ಗೃಹಲಕ್ಷ್ಮಿ ಯೋಜನೆ : ಜಿಲ್ಲೆಯ ಮಹಿಳೆಯರಿಗೆ ಪ್ರತೀ ತಿಂಗಳು 70 ಕೋಟಿ ರೂ ನೆರವು : ಸಚಿವ ಮಂಕಾಳ ವೈದ್ಯ

Source: SO News | By Laxmi Tanaya | Published on 31st August 2023, 8:48 AM | Coastal News | Don't Miss |

ಕಾರವಾರ : ರಾಜ್ಯ ಸರ್ಕಾರದ ಅತ್ಯಂತ ಮಹತ್ವದ ಯೋಜನೆಯಾದ ಪ್ರತೀ ಕುಟುಂಬದ ಮನೆಯ ಯಜಮಾನಿಗೆ ಪ್ರತೀ ತಿಂಗಳು 2000 ರೂ ನೀಡುವ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದಿಂದ ಜಿಲ್ಲೆಯ ಮಹಿಳೆಯರಿಗೆ ಪ್ರತೀ ತಿಂಗಳು 70 ಕೋಟಿ ರೂ ನೆರವು ದೊರೆಯಲಿದೆ ಎಂದು ರಾಜ್ಯದ ಮೀನುಗಾರಿಕೆ ಬಂದರು, ಮತ್ತು ಒಳನಾಡು ಜಲ ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳು ವೈದ್ಯ ಹೇಳಿದರು.

      ಅವರು  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಉತ್ತರ ಕನ್ನೆ ಜಿಲ್ಲೆ ಹಾಗೂ ನಗರಸಭೆ ಕಾರವಾರ ಸಹಯೋಗದಲ್ಲಿ , ನಗರದ ಪೆÇಲೀಸ್ ಕಲ್ಯಾಣ ಮಂಟಪದಲ್ಲಿ ನಡೆದ ಗೃಹಲಕ್ಷ್ಮಿ ಯೋಜನೆಯ ಅನುμÁ್ಠನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

      ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಒಟ್ಟು 3.46 ಲಕ್ಷ ಮಹಿಳೆಯರು ಅರ್ಹರಿದ್ದು, ಇದುವರೆಗೆ 2.97 ಲಕ್ಷ ಮಂದಿ ನೊಂದಣಿ ಮಾಡಿಕೊಂಡಿದ್ದಾರೆ, ಜಿಲ್ಲೆಯ 1,17,335 ಮಂದಿ ಮಹಿಳೆಯರ ಖಾತೆಗೆ ಇಂದು ಡಿಬಿಟಿ ಮೂಲಕ 23.46 ಕೋಟಿ ರೂ ವರ್ಗಾವಣೆಯಾಗಲಿದೆ.  ಬಾಕಿ ಉಳಿದರಿಗೆ 5 ದಿನಗಳ ಒಳಗೆ ಮೊತ್ತ ಜಮೆ ಆಗಲಿದ್ದು, ಜಿಲ್ಲೆಗೆ ಗೃಹಲಕ್ಷ್ಮಿ ಯೋಜನೆಗೆ ಪ್ರತೀ ತಿಂಗಳು 70 ಕೋಟಿ ವೆಚ್ವಾಗಲಿದೆ ಎಂದರು.

      ಗೃಹಲಕ್ಷ್ಮಿ ಯೋಜನೆಯ ನೊಂದಣಿಯಲ್ಲಿ ಜಿಲ್ಲೆಯ ಶೇ.82 ರಷ್ಟು ಪಗತಿ ಸಾಧಿಸಿದ್ದು, ಬಾಕಿ ಉಳಿದವರ ನೊಂದಣಿ ಕಾರ್ಯವನ್ನು ಶೀಘ್ರದಲ್ಲಿ ಮಾಡಿ, ಜಿಲ್ಲೆಯ ಎಲ್ಲಾ ಅರ್ಹ ಮಹಿಳೆಯರಿಗೆ ಯೋಜನೆಯ ನೆರವು ಒದಗಿಸಲಾಗುವುದು ಎಂದರು.

      ನಮ್ಮ ಸರ್ಕಾರವು ಅಧಿಕಾರಕ್ಕೆ ಬಂದ 100 ದಿನದಲ್ಲೇ ಚುನಾವಣಾ ಪೂರ್ವದಲ್ಲಿ ನೀಡಿದ್ದ 5 ಗ್ಯಾರಂಟಿಗಳಲ್ಲಿ 4 ಗ್ಯಾರಂಟಿಗಳನ್ನು ಈಡೇರಿಸಿದ್ದು, ಯುವನಿಧಿ ಯೋಜನೆಯನ್ನು ನಿಗಧಿತ ಅವಧಿಯೊಳಗೆ ಜಾರಿಗೆ ತರಲಾಗುವುದು. ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಬಡವರು ಮತ್ತು ಜನಸಮಾನ್ಯರ ಅಭಿವೃದ್ಧಿಗಾಗಿ ರೂಪಿಸಿದ್ದು ಈ ಯೋಜನೆಗಳ ಬಗ್ಗೆ ವಿರೋಧಪಕ್ಷಗಳು ಮಾಡುವ ಠೀಕೆಗಳಲ್ಲಿ ಯಾವುದೇ ಹುರುಲಿಲ್ಲ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಸರ್ಕಾರಕ್ಕೆ ಯಾವುದೇ ಹೊರೆ ಆಗುತ್ತಿಲ್ಲ ಹಾಗು ಯೋಜನೆಯ ಅನುಷ್ಠಾನಕ್ಕೆ ಹಣಕಾಸಿನ ಕೊರತೆ ಇಲ್ಲ. ರಾಜ್ಯದ ಜನರಿಗೆ ಕೊಟ್ಟ ಮಾತಿನಂತೆ, ನುಡಿದಂತೆ ನಡೆದ ಸರ್ಕಾರ ನಮ್ಮದು ಎಂದರು.

      ಕಾರ್ಯಕ್ರಮದ ಆಧ್ಯಕ್ಷತೆ ವಹಿಸಿದ್ದ ಶಾಸಕ ಸತೀಶ್ ಸೈಲ್ ಮಾತನಾಡಿ, ಪಕ್ಷ ಭೇಧವಿಲ್ಲದೇ ಎಲ್ಲರಿಗೂ ಗ್ಯಾರಂಟಿ ಯೋಜನೆಯ ಪ್ರಯೋಜನವನ್ನು ತಲುಪಿಸಲಾಗುತ್ತಿದೆ, ಶೀಘ್ರದಲ್ಲಿ ಯುವನಿಧಿ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದರು.

      ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಜಿಲ್ಲಾ ಪಂಚಾಯತ್ ಸಿಇಓ ಈಶ್ವರ ಕುಮಾರ ಕಾಂದೂ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್.ಎನ್, ಕಾರವಾರ ಉಪ ವಿಭಾಗಾಧಿಕಾರಿ ಜಯಲಕ್ಷ್ಮೀ ರಾಯಕೋಡ್, ನಗರಸಭೆಯ ಪೌರಾಯುಕ್ತ ಚಂದ್ರಮೌಳಿ, ಜಿಲ್ಲಾ ನಗರಾಭಿವೃಧ್ದಿ ಕೋಶದ ಯೋಜನಾ ನಿರ್ದೇಶಕಿ ಸ್ಟೆಲಾ ವರ್ಗೀಸ್ ಮತ್ತಿತರರು ಇದ್ದರು.

 ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಉಪ ನಿರ್ದೇಶಕಿ ಡಾ.ಹೆಚ್.ಹೆಚ್.ಕುಕನೂರು ಸ್ವಾಗತಿಸಿದರು. ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ರಂಗಮಂದಿರದಿಂದ ಪೊಲೀಸ್ ಕಲ್ಯಾಣ ಮಂಟಪದವರೆಗೆ ನಡೆದ ಮೆರವಣಿಗೆಗೆ ಜಿಲ್ಲಾಧಿಕಾರಿ ಗಂಗುಬಾಯಿ ಮಾನಕರ ಚಾಲನೆ ನಿಡಿದರು. ಮಹಿಳಾ ಕಲಾತಂಡಗಳಿಂದ ಡೊಳ್ಳು ಕುಣಿತ ಮತ್ತು ಡಮಾಮಿ ನೃತ್ಯದೊಂದಿಗೆ ಮೆರವಣಿಗೆ ಮತ್ತು ಮಹಿಳೆಯರಿಂದ ಜಾಥಾ ನಡೆಯಿತು.

Read These Next

ಬೀಫ್ ಎಕ್ಸ್‌ಪೋರ್ಟ್ ಕಂಪನಿ ಸೇರಿದಂತೆ ಪಾಕಿಸ್ತಾನಿ ಏಜೆನ್ಸಿಗಳಿಂದಲೂ ಬಿಜೆಪಿ ದೇಣಿಗೆ ತೆಗೆದುಕೊಂಡಿದೆ- ಭಟ್ಕಳದಲ್ಲಿ ಕಾಂಗ್ರೆಸ್ ಸುದ್ದಿಗೋಷ್ಠಿ

ಭಟ್ಕಳ:  ಗೋಹತ್ಯೆ ವಿರೋಧಿಸುವ ಬಿಜೆಪಿ ಬೀಫ್ ರಫ್ತು ಮಾಡುವ ಕಂಪನಿ ಸೇರಿದಂತೆ ಪಾಕಿಸ್ಥಾನಿ ಎಜೆನ್ಸಿಗಳಿಂದಲೂ ದೇಣಿಗೆ ...