ಧನಸಹಾಯ ಮಂಜೂರಿಗಾರಿ ಕಲ್ಲು ಕ್ವಾರಿ ಹಾಗೂ ಕಟ್ಟಡ ಕಾರ್ಮಿಕರ ಆಗ್ರಹ

Source: sonews | By Staff Correspondent | Published on 19th February 2020, 6:45 PM | Coastal News | Don't Miss |

ಭಟ್ಕಳ: ಕಳೆದ ನಾಲ್ಕು ವರ್ಷಗಳಿಂದ ತಾಲೂಕಿನ ಕಲ್ಲು ಕ್ವಾರಿ ಹಾಗೂ ಕಟ್ಟಡ ಕಟ್ಟುವ ಕಾರ್ಮಿಕರಿಗೆ ಸರ್ಕಾರದ ಸಹಾಯ ಧನ ಹಾಗೂ ಸೌಲಭ್ಯಗಳು ಸ್ಥಗಿತಗೊಂಡಿದ್ದು ರಾಜ್ಯ ಕಾರ್ಮಿಕ ಸಚಿವರು ಈ ಬಗ್ಗೆ ಗಮನ ಹರಿಸಿ ಕಾರ್ಮಿಕ ಸಮಸ್ಯೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಉತ್ತರಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎನ್.ರೇವಣಕರ್ ಸಹಾಯಕ ಆಯುಕ್ತರ ಮೂಲಕ ಮನವಿಯೊಂದನ್ನು ಸಲ್ಲಿಸಿ ಆಗ್ರಹಿಸಿದ್ದಾರೆ. 

ಕಟ್ಟಡ ಕಾರ್ಮಿಕರು 2015-16ನೇ ಸಾಲಿನಲ್ಲಿ ಮದುವೆ ಧನಸಹಾಯಕ್ಕಾಗಿ ಅರ್ಜಿಗಳನ್ನು ಸಲ್ಲಿಸಿದ್ದು ಇದುವರೆಗೂ ಧನಸಹಾಯ ಮಂಜೂರಾಗದೆ ನಾಲ್ಕು ವರ್ಷಗಳ ನಂತರ ಜ.23, 2020 ರಂದು ಕಾರವಾರದ ಕಾರ್ಮಿಕ ನಿರೀಕ್ಷಕರ ಕಚೇರಿಗೆ 180 ಅರ್ಜಿಗಳನ್ನು ಮರುಪರಿಶೀಲನೆಗಾಗಿ ಕಳುಹಿಸಿದ್ದು  ಸರ್ಕಾರ ಕಾರ್ಮಿಕರಿಗೆ ಅನ್ಯಾಯ ಮಾಡುತ್ತಿದೆ ಎಂದು ಮನವಿ ಪತ್ರದಲ್ಲಿ ಆರೋಪಿಸಲಾಗಿದೆ. ಅಲ್ಲದೆ 2017-18ನೆ ಸಾಲಿನಲ್ಲಿ ಶೈಕ್ಷಣಿಕ ಧನಸಹಾಯ ಸಲ್ಲಿಸಿರುವ ಸಾವಿರಾರು ಅರ್ಜಿಗಳನ್ನು 2ವರ್ಷ 8 ತಿಂಗಳು ಕಳೆದ ನಂತರ ಉದ್ಯೋಗ ಪ್ರಮಾಣಪತ್ರ ಸಲ್ಲಿಸುವಂತೆ ತಿಳಿಸಿದ್ದು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಕೇಳದ ಇರುವ ಮಾಹಿತಿಗಳನ್ನು 2ವರ್ಷಗಳ ನಂತರ ಕೇಳುತ್ತಿರುವುದು ಕೂಡು ಕಾರ್ಮಿಕರ ಕುರಿತಂತೆ ಸರ್ಕಾರ ಯಾವ ದೋರಣೆ ತಾಳಿದೆ ಎಂಬುದನ್ನು ಎತ್ತಿತೋರಿಸುತ್ತಿದೆ ಎಂದು ಮನವಿ ಪತ್ರದಲ್ಲಿ ಪ್ರಶ್ನಿಸಲಾಗಿದೆ. 2019ನೇ ಸಾಲಿನ ಅರ್ಜಿಗಳನ್ನು ಆನ್ ಲೈನ್ ನಲ್ಲಿ ಸಲ್ಲಿಸಿದ್ದರು ಹಲವು ತೊಂದರೆಗಳನ್ನು ಅನುಭವಿಸಬೇಕಾಗಿ ಬಂದಿದೆ. ಆದ್ದರಿಂದ ಅರ್ಜಿಗಳನ್ನು ಕಾರ್ಮಿಕ ಇಲಾಖೆಯ ಅಧಿಕಾರಿಗಳು ಸ್ವೀಕರಿವು ವ್ಯವಸ್ಥೆಯನ್ನು ಮಾಡುವಂತೆ ಮನವಿಪತ್ರದಲ್ಲಿ ತಿಳಿಸಲಾಗಿದೆ. 

ಸಹಾಕ ಆಯಕ್ತ ಸಾಜಿದ್ ಆಹಮದ್ ಮುಲ್ಲಾ ಮನವಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಿ.ಐ.ಟಿ.ಯು ಭಟ್ಕಳ ತಾಲೂಕಾಧ್ಯಕ್ಷ ಪುಂಡಲಿಕ ನಾಯ್ಕ ಉಪಸ್ಥಿತಿದ್ದರು. 

Read These Next

ಕಾರವಾರ: ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮತದಾನ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ , ಸಾರ್ವಜನಿಕರು ಹೆಚ್ಚಿನ ...