ಆಡಳಿತ, ವಿರೋಧ ಪಕ್ಷಗಳ ಶಾಸಕರು ಉತ್ತಮ ಸಂಬಂಧ ಹೊಂದಿರಬೇಕು: ಗುಲಾಂ ನಬಿ ಆಜಾದ್

Source: PTI | By MV Bhatkal | Published on 13th September 2021, 11:40 PM | National News | Don't Miss |

ಜೈಪುರ: ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಸೋಮವಾರ ಆಡಳಿತ ಮತ್ತು ವಿರೋಧ ಪಕ್ಷದ ಶಾಸಕರ ನಡುವೆ ಹೊಂದಾಣಿಕೆ ಮತ್ತು ಉತ್ತಮ ಬಾಂಧವ್ಯ ಹೊಂದಿರುವುದು ಮುಖ್ಯ ಎಂದು ಕರೆ ನೀಡಿದ್ದಾರೆ. ಇದೇ ವೇಳೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರೊಂದಿಗಿನ ತಮ್ಮ ಒಡನಾಟವನ್ನು ನೆನಪಿಸಿಕೊಂಡಿದ್ದಾರೆ.

ರಾಜಸ್ಥಾನ ವಿಧಾನಸಭೆಯಲ್ಲಿ 'ಸಂಸದೀಯ ವ್ಯವಸ್ಥೆ ಮತ್ತು ಜನರ ನಿರೀಕ್ಷೆಗಳು' ಕುರಿತ ಸೆಮಿನಾರ್‌ನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಶಾಸಕಾಂಗದಲ್ಲಿ ತಿಳಿವಳಿಕೆಯು ಒಂದು ಪ್ರಮುಖ ಅಂಶವಾಗಿದೆ ಮತ್ತು ಸದಸ್ಯರಲ್ಲಿ ಉತ್ತಮ ತಿಳಿವಳಿಕೆ ಇದ್ದಾಗ ಮಾತ್ರ ಒಳ್ಳೆಯ ಕೆಲಸಕ್ಕೆ ಬೆಂಬಲ ಸಿಗುತ್ತದೆ ಎಂದರು.

ಆಡಳಿತ ಮತ್ತು ವಿರೋಧ ಪಕ್ಷದ ಶಾಸಕರು ಹೊಂದಾಣಿಕೆ ಮತ್ತು ಉತ್ತಮ ಬಾಂಧವ್ಯ ಹೊಂದಿರಬೇಕು. ಒಳ್ಳೆಯ ಕೆಲಸಕ್ಕೆ ಬೆಂಬಲ ಸಿಗಬೇಕಾದರೆ ಅಲ್ಲಿ ಉತ್ತಮ ತಿಳಿವಳಿಕೆಯ ಅಗತ್ಯವಿರುತ್ತದೆ. ಒಂದು ವೇಳೆ ಅಂತರವಿದ್ದರೆ ಒಳ್ಳೆಯ ಕೆಲಸಕ್ಕೂ ಬೆಂಬಲ ಸಿಗುವುದಿಲ್ಲ. ಆದ್ದರಿಂದ, ಶಾಸಕರ ನಡುವೆ ಉತ್ತಮ ಕೆಲಸದ ಸಂಬಂಧಗಳನ್ನು ಹೊಂದುವ ಅಗತ್ಯವಿದೆ' ಎಂದು ಅವರು ಹೇಳಿದರು.

ವಿರೋಧ ಪಕ್ಷಗಳ ನಾಯಕರೊಂದಿಗೆ ತಮ್ಮ ಅನುಭವವನ್ನು ಹಂಚಿಕೊಂಡ ಆಜಾದ್,ತಾವು ಕೇಂದ್ರ ಸಂಸದೀಯ ವ್ಯವಹಾರಗಳ ಮಂತ್ರಿಯಾಗಿದ್ದಾಗ, ಆಗಿನ ವಿರೋಧ ಪಕ್ಷದ ನಾಯಕ ವಾಜಪೇಯಿ ಅವರೊಂದಿಗೆ ಉತ್ತಮ ಸಂಬಂಧ ಹೊಂದಿದ್ದೆ ಮತ್ತು ಅವರು ಎರಡು ಮೂರು ದಿನಗಳಿಗೊಮ್ಮೆ ಒಟ್ಟಾಗಿ ಊಟ ಮಾಡುತ್ತಿದ್ದೆವು'. ಎಂದು ಹೇಳಿದರು.

ಚುನಾವಣೆ ಸಮಯದಲ್ಲಿ ಮಾತ್ರ ಭಿನ್ನಾಭಿಪ್ರಾಯಗಳನ್ನು ನೋಡಬೇಕು. ನಾನೆಂದಿಗೂ ಪ್ರತಿಸ್ಪರ್ಧಿ ಅಭ್ಯರ್ಥಿಯ ಹೆಸರನ್ನು ಉಲ್ಲೇಖಿಸುತ್ತಿರಲಿಲ್ಲ. ಚುನಾವಣಾ ರ‍್ಯಾಲಿಗಳಲ್ಲಿ, ನಾವು ಏನು ಮಾಡುತ್ತೇವೆ ಎಂಬುದನ್ನಷ್ಟೇ ಜನರಿಗೆ ಹೇಳಬೇಕು' ಎಂದು ಅವರು ತಿಳಿಸಿದರು.

'ಶಾಸಕಾಂಗ, ನ್ಯಾಯಾಂಗ ಮತ್ತು ಕಾರ್ಯಾಂಗಗಳ ಪಾತ್ರ ಮತ್ತು ಜವಾಬ್ದಾರಿಗಳನ್ನು ಸಂವಿಧಾನದಲ್ಲಿ ಉತ್ತಮವಾಗಿ ವ್ಯಾಖ್ಯಾನಿಸಲಾಗಿದೆ. ಆದಾಗ್ಯೂ, ಶಾಸಕಾಂಗವು ಇವುಗಳಲ್ಲಿ ಮೊದಲನೆಯದು. ಭಾರತದಲ್ಲಿ ಶಾಸಕರು ಕಾನೂನುಗಳನ್ನು ರೂಪಿಸುವುದರ ಹೊರತಾಗಿಯೂ, ‌ತಮ್ಮ ಕ್ಷೇತ್ರದತ್ತ ಗಮನಹರಿಸಬೇಕು ಮತ್ತು ನೀರು ಅಥವಾ ವಿದ್ಯುತ್‌ಗೆ ಸಂಬಂಧಿಸಿದ ಜನರ ವಿವಿಧ ಬೇಡಿಕೆಗಳನ್ನು ಪರಿಹರಿಸಬೇಕು ಎಂದು ಅವರು ಹೇಳಿದರು.

ನಿಯಮಗಳನ್ನು ಅನುಸರಿಸುವ ಮತ್ತು ಅರ್ಥಮಾಡಿಕೊಳ್ಳುವ ಮೂಲಕ ಶಾಸಕರು ಸದನದ ಘನತೆಯನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.

Read These Next

ಆರ್ಯನ್ ಖಾನ್ ಬಿಡುಗಡೆಗೆ ಎನ್‌ಸಿಬಿಯ ವಾಂಖೆಡೆ, ಮಧ್ಯವರ್ತಿಗಳಿಂದ 25 ಕೋ.ರೂ. ಲಂಚದ ಬೇಡಿಕೆ ಸಾಕ್ಷಿ ಆರೋಪ

ಪ್ರಯಾಣಿಕರ ಹಡಗಿನಲ್ಲಿ ಮಾದಕ ದ್ರವ್ಯ ಪತ್ತೆ ಪ್ರಕರಣದ ಆರೋಪಿಯಾಗಿರುವ ಆರ್ಯನ್ ಖಾನ್ ಬಿಡುಗಡೆಗೆ ಮಾದಕ ದ್ರವ್ಯ ...

ತೈಲ ಬೆಲೆ ಹೆಚ್ಚಳದ ವಿರುದ್ಧ ಪ್ರತಿಭಟನೆ ನ.5ರಂದು ಲಾರಿ ಮಾಲಕರಿಂದ ವಿಧಾನಸೌಧ ಮುತ್ತಿಗೆ

ರಾಜ್ಯ ಸರಕಾರ ಈ ಕೂಡಲೇ ಇಂಧನ ಬೆಲೆ ತಗ್ಗಿಸುವಂತೆ ಆಗ್ರಹಿಸಿ ನ5ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದೆಂದು ಫೆಡರೇಷನ್ ಆಫ್ ...

ಹುಬ್ಬಳ್ಳಿ: ಹುಬ್ಬಳ್ಳಿಯ ಚರ್ಚ್‌ಗೆ ನುಗ್ಗಿ ಭಜನೆ ಮಾಡಿದ ಸಂಘಪರಿವಾರದ ಕಾರ್ಯಕರ್ತರು

ಬಲವಂತದಿಂದ ಮತಾಂತರಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ರವಿವಾರ ಬೆಳಗ್ಗೆ ಇಲ್ಲಿಯ ಭೈರಿದೇವರ ಕೊಪ್ಪದಲ್ಲಿರುವ ಚರ್ಚೆಂದಕ್ಕೆ ...

ದಾವಣಗೆರೆಯಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ರಾಜ್ಯ ಕ್ರೀಡಾಕೂಟ. ಧಾರವಾಡ ಜಿಲ್ಲಾ ನೌಕರರ ಉತ್ತಮ ಸಾಧನೆ.

ಧಾರವಾಡ : 2021ನೇ ಸಾಲಿನ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಮೂರು ದಿನಗಳ ಕಾಲ ...

ಅ.28 ರಂದು ರಾಜ್ಯಾದ್ಯಂತ ಏಕಕಾಲದಲ್ಲಿ ಕನ್ನಡ ಗೀತೆಗಳ ಗಾಯನ : ಸಚಿವ ವಿ. ಸುನೀಲ್ ಕುಮಾರ್

ಅಕ್ಟೋಬರ್ 28ರಂದು ಬೆಳಗ್ಗೆ 11 ಗಂಟೆಗೆ ರಾಜ್ಯಾದ್ಯಂತ ಏಕಕಾಲದಲ್ಲಿ ಕನ್ನಡದ ಶ್ರೇಷ್ಠತೆಯನ್ನು ಸಾರುವ ಬಾರಿಸು ಕನ್ನಡ ಡಿಂಡಿಮವ, ಜೋಗದ ...