ಗೃಹಲಕ್ಷ್ಮೀ ಯೋಜನೆ. ಜುಲೈ 20 ರಿಂದ ನೋಂದಣಿ ಕಾರ್ಯ.

Source: SO News | By Laxmi Tanaya | Published on 19th July 2023, 7:41 PM | State News | Don't Miss |

ಕಾರವಾರ  : ರಾಜ್ಯ ಸರ್ಕಾರದ  ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ' ಯಡಿಯಲ್ಲಿ ಫಲಾನುಭವಿಗಳ ನೊಂದಣಿ ಕಾರ್ಯವನ್ನು ಜುಲೈ 20 ರಿಂದ
ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿರುವ  207- ಗ್ರಾಮ-ಒನ್ ಕೇಂದ್ರಗಳು, 229 ಬಾಪೂಜಿ ಸೇವಾ ಕೇಂದ್ರಗಳು, 21- ಕರ್ನಾಟಕ-ಒನ್ ಕೇಂದ್ರಗಳು, 31- ಸ್ಥಳೀಯ ನಗರ ಕೇಂದ್ರಗಳನ್ನು ಪಾರಂಭಿಸಿದ್ದು ತಾಂತ್ರಿಕ ಸಿಬ್ಬಂದಿಗಳನ್ನು ನೇಮಿಸಲಾಗಿದೆ ಹಾಗೂ ಜಿಲ್ಲಾ ಮಟ್ಟದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಟಾಸ್‌ ಮಿರ್ಸ್ ಸಮಿತಿ ರಚಿಸಲಾಗಿದೆ. ಪಿ.ಡಿ.ಓ.ಗ್ರಾಮ ಲೆಕ್ಕಾಧಿಕಾರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹಾಗೂ ಮೇಲ್ವಿಚಾರಕಿಯರನ್ನು ನೋಡಲ್‌ ಅಧಿಕಾರಿಗಳಾಗಿ ನೇಮಿಸಲಾಗಿದೆ.

ಈ ಯೋಜನೆಯ ಅರ್ಹ ಫಲಾನುಭವಿಗಳು ಗ್ರಾಮ-ಒನ್‌, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್ ಹಾಗೂ ಸ್ಥಳೀಯ ನಗರಗಳಲ್ಲಿ ಪ್ರಾರಂಭಿಸಿರುವ ಕೇಂದ್ರಗಳಿಗೆ ತೆರಳಿ ಗೃಹಲಕ್ಷ್ಮಿ ಯೋಜನೆಯ ನೊಂದಣಿ ಮಾಡಿಕೊಳ್ಳಬಹುದು.

 ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ' ಎಂದು ಗುರುತಿಸಿರುವ ಮಹಿಳೆಯು ಈ ಯೋಜನೆಯ ಫಲಾನುಭವಿಯಾಗಿರುತ್ತಾರೆ. ಆದರೆ ಫಲಾನುಭವಿ ಯಜಮಾನಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿ.ಎಸ್.ಟಿ. ಪಾವತಿದಾರರಾಗಿರತಕ್ಕದ್ದಲ್ಲ., ಫಲಾನುಭವಿಯು ನೋಂದಣಿಯನ್ನು 2 ವಿಧಾನದಿಂದ ಮಾಡಿಸಬಹುದಾಗಿದೆ. ಮೊದಲನೇಯದಾಗಿ ಈಗಾಗಲೇ ರೇಷನ್ ಕಾರ್ಡಿನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ, ಸಮಯ ನೊಂದಾವಣಿ ಮಾಡಿಸುವ ಸ್ಥಳದ ವಿವರಗಳನ್ನು SMS ಮೂಲಕ ತಿಳಿಸಲಾಗುವುದು, ಗ್ರಾಮಾಂತರ ಪ್ರದೇಶದಲ್ಲಿ ಅವರು ವಾಸಿಸುವ ಗ್ರಾಮದ ಸಮೀಪವಿರುವ ಗ್ರಾಮ-ಒನ್‌ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರವಾಗಿರುತ್ತದೆ. ಹಾಗೆಯೇ ನಗರ ಪ್ರದೇಶದಲ್ಲಿ ಅವರ ಸಮೀಪವಿರುವ ಕರ್ನಾಟಕ-ಒನ್, ಬೆಂಗಳೂರು-ಒನ್, ಬಿ.ಬಿ.ಎಂ.ಪಿ. ವಾರ್ಡ್ ಕಚೇರಿ ಮತ್ತು ಸ್ಥಳೀಯ ನಗರಾಡಳಿತ ಸಂಸ್ಥೆಯ ಕಚೇರಿಗಳು ಕೇಂದ್ರವಾಗಿರುತ್ತವೆ,  ಪರ್ಯಾಯವಾಗಿ ಪ್ರಜಾಪ್ರತಿನಿಧಿ (ಸರ್ಕಾರದಿಂದ ಗುರುತಿಸಲ್ಪಟ್ಟ ಸ್ವಯಂ ಸೇವಕರು) ತಮ್ಮ ಮನೆಗೆ ಭೇಟಿ ನೀಡಿದಾಗ ಅವರಿಂದಲೂ ಸಹ ನೊಂದಾಯಿಸಿಕೊಳ್ಳಬಹುದು., ಪ್ರತಿ ಫಲಾನುಭವಿಯ ನೊಂದಾವಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902 ಗೆ ಕಾಲ್ ಮಾಡಿ ಅಥವಾ 8147500500 ನಂಬ‌ಗೆ SMS ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆಯಬಹುದಾಗಿದೆ., ಒಂದು ವೇಳೆ ನಿಗದಿಪಡಿಸಿದ ದಿನಾಂಕ ಮತ್ತು ಸಮಯದಂದು ಗ್ರಾಮ್-ಒನ್/ ಬಾಪೂಜಿ ಕೇಂದ್ರ ಕರ್ನಾಟಕ-ಒನ್/ ಬೆಂಗಳೂರು-ಒನ್ ಕೇಂದ್ರಗಳಿಗೆ ಹೋಗಲು ಸಾಧ್ಯವಾಗದೇ ಇದ್ದಲ್ಲಿ, ಅದೇ ಸೇವಾ ಕೇಂದ್ರಗಳಿಗೆ ಮುಂದಿನ ಯಾವುದೇ ದಿನಾಂಕದಂದು ಸಂಜೆ 5 ರಿಂದ 7 ಗಂಟೆಯೊಳಗೆ ಭೇಟಿ ನೀಡಿ ನೊಂದಾಯಿಸಿಕೊಳ್ಳಬಹುದಾಗಿದೆ.

ಯೋಜನೆಯಡಿ ನೋಂದಾಯಿಸಿಕೊಳ್ಳಲು ಪಡಿತರ ಚೀಟಿ ಸಂಖ್ಯೆ, ಆಧಾರ ಕಾರ್ಡ್ ಸಂಖ್ಯೆ, ಪತಿಯ ಆಧಾರ ಕಾರ್ಡ್ ಸಂಖ್ಯೆ, ಮತ್ತು ಬ್ಯಾಂಕ್ ಖಾತೆಯ ಪಾಸ್ ಬುಕ್ (ಆಧಾರ ನಂಬರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಹೊರತುಪಡಿಸಿ, ಪರ್ಯಾಯ ಬ್ಯಾಂಕ್‌ ಖಾತೆಗೆ ಹಣ ವರ್ಗಾವಣೆ ಬಯಸಿದಲ್ಲಿ ಸದರಿ ಬ್ಯಾಂಕ್ ಖಾತೆಯ ಪಾಸ್ ಬುಕ್) ಮಾಹಿತಿ ಅಗತ್ಯವಿರುತ್ತದೆ. ನೊಂದಣಿಗೆ ನಿಗದಿಪಡಿಸಿದ .ದಿನಾಂಕದಂದು ಎಲ್ಲಾ ಮಾಹಿತಿಗಳೊಂದಿಗೆ ಫಲಾನುಭವಿಗಳು ಕೇಂದ್ರಕ್ಕೆ ಹಾಜರಾಗುವುದು, ಗ್ರಾಮ್-ಒನ್ / ಕೇಂದ್ರ ಕರ್ನಾಟಕ ಒನ್ / ಬೆಂಗಳೂರು ಒನ್ ಕೇಂದ್ರಗಳಲ್ಲಿ ನೊಂದಾಯಿಸಿಕೊಂಡಾಗ ಮಂಜೂರಾತಿ ಪತ್ರವನ್ನು ಕೂಡ ನೀಡಲಾಗುವುದು. ಪ್ರಜಾಪ್ರತಿನಿಧಿ ಮೂಲಕ ನೊಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರವನ್ನು ತದನಂತರ ತಮ್ಮ ಮನೆಗೆ ತಲುಪಿಸುವುದು, ಪ್ರಜಾಪ್ರತಿನಿಧಿ ಮೂಲಕ ಅಥವಾ ಗ್ರಾಮ್-ಒನ್/ ಬಾಪೂಜಿ ಕೇಂದ್ರ ಕರ್ನಾಟಕ-ಒನ್/ ಬೆಂಗಳೂರು-ಒನ್ ಕೇಂದ್ರಗಳಲ್ಲಿ ನೊಂದಾಯಿಸಿಕೊಂಡಲ್ಲಿ ಅರ್ಜಿದಾರರು ನೀಡಿದ ಮೊಬೈಲ್ ಸಂಖ್ಯೆಗೆ SMS ಮೂಲಕ ಮಂಜೂರಾತಿ ಬಗ್ಗೆ ಸಂದೇಶ ರವಾನಿಸಲಾಗುವುದು.

ಒಂದು ವೇಳೆ ಫಲಾನುಭವಿಯು ಗ್ರಾಮ್-ಒನ್/ ಬಾಪೂಜಿ ಕೇಂದ್ರ ಕರ್ನಾಟಕ-ಒನ್/ ಬೆಂಗಳೂರು- ಒನ್‌ ಕೇಂದ್ರಗಳಲ್ಲಿ ನೊಂದಾಯಿಸಿಕೊಂಡಿದಲ್ಲಿ, ಆನಂತರ ಪ್ರಜಾಪ್ರತಿನಿಧಿ ಅವರ ಮನೆಗೆ ಭೇಟಿ ನೀಡಿ ನೊಂದಾಯಿಸಲು ಪ್ರಯತ್ನಿಸಿದರೆ ಈಗಾಗಲೇ ನೊಂದಾಯಿಸಿರುವ ಮಾಹಿತಿ ವ್ಯಕ್ತವಾಗುತ್ತದೆ. ಈಗಾಗಲೇ ಆಧಾರ ಜೋಡಣೆಯಾಗಿರುವ ಫಲಾನುಭವಿ ಖಾತೆಗೆ ಮಾಹೆಯಾನ ರೂ. 2000/- ಗಳನ್ನು ಡಿ.ಬಿ.ಟಿ ಮೂಲಕ ಜಮೆ ಮಾಡಲಾಗುವುದು. ಒಂದು ವೇಳೆ ಫಲಾನುಭವಿಗಳು ಇಚ್ಚಿಸಿದಲ್ಲಿ ಪರ್ಯಾಯ ಬ್ಯಾಂಕ್ ಖಾತೆಯನ್ನು ನೀಡಬಹುದಾಗಿರುತ್ತದೆ. ಸದ್ರಿ ಬ್ಯಾಂಕ್ ಖಾತೆಗೆ ಮಾಹೆಯಾನ ರೂ.2000/- ಗಳನ್ನು ಆರ್.ಟಿ.ಜಿ.ಎಸ್. ಮೂಲಕ ಜಮೆ ಮಾಡಲಾಗುವುದು.  ಯೋಜನೆಯಡಿ ಫಲಾನುಭವಿಯು ಯಾವುದೇ ಶುಲ್ಕವನ್ನು ಪಾವತಿಸತಕ್ಕದ್ದಲ್ಲ.  ಈ ಯೋಜನೆಯಡಿ ಯಾವುದೇ ಅಂತಿಮ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿರುವುದಿಲ್ಲ. ಆದ್ದರಿಂದ ಒಂದು ವೇಳೆ ನಿಗದಿತ ದಿನಾಂಕ / ಸಮಯಕ್ಕೆ ನೊಂದಾಯಿಸಿಕೊಳ್ಳಲು ಸಾಧ್ಯವಾಗದೇ ಇದ್ದಲ್ಲಿ ಮುಂದೆ ಯಾವುದೇ ದಿನಾಂಕ/ ಸಮಯದಲ್ಲಿ ನೊಂದಾಯಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ್ ಕವಳಿಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಹನೂರು: ಇಂಡಿಗನ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂಗೆ ಹಾನಿ ತಹಶೀಲ್ದಾರ್, ಇನ್‌ಸ್ಪೆಕ್ಟರ್, ಚುನಾವಣಾಧಿಕಾರಿ ಸಹಿತ ಹಲವರಿಗೆ ಗಾಯ

ಮಹದೇಶ್ವರ ಬೆಟ್ಟ ಸಮೀಪದ ಇಂಡಿಗನತ್ತ ಮೆಂದಾರೆ ಮತಗಟ್ಟೆ ಬಳಿ ಮತದಾನ ನಡೆಯುವ ಬದಲು ರಣರಂಗವಾಗಿ ಮಾರ್ಪಟ್ಟು ಮತಗಟ್ಟೆ ಸಂಪೂರ್ಣ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...