ಈದ್ ಮಿಲಾದ್ ಹಬ್ಬದಂದು ಸರ್ಕಾರದ ಮಾರ್ಗಸೂಚಿ ಪಾಲಿಸಿ- ಜಿಲ್ಲಾಧಿಕಾರಿ ಆದೇಶ

Source: SO News | By Laxmi Tanaya | Published on 27th October 2020, 9:25 PM | Coastal News |

ಮಂಗಳೂರು : ಪ್ರಸ್ತುತ ಸಾಲಿನಲ್ಲಿ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬವನ್ನು ಜಿಲ್ಲೆಯಲ್ಲಿ ಅಕ್ಟೋಬರ್ 29 ರಂದು ಆಚರಿಸುತ್ತಿದ್ದು, ಕೋವಿಡ್-19 ಸೋಂಕು ಹಿನ್ನಲೆಯಲ್ಲಿ  ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ26(1)(2)(3) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದ.ಕ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷನಾಗಿ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧ್ಯಾಧೇಶ 2020 ಕಲಂ 4 ರಲ್ಲಿ ಪ್ರದತ್ತವಾದ ಅಧಿಕಾರದಂತೆ ದ.ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ: ರಾಜೇಂದ್ರ ಕೆ.ವಿ ಅವರು  ಈ ಕೆಳಕಂಡಂತೆ ಮಾರ್ಗಸೂಚಿಗಳನ್ನು ಪಾಲಿಸಲು ಆದೇಶಿಸಿರುತ್ತಾರೆ.  

      ಜಿಲ್ಲೆಯಾದ್ಯಂತ ಅಕ್ಟೋಬರ್ 29 ರಂದು ಈದ್ ಮಿಲಾದ್ ಹಬ್ಬವನ್ನು ಆಚರಿಸುವ ಸಮಯದಲ್ಲಿ ಯಾವುದೇ ರೀತಿಯ ಸಾಮೂಹಿಕ ಮೆರವಣಿಗೆ, ತೆರೆದ ಸ್ಥಳಗಳಲ್ಲಿ ಒಂದೆಡೆ ಸೇರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ ಸಭೆ ಸಮಾರಂಭಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ, ಮಸೀದಿಗಳಲ್ಲಿ, ದರ್ಗಾಗಳಲ್ಲಿ ಸಾಮಾಜಿಕ ಅಂತರ ಹಾಗೂ ಕೊವೀಡ್-19 ರ ಶಿಷ್ಟಾಚಾರದೊಂದಿಗೆ ಸಾಕಷ್ಟು ಮುನ್ನಚ್ಚರಿಕೆ ಕ್ರಮಗಳ ಜೊತೆಗೆ ದೈಹಿಕ ಅಂತರ ಕಾಪಾಡಿಕೊಳ್ಳುವುದರ ಮೂಲಕ ನೆರವೇರಿಸಬೇಕು.

 ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕ, ಡಿಜಿಟಲ್ ಸೌಂಡ್ ಸಿಸ್ಟಮ್ ಬಳಕೆಯನ್ನು ನಿಷೇಧಿಸಲಾಗಿದೆ. ಮುಖಗವಸುಗಳನ್ನು ಕಡ್ಡಾಯವಾಗಿ ಎಲ್ಲರೂ ಉಪಯೋಗಿಸಬೇಕು. 60 ವರ್ಷ ಮೇಲ್ಪಟ್ಟ ನಾಗರಿಕರು ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಹಬ್ಬದ ಆಚರಣೆಯನ್ನು ಮಾಡಬೇಕು. ಸ್ಯಾನಿಟೈಸರ್ ಹಾಗೂ ಸೋಪಿನೊಂದಿಗೆ ಕೈ ತೊಳೆಯಲು ಪ್ರವೇಶ ದ್ವಾರದಲ್ಲಿ ಸೂಕ್ತ ವ್ಯವಸ್ಥೆಯನ್ನು ಮಾಡಬೇಕು. ಖಬರಸ್ಥಾನ್ ಒಳಗೊಂಡಂತೆ ಯಾವುದೇ ರೀತಿಯ ತೆರೆದ ಜಾಗದಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನ ಮುಂತಾದವುಗಳನ್ನು ಆಯೋಜಿಸುವಂತಿಲ್ಲ.

   ಮೇಲ್ಕಂಡ ನಿರ್ದೇಶನವನ್ನು ಪಾಲಿಸದೆ ವ್ಯತಿರಿಕ್ತವಾಗಿ ವರ್ತಿಸಿದ್ದಲ್ಲಿ ಅಂತವರ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...