ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

Source: SO News | By Laxmi Tanaya | Published on 23rd April 2024, 8:48 AM | State News | Don't Miss |

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ನಿಗದಿಯಾಗಿದ್ದ ಸೋಮವಾರದಂದು ನಾಲ್ಕು ಜನ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂದಕ್ಕೆ ಪಡೆದಿದ್ದು, ಅಂತಿಮವಾಗಿ ಒಟ್ಟು 14 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿ ಉಳಿದಿದ್ದಾರೆ ಎಂದು ಕಲಬುರಗಿ ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಜಿಯಾ ತರನ್ನುಮ್  ತಿಳಿಸಿದ್ದಾರೆ. 

ಸ್ವತಂತ್ರ ಅಭ್ಯರ್ಥಿಗಳಾದ ವಿಲಾಸ ಎಂ. ಕಣಮಸ್ಕರ್, ಕಾಶಿನಾಥ ಸಾಯಬಣ್ಣ ಪಾಪಿ, ಶರಣಬಸಪ್ಪ ಪೀರಪ್ಪ ಹಾಗೂ ವೆಂಕಟೇಶ್ವರರಾವ್ ಅಮೃತರಾವ್ ಅವರು ನಾಮಪತ್ರ ಹಿಂಪಡೆದ ಅಭ್ಯರ್ಥಿಗಳಾಗಿದ್ದಾರೆ.

ಅಂತಿಮ ಕಣದಲ್ಲಿ ಉಳಿದ ಅಭ್ಯರ್ಥಿಗಳ ವಿವರ : ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ, ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಉಮೇಶ ಗೋಪಾಲದೇವ, ಭಾರತೀಯ ಜನ ಸಾಮ್ರಾಟ್ ಪಾರ್ಟಿ ಅಭ್ಯರ್ಥಿ ತಾರಾಬಾಯಿ ವಿಶ್ವೇಶ್ವರಯ್ಯ ಬೋವಿ, ಸೋಷಾಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಅಭ್ಯರ್ಥಿ ಶರಣಬಸಪ್ಪ ಮಲ್ಲಿಕಾಜಪ್ಪ, ಪ್ರಹಾರ್ ಜನಶಕ್ತಿ ಪಾರ್ಟಿ ಅಭ್ಯರ್ಥಿ ವಿಜಯಕುಮಾರ ಭೀಮಶಾ, ಉತ್ತಮ ಪ್ರಜಾಕೀಯ ಪಾರ್ಟಿ ಅಭ್ಯರ್ಥಿ ನಾಗೇಂದ್ರ ಎಚ್, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ವಿಜಯ ಗೋವಿಂದ ಜಾಧವ, ಭಾರತೀಯ ಬಹುಜನ ಕ್ರಾಂತಿ ದಳ ಅಭ್ಯರ್ಥಿ ರಾಜಕುಮಾರ ಗೋಪಿನಾಥ, ಬಹುಜನ್ ಸಮಾಜ ಪಾರ್ಟಿ ಅಭ್ಯರ್ಥಿ ಹುಚ್ಚಪ್ಪ ಬಸಪ್ಪ, ಸ್ವತಂತ್ರ ಅಭ್ಯರ್ಥಿಗಳಾದ ರಮೇಶ ಭೀಮಸಿಂಗ್, ಆನಂದ ಸಿದ್ದಣ್ಣ, ಶರಣಪ್ಪ ಮರಲಿಂಗಪ್ಪ, ಜ್ಯೋತಿ ರಮೇಶ ಹಾಗೂ ಸುಂದರ ಮೇಘು ಅವರು ಅಂತಿಮ ಸ್ಪರ್ಧಾ ಕಣದಲ್ಲಿ ಉಳಿದಿದ್ದಾರೆ.

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...