ದಿಢೀರ್ ಬೆಳವಣಿಗೆಯಲ್ಲಿ ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ!

Source: The New Indian Express | By MV Bhatkal | Published on 11th September 2021, 7:16 PM | National News | Don't Miss |

ಗಾಂಧಿನಗರ: ದಿಢೀರ್ ವಿದ್ಯಮಾನವೊಂದರಲ್ಲಿ  ಗುಜರಾತಿನ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾಣಿ ಶನಿವಾರ ಸಂಜೆ ರಾಜೀನಾಮೆ ನೀಡಿದ್ದಾರೆ.
ಮುಂದಿನ ವರ್ಷ ಗುಜರಾತ್ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ದಿಢೀರ್ ಬೆಳವಣಿಗೆಯಲ್ಲಿ ವಿಜಯ್ ರೂಪಾನಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.  ಆದರೆ, ಇದಕ್ಕೆ ಏನು ಕಾರಣ ಎಂಬುದನ್ನು  ಬಹಿರಂಗಪಡಿಸಲಿಲ್ಲ.
ಉತ್ತರಾಖಂಡದ ತಿರಾತ್ ಸಿಂಗ್ ರಾವತ್ , ಕರ್ನಾಟಕದ ಬಿ.ಎಸ್. ಯಡಿಯೂರಪ್ಪ ನಂತರ ಈ ವರ್ಷ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಮೂರನೇ ಮುಖ್ಯಮಂತ್ರಿ  ವಿಜಯ್ ರೂಪಾನಿ ಆಗಿದ್ದಾರೆ. 
2016 ಆಗಸ್ಟ್ ಏಳರಿಂದ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ಪ್ರಸ್ತುತ ಪಶ್ಟಿಮ ರಾಜ್ ಕೋಟ್  ಕ್ಷೇತ್ರದಿಂದ ಗುಜರಾತ್ ವಿಧಾನಸಭೆಯ ಸದಸ್ಯರಾಗಿದ್ದಾರೆ. 

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...