ಶ್ರೀನಿವಾಸಪುರ: ಮಾವು ಬೆಳೆದ ರೈತರಿಗೆ ಬೆಳೆ ನಷ್ಟ ಆಗದಂತೆ ಸಂಸ್ಕರಣಾ ಘಟಕಗಳು ಸ್ಥಾಪನೆ

Source: Shabbir Ahmed | By S O News | Published on 16th June 2021, 12:00 AM | State News |

ಶ್ರೀನಿವಾಸಪುರ: ಮಾವು ಬೆಳೆದ ರೈತರಿಗೆ ಬೆಳೆ ನಷ್ಟ ಆಗದಂತೆ ಸರ್ಕಾರದಿಂದ ಶೇ . 50 ರಷ್ಟು ಅನುದಾನದೊಂದಿಗೆ ಹೆಚ್ಚಿನ ಮಾವು ಸಂಸ್ಕರಣಾ ಘಟಕಗಳನ್ನು ಮತ್ತು ಶೀತಲ ಸಂಗ್ರಹ ಘಟಕಗಳನ್ನು ಸ್ಥಾಪಿಸಬೇಕು . ಈ ಘಟಕಗಳ ಸದುಪಯೋಗದಿಂದ ರೈತರಿಗೆ ಬೆಲೆ ಕುಸಿತ ಆಗುವುದಿಲ್ಲ ಎಂದು ತೋಟಗಾರಿಕೆ ಹಾಗೂ ರೇಷ್ಮೆ ಸಚಿವರಾದ ಆರ್.ಶಂಕರ್ ಅವರು ತಿಳಿಸಿದರು . ಇಂದು ಶ್ರೀನಿವಾಸಪುರದ ಸನ್ ಸಿಪ್ ಮಾವು ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅವರು ಮಾತನಾಡಿ , ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮಾವು ಬೆಳೆಯುವ ರೈತರಿದ್ದಾರೆ . ಈ ವರ್ಷ ಕೋವಿಡ್ ಸಂಕಷ್ಟದಿಂದ ಮಾವು ಬೆಳೆಯ ಬೆಲೆ ಕುಸಿತಗೊಂಡಿದೆ . ವಿಶೇಷವಾಗಿ ತೋತಾಪುರಿ ಮಾವಿನ ಕಾಯಿಗೆ ಸರಿಯಾದ ಬೆಲೆ ಸಿಗದೆ ರೈತರಿಗೆ ತುಂಬಾ ತೊಂದರೆಯಾಗಿದೆ ಎಂದು ತಿಳಿಸಿದರು . ಶ್ರೀನಿವಾಸಪುರ ಮಾವು ಉತ್ಪನ್ನ ಸಂಸ್ಥೆಯನ್ನು ಸಾವಿರಾರು ರೈತರು ಸೇರಿ ಸ್ಥಾಪಿಸಿದ್ದಾರೆ . ಈ ಸಂಸ್ಥೆಯ ಮೂಲಕ ಸರ್ಕಾರದಿಂದ ಬರುವ ಎಲ್ಲಾ ಸೌಲಭ್ಯಗಳನ್ನು ರೈತರು ಉಪಯೋಗಿಸಿಕೊಳ್ಳುತ್ತಿದ್ದಾರೆ . ಸಂಸ್ಥೆಯವರಿಗೆ ಮಾವು ಸಂಸ್ಕರಣಾ ಘಟಕವನ್ನು ಸ್ಥಾಪಿಸಲು ಬೇಕಾಗುವ ಜಮೀನನ್ನು ಸರ್ಕಾರದಿಂದ ಮಂಜೂರು ಮಾಡಿಸಲಾಗುವುದು . ಈ ಸಂಸ್ಥೆಯಿಂದ ಸ್ಥಳೀಯ ರೈತರು ಬೆಳೆದ ಮಾವು ಬೆಳೆಗಳನ್ನು ರೈತರೇ ಸಂಸ್ಕರಣೆ ಮಾಡಿ ಮಾರಾಟ ಮಾಡಬಹುದು ಎಂದು ತಿಳಿಸಿದರು . ಜಿಲ್ಲೆಯಲ್ಲಿ 1200 ರಿಂದ 1800 ಅಡಿ ಅಂತರ್ಜಲ ಕುಸಿತ ಆಗಿರುವುದರಿಂದ ಹನಿ ನೀರಾವರಿಗೆ ಶೇ . 90 ರಷ್ಟು ಸಬ್ಸಿಡಿ ನೀಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದೇವೆ ಎಂದು ಹೇಳಿದರು . ಯದರೂರು ಎನ್.ಹೆಚ್.ಎಂ ಪಾಲಿಹೌಸ್‌ಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿ ಮತ್ತು ಸಮುದಾಯ ಕೃಷಿ ಹೊಂಡದ ವೀಕ್ಷಣೆ ಮಾಡಿ ನೀರಾವರಿ ವ್ಯವಸ್ಥೆ ಇನ್ನಷ್ಟು ಅಭಿವೃದ್ಧಿಪಡಿಸಲು ರೈತರಿಗೆ ಸೂಚಿಸಿದರು . ಹೊಸಹಳ್ಳಿ ರೈತರ ಮಾವು ಹಣ್ಣು ಮಾಗಿಸುವ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು . ಜಿ.ನಾರಾಯಣಗೌಡ ತೋಟಗಾರಿಕಾ ಕ್ಷೇತ್ರಕ್ಕೆ ಭೇಟಿ ನೀಡಿ ರೇಷ್ಮೆ ಇಲಾಖೆಯಡಿಯಲ್ಲಿ ಸಹಾಯಧನ ಪಡೆದ ರೈತರ ತಾಕುಗಳ ಸಮಸ್ಯೆಗಳನ್ನು ಆಲಿಸಿ ರೈತರೊಂದಿಗೆ ಮಾತನಾಡಿದರು . ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ( ಹನಿ ನೀರಾವರಿ ) ಕದಿರೇಗೌಡ , ಬೆಂಗಳೂರು ಅಪರ ವಿಭಾಗೀಯ ತೋಟಗಾರಿಕೆ ಜಂಟಿ ನಿರ್ದೇಶಕರಾದ ಎಂ.ವಿಶ್ವನಾಥ್ , ರೇಷ್ಮೆ ಇಲಾಖೆಯ ನಿರ್ದೇಶಕರಾದ ಬಿ.ಆರ್.ನಾಗಭೂಷಣ್ , ಬೆಂಗಳೂರು ವಿಭಾಗೀಯ ರೇಷ್ಮೆ ಜಂಟಿ ನಿರ್ದೇಶಕರಾದ ಟಿ.ಹೆಚ್.ಭೈರಪ್ಪ , ಕೋಲಾರ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಗಾಯಿತ್ರಿ , ಮಾವು ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಕೆ.ವಿ.ನಾಗರಾಜ್ , ವ್ಯವಸ್ಥಾಪಕ ನಿರ್ದೇಶಕರಾದ ಡಾ ! ನಾಗರಾಜ್ , ಶ್ರೀನಿವಾಸಪುರ ತಹಶೀಲ್ದಾರರಾದ ಎಸ್.ಎನ್.ಶ್ರೀನಿವಾಸ್ , ತೋಟಗಾರಿಕೆ ಸಹಾಯಕ ನಿರ್ದೇಶಕರಾದ ಭೈರರೆಡ್ಡಿ, ಕೋಲಾರ ಬಿಜೆಪಿ ಜಿಲ್ಲೆ ಅಧ್ಯಕ್ಷ ಡಾ. ವೇಣುಗೋಪಾಲ್, ಅಶೋಕ್ ಕುಮಾರ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು .

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...