ಹಜ್‍ಯಾತ್ರೆ : ಅರ್ಜಿ ಸಲ್ಲಿಕೆ ಆರಂಭ

Source: SO News | By Laxmi Tanaya | Published on 4th December 2023, 8:31 PM | Coastal News | Don't Miss |

ಮಂಗಳೂರು : 2024ರ ವರ್ಷದಲ್ಲಿ ಹಜ್ ಯಾತ್ರೆಗೆ ಹೋಗಲು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಡಿಸೆಂಬರ್ 4ರಿಂದ ಆರಂಭವಾಗಿದೆ.

ಭಾರತ ಸರಕಾರದ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯದ 2023ರ ಹಜ್ ನೀತಿಯಂತೆ ಹಜ್ ಯಾತ್ರೆ ನಡೆಯಲಿದೆ. ಅರ್ಜಿಗಳನ್ನು ಆನ್‍ಲೈನ್ ಮೂಲಕ ಭಾರತೀಯ ಹಜ್ ಸಮಿತಿಯ ವೆಬ್‍ಸೈಟ್ hಚಿರಿಛಿommiಣಣee.gov.iಟಿ ಅಥವಾ ಮೊಬೈಲ್ ಆ್ಯಪ್ “ಊಂಎ SUಗಿIಆಊಂ” ದಲ್ಲಿ ಭರ್ತಿ ಮಾಡಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಮೊದಲು ನಿಯಮಗಳನ್ನು ಜಾಗರೂಕತೆಯಿಂದ ಓದಿ ಬಳಿಕ ಅರ್ಜಿಗಳನ್ನು ಭರ್ತಿ ಮಾಡಬೇಕು. ಅರ್ಜಿದಾರರು 2025ರ ಜನವರಿ 31ರ ವರೆಗೆ ಅವಧಿ ಇರುವ ಪಾಸ್‍ಪೋರ್ಟ್ ಹೊಂದಿರಬೇಕು. ಅರ್ಜಿ ಸಲ್ಲಿಕೆಗೆ ಡಿಸೆಂಬರ್ 20 ಕೊನೆಯ ದಿನವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಅಬ್ದುಲ್ ನಾಸೀರ್ ಲಕ್ಕಿಸ್ಟಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...