ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ನಾಗಾಂಜಲಿ ನಾಯ್ಕಗೆ ಧನಸಹಾಯ

Source: so news | By MV Bhatkal | Published on 14th May 2019, 12:55 PM | Coastal News | Don't Miss |

ಭಟ್ಕಳ: ಈ ಬಾರಿಯ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿಕೊಡುವುದರ ಮೂಲಕ ಉತ್ತರ ಕನ್ನಡ ಜಿಲ್ಲೆಯ ಕೀರ್ತಿ ಹೆಚ್ಚಿಸಿದ ಕುಮಟಾದ ನಾಗಾಂಜಲಿ ನಾಯ್ಕರನ್ನು ಭಟ್ಕಳದ ಗುರುಮಠ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಗೌರವಿಸಿ ಧನ ಸಹಾಯ ನೀಡಲಾಯಿತು.
ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಎಂ.ಆರ್‌. ನಾಯ್ಕ ಅವರು ಶಾಲು ಹೊದಿಸಿ, ಧನಸಹಾಯ ನೀಡಿ ಈಕೆಯು ಇನ್ನೂ ಹೆಚ್ಚಿನ ಸಾಧನೆ ಮಾಡುವಂತೆ ದೇವರು ಅನುಗ್ರಹಿಸಲಿ ಎಂದು ಹಾರೈಸಿದರು.
ಆಡಳಿತ ಮಂಡಳಿ ಗೌರವಾಧ್ಯಕ್ಷ ಡಿ.ಬಿ. ನಾಯ್ಕ, ಉಪಾಧ್ಯಕ್ಷ ಮೊಹನ ನಾಯ್ಕ, ಕಾರ್ಯದರ್ಶಿ ರಾಜೇಶ ನಾಯ್ಕ ಸೇರಿದಂತೆ ಕಮಿಟಿ ಪದಾಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...