ಆಗಸ್ಟ್‌ನಲ್ಲಿ ಗೃಹಲಕ್ಷ್ಮಿಯರಿಗೆ ಹಣ ಖಚಿತ; ಜುಲೈ 14 ರಿಂದ ಅರ್ಜಿ ಸಲ್ಲಿಕೆ ಆರಂಭ

Source: Vb | By I.G. Bhatkali | Published on 29th June 2023, 11:53 PM | State News |

ಬೆಂಗಳೂರು: ಮನೆಯೊಡತಿಗೆ 2 ಸಾವಿರ ರೂ. ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯಡಿ ಆಗಸ್ಟ್ ತಿಂಗಳಿನಲ್ಲಿ ಫಲಾನುಭವಿಗಳಿಗೆ ಹಣ ತಲುಪಲಿದೆ' ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರತ್ಯೇಕ ಆಪ್ ರೂಪಿಸಿದ್ದು, ಇದಕ್ಕೆ ಸಚಿವ ಸಂಪುಟ ಸಭೆಯಲ್ಲಿಯೂ ಒಪ್ಪಿಗೆ ನೀಡಲಾಗಿದೆ. ಹಾಗಾಗಿ,

ಮುಂದಿನ ದಿನಗಳಲ್ಲಿ ಆ್ಯಪ್ ಮೂಲಕ ಅರ್ಜಿ ಸಲ್ಲಿಸಲು ಎಲ್ಲ ತಯಾರಿ ಮಾಡಿದ್ದೇವೆ' ಎಂದು ತಿಳಿಸಿದರು.

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇರುವುದಿಲ್ಲ. ಯಾವ ಶುಲ್ಕವೂ ಇರುವುದಿಲ್ಲ. ಮಧ್ಯವರ್ತಿಗಳ ಹಾವಳಿ ತಪ್ಪಿಸಲೆಂದೇ ಅಪ್ ಮಾಡಲಾಗಿದೆ ಎಂದ ಅವರು, ಸಚಿವ ಸಂಪುಟದ ತೀರ್ಮಾನದಂತೆ ಜುಲೈ 14ರಿಂದ ಅರ್ಜಿ ಸಲ್ಲಿಸಲು ಅವಕಾಶ ದೊರೆಯಲಿದೆ ಎಂದು ಮಾಹಿತಿ ನೀಡಿದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...