'ಅಗ್ನಿಪಥ್'ಗೆ ಅರ್ಜಿ ಸಲ್ಲಿಸುವವರಿಗೆ ಬಹಿಷ್ಕಾರ; ಹರ್ಯಾಣ ಖಾಪ್ ಪಂಚಾಯತ್ ಬೆದರಿಕೆ

Source: Vb | By I.G. Bhatkali | Published on 25th June 2022, 12:42 AM | National News |
ಚಂಡಿಗಡ: ಹರ್ಯಾಣದಲ್ಲಿ ಸರಸ ಪಡೆಗಳಿಗೆ ನೇಮಕಾತಿ ಯೋಜನೆ 'ಅಗ್ನಿಪಥ್'ನಲ್ಲಿ ಪಾಲ್ಗೊಳ್ಳುವ ಯುವಕರನ್ನು ಸಾಮಾಜಿಕವಾಗಿ ದೂರ ಇರಿಸಲಾಗುವುದು ಎಂದು ಖಾಪ್ ಪಂಚಾಯತ್‌ ನ ನಾಯಕರು ಹಾಗೂ ರೈತ ಒಕ್ಕೂಟದ ಪ್ರತಿನಿಧಿಗಳು ಘೋಷಿಸಿದ್ದಾರೆ.

'ಅಗ್ನಿಪಥ್' ಯೋಜನೆಯನ್ನು ಬೆಂಬಲಿಸುತ್ತಿರುವ ಆಡಳಿತಾರೂಢ ಬಿಜೆಪಿ- ಜೆಜೆಪಿ ಮೈತ್ರಿ ಕೂಟದ ನಾಯಕರು ಹಾಗೂ ಕಾರ್ಪೋರೇಟ್ ಸಂಸ್ಥೆಗಳನ್ನು ಬಹಿಷ್ಕರಿಸುವಂತೆ ಅವರು ಕರೆ ನೀಡಿದ್ದಾರೆ.

ಸಶಸ್ತ್ರ ಪಡೆಗಳಿಗೆ ಕೇವಲ 4 ವರ್ಷಗಳ ಸೇವೆಗೆ ಮಾತ್ರ ನಿಯೋಜಿಸಲಾಗುತ್ತದೆ. ಆನಂತರ ಕನಿಷ್ಠ ಶೇ.75 ಮಂದಿ ಪಿಂಚಣಿ ಸೌಲಭ್ಯ ಇಲ್ಲದೆ ಹೊರ ಬರಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಅಗ್ನಿಪಥ್ ಯೋಜನೆ ವಿರುದ್ಧ ರಾಷ್ಟ್ರಾದ್ಯಂತ ವ್ಯಾಪಕ ಪ್ರತಿಭಟನೆ ಭುಗಿಲೆದ್ದಿತ್ತು.

ಈ ಬಗ್ಗೆ ಹರ್ಯಾಣದ ರೋಹಕ್ ಜಿಲ್ಲೆಯ ಸಾಂಪ್ಲಾ ಪಟ್ಟಣದಲ್ಲಿ ಬುಧವಾರ ಸಭೆ ಕರೆಯಲಾಗಿತ್ತು, ಈ ಸಭೆಯಲ್ಲಿ ಹರ್ಯಾಣ, ರಾಜಸ್ಥಾನ, ಹಿಮಾಚಲಪ್ರದೇಶ ಹಾಗೂ ಪಂಜಾಬ್‌ ನ ವಿವಿಧ ಖಾಪ್ ಗಳು ಹಾಗೂ ಇತರ ಸಮುದಾಯ ಗುಂಪುಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿ ಸಂಘಟನೆಗಳ ಸದಸ್ಯರು ಕೂಡ ಭಾಗಿಯಾಗಿದ್ದರು.

ಈ ಯೋಜನೆಗೆ ಅರ್ಜಿ ಸಲ್ಲಿಸುವವರನ್ನು ಸಾಮಾಜಿಕವಾಗಿ ದೂರ ಇರಿಸಲು ನಾವು ಪ್ರಯತ್ನಿಸಲಿದ್ದೇವೆ. ಅಗ್ನಿವೀರ್ ಹೆಸರಿನಲ್ಲಿ ಯುವ ಜನರನ್ನು ಕಾರ್ಮಿಕರಾಗಿ ಗುತ್ತಿಗೆ ತೆಗೆದುಕೊಳ್ಳಲು ಬಯಸುವ ಈ ಯೋಜನೆಯನ್ನು ನಾವು ಬಹಿಷ್ಕರಿಸುತ್ತೇವೆ' ಎಂದು ಸಭೆಯಲ್ಲಿ ಭಾಗವಹಿಸಿದ್ದ ಧಂಕರ್ ಖಾಪ್‌ನ ಮುಖ್ಯಸ್ಥ ಓಂ ಪ್ರಕಾಶ್ ಧಂಕ‌ ಹೇಳಿದ್ದಾರೆ. 'ಅಗ್ನಿಪಥ್' ಯೋಜನೆಗೆ ಅರ್ಜಿ ಸಲ್ಲಿಸಿದವರನ್ನು ಬಹಿಷ್ಕರಿಸಲಾಗುವುದೇ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ನಾವು ಬಹಿಷ್ಕಾರ ಎಂಬ ಪದ ಬಳಸುವುದಿಲ್ಲ. ಆದರೆ, ಅಂತಹ ಜನರಿಂದ ಸಮುದಾಯ ಅಂತರ ಕಾಯ್ದುಕೊಳ್ಳಲಿದೆ' ಎಂದರು.

ಈ ಯೋಜನೆಗೆ ಬೆಂಬಲ ನೀಡಿದ ರಾಜಕಾರಣಿಗಳು ಹಾಗೂ ಕಾರ್ಪೋರೇಟ್‌ಗಳನ್ನು ಬಹಿಷ್ಕರಿಸುವಂತೆ ಅವರು ಜೂನ್ 14ರಂದು ಕರೆ ನೀಡಿದ್ದರು. “ಈ ಕಂಪೆನಿಗಳಿಂದ 10 ಸಾವಿರ ರೂಪಾಯಿಗಿಂತ ಹೆಚ್ಚು ಬೆಲೆಯ ಯಾವುದೇ ಉತ್ಪನ್ನವನ್ನು ಖರೀದಿಸದಂತೆ ಆಗ್ರಹಿಸಲಾಗುವುದು' ಎಂದು ಅವರು ಹೇಳಿದ್ದಾರೆ. ಇದಕ್ಕೆ ಕೆಲವು ವಾರಗಳ ಹಿಂದೆ ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಕೆಲವು ಬಿಜೆಪಿ ನಾಯಕರು ಅವಹೇಳನಕಾರಿ ಹೇಳಿಕೆ ನೀಡಿದ ಬಳಿಕ ಗಲ್ಸ್ ದೇಶಗಳಲ್ಲಿ ಭಾರತೀಯ ಉತ್ಪನ್ನವನ್ನು ಬಹಿಷ್ಕರಿಸಿದ ವರದಿಯನ್ನು ಉಲ್ಲೇಖಿಸಿದ್ದಾರೆ.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...