ ಲಭ್ಯವಿಲ್ಲ. ಹೀಗಾಗಿ ಸರ್ಕಾರ ನೀಡುತ್ತಿರುವ ಲೆಕ್ಕಕ್ಕೂ, ವಾಸ್ತವದಲ್ಲಿ ಕೋವಿಡ್‌ನಿಂದ ಮೃತಪಡುತ್ತಿರುವವರ ಸಂಖ್ಯೆಗೂ ಭಾರಿ ವ್ಯತ್ಯಾಸವಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.
ಈ ಆರೋಪವನ್ನು ಜಿಲ್ಲಾಡಳಿತ ನಿರಾಕರಿಸಿದೆ. ಕೋವಿಡ್‌ನಿಂದ ದಾಖಲಾಗುತ್ತಿರುವವರ ಮತ್ತು ಮೃತಪಡುತ್ತಿರುವವರ ವಿವರವನ್ನು ಪೋರ್ಟಲ್‌ನಲ್ಲಿ ನಮೂದಿಸುತ್ತಿದ್ದೇವೆ. ಹೀಗಾಗಿ ಮೃತರ ಸಂಖ್ಯೆಯನ್ನು ಮುಚ್ಚಿಡಲು ಸಾಧ್ಯವೇ ಇಲ್ಲ ಎಂದು ಜಿಲ್ಲಾಡಳಿತವು ಹೇಳಿದೆ.
ಕಾನ್ಪುರದಲ್ಲಿ ಕೋವಿಡ್‌ನಿಂದ ಈವರೆಗೆ 1,060 ಮಂದಿ ಮೃತಪಟ್ಟಿದ್ದಾರೆ ಎಂದು ಸರ್ಕಾರದ ದಾಖಲೆಗಳು ಹೇಳುತ್ತವೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...