ಸಾರ್ವಜನಿಕ ಗಣೇಶೋತ್ಸವ ನಡೆಸುವ ತೀರ್ಮಾನ ಮುಂದೂಡಿದ ಸರಕಾರ

Source: SO News | By Laxmi Tanaya | Published on 31st August 2021, 10:45 PM | State News | Don't Miss |

ಬೆಂಗಳೂರು : ‌ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡುವ ಸಂಬಂಧ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳ ಮುಖಂಡರಿಂದ ಒತ್ತಡವಿದೆ. ಈ ಸಂಬಂಧ ಸಮಾಲೋಚನೆ ನಡೆಸಿದ್ದು, ಸೆಪ್ಟೆಂಬರ್ 5ರಂದು ಸಿಎಂ ಅಧ್ಯಕ್ಷತೆಯಲ್ಲಿ ತಜ್ಞರ ಉನ್ನತ ಮಟ್ಟದ ಸಭೆ ನಡೆಸಿ ಅಂತಿಮ ತೀರ್ಮಾನ ಪ್ರಕಟಿಸಲಾಗುವುದು ಎಂದು ಆಶೋಕ್ ಸನೆ ನೀಡಿದರು.

 ನೆರೆಯ ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಿದೆ. ಆದರೆ, ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಣದಲ್ಲಿದೆ. ಕೇರಳ ರಾಜ್ಯದಲ್ಲಿ ಓಣಂ ಹಬ್ಬಕ್ಕೆ ಅವಕಾಶ ನೀಡಿದ ಕಾರಣ ಕೋವಿಡ್ ದೃಢ ಪ್ರಮಾಣ ಶೇ.19ಕ್ಕೆ ಏರಿಕೆಯಾಗಿದೆ. ಆದುದರಿಂದ ಬೃಹತ್ ಪ್ರಮಾಣದ ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಸಂಘ-ಸಂಸ್ಥೆಗಳ ಪ್ರತಿನಿಧಿಗಳ ಜತೆ ಚರ್ಚಿಸಿ, ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಂದ ವರದಿ ಪಡೆದ ಬಳಿಕ ಸೆ.5ರ ಕೋವಿಡ್ ಪಾಸಿಟಿವಿಟಿ ದರವನ್ನು ಆಧರಿಸಿ ಗಣೇಶೋತ್ಸವಕ್ಕೆ ಅವಕಾಶ ನೀಡುವ ಸಂಬಂಧ ತೀರ್ಮಾನಿಸಲಾಗುವುದು ಎಂದು ಅಶೋಕ್ ಸ್ಪಷ್ಟಪಡಿಸಿದ್ದರು.

Read These Next

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ...