ಕುಳಾಯಿಯಲ್ಲಿ ಮಲ್ಟಿಪರ್ಪಸ್ ಸೈಕ್ಲೋನ್ ಶೆಲ್ಟರ್ ಕೇಂದ್ರವನ್ನು ತೆರೆಯಲು ಸರಕಾರಕ್ಕೆ ಪ್ರಸ್ತಾವನೆ:ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ

Source: so news | By MV Bhatkal | Published on 20th June 2021, 12:03 PM | Coastal News |


ಮಂಗಳೂರು:ಚಂಡಮಾರುತದಿಂದ ತೊಂದರೆಗೊಳಗಾದವರಿಗೆ ಆಶ್ರಯ ನೀಡಲು ಕುಳಾಯಿಯಲ್ಲಿ ಮಲ್ಟಿಪರ್ಪಸ್ ಸೈಕ್ಲೋನ್ ಶೆಲ್ಟರ್ ಕೇಂದ್ರವನ್ನು ತೆರೆಯಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಅದನ್ನು ಶೀಘ್ರದಲ್ಲಿಯೇ ಮಂಜೂರಾತಿ ನೀಡಬೇಕೆಂದು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.
ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಮಾತನಾಡಿ ಜನವರಿಯಿಂದ ಈವರೆಗೆ 707 ಮಿಲಿ ಮೀಟರ್‍ನಷ್ಟು ಮಳೆಯಾಗಿ ವಾಡಿಕೆ ಗಿಂತ ಶೇಕಡಾ 58 ರಷ್ಟು ಹೆಚ್ಚು ಮಳೆಯಾಗಿದೆ, ಬೇಸಿಗೆಯಲ್ಲೂ ಸಹ ಉತ್ತಮ ಮಳೆಯಾಗಿ ನೀರಿನ ಸಮಸ್ಯೆ ಯಾಗಿರುವುದಿಲ್ಲ ಎಂದರು .
ನೇತ್ರಾವತಿ ನದಿಪಾತ್ರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವಂತಹ 48 ಗ್ರಾಮಪಂಚಾಯಿತಿಗಳನ್ನು ಈಗಾಗಲೇ ಗುರುತಿಸಲಾಗಿದೆ ನೆರೆಯಿಂದ ದುರಂತ ಸಂಭವಿಸುವುದನ್ನು  ತಡೆಯಲು ತಂಡಗಳನ್ನು ರಚಿಸಲಾಗಿದೆ ಎಂದರು.
380 ಹೋಂಗಾರ್ಡ್ ಗಳನ್ನು ಬೀಚ್‍ಗಳಲ್ಲಿ ಹಾಗೂ ಇತರೆ ಪ್ರದೇಶಗಳಲ್ಲಿ ವಿಪತ್ತು ನಿರ್ವಹಣೆ ಕಾರ್ಯಗಳಿಗೆ ಬಳಸಿಕೊಳ್ಳಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು. 
ತಗ್ಗುಪ್ರದೇಶಗಳಲ್ಲಿ ವಾಸಿಸುವ ಜನರ ಮನೆಗಳಿಗೆ ನೀರು ನುಗ್ಗುವ  ಸಂಭವವಿದ್ದಲ್ಲಿ ಅವರನ್ನು ಸ್ಥಳಾಂತರಿಸಲು ಕಾಳಜಿ ಕೇಂದ್ರಗಳನ್ನು ತೆರೆಯಲು ಗುರುತಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ವಿಪತ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲು 25 ಕೋಟಿ ರೂಗಳಷ್ಟು ವಿಪತ್ತು ನಿಧಿ ಇದೆ ಎಂದ ಅವರು ಮಳೆಯಿಂದ ಹಾನಿಗೊಳಗಾದ 26 ಮನೆಗಳಿಗೆ ಎನ್. ಡಿ.ಆರ್. ಅಫ್ ಮಾರ್ಗಸೂಚಿಯನ್ವಯ ಪರಿಹಾರ ನೀಡಲಾಗಿದೆ ಎಂದರು
ಸಭೆಯಲ್ಲಿ ಶಾಸಕ ಭರತ್ ವೈ ಶೆಟ್ಟಿ, ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ. ಕುಮಾರ್, ಅಪರ ಜಿಲ್ಲಾಧಿಕಾರಿ  ಪ್ರಜ್ಞಾ ಅಮ್ಮೆಂಬಳ, ಪೋಲಿಸ್ ವರಿಷ್ಠಾಧಿಕಾರಿ  ಹೃಷಿಕೇಶ್ ಸೋನಾವಣೆ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್, ಉಪ ವಿಭಾಗಾಧಿಕಾರಿ ಮದನ್ ಮೋಹನ್, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Read These Next

ಗಡಿಭಾಗಕ್ಕೆ ಹೊಂದಿಕೊಂಡಿರುವ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಆದೇಶ

ಮಂಗಳೂರು - ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ, ...

ಕಾರವಾರ: ಅರ್ಜಿ ಆಹ್ವಾನ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದ ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 2021-22 ನೇ ...

ಕಾರವಾರ: ಸಹಾಯವಾಣಿ ಪ್ರಾರಂಭ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳ ಮಾಹಿತಿ ಕುರಿತು ಸಾರ್ವಜನಿಕರು ಹಾಗೂ ಫಲಾನುಭವಿಗಳಿಗೆ ಅನುಕೂಲವಾಗುವಂತೆ 24/7 ...