ರೈತರ ಬೆಳೆ ಸಾಲಗಳ ಮೇಲಿನ ಬಡ್ಡಿ ಮನ್ನಾ; ಹರ್ಯಾಣ ಮುಖ್ಯಮಂತ್ರಿ

Source: Vb | By I.G. Bhatkali | Published on 24th February 2024, 10:03 AM | National News |

ಚಂಡಿಗಡ: ಹರ್ಯಾಣ ಗಡಿಯಲ್ಲಿ ತೀವ್ರಗೊಂಡಿರುವ ರೈತರ ಪ್ರತಿಭಟನೆ ನಡುವೆಯೇ ಶುಕ್ರವಾರ 2024-25ನೇ ಸಾಲಿಗಾಗಿ 1.89 ಲ.ಕೋ. ರೂ.ಗಳ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಮನೋಹರಲಾಲ್ ಖಟ್ಟರ್ ಅವರು ಕೆಲವು ಬೆಳೆ ಸಾಲಗಳ ಮೇಲಿನ ಬಡ್ಡಿ ಮತ್ತು ದಂಡವನ್ನು ಮನ್ನಾ ಮಾಡುವುದಾಗಿ ಪ್ರಕಟಿಸಿದರು.

ತನ್ನ ಸರಕಾರವು ರೈತರ ಕಲ್ಯಾಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಂಡಿದೆ ಮತ್ತು 14 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ)ಯನ್ನು ನೀಡಲಾಗುತ್ತಿದೆ ಎಂದು ತನ್ನ ಬಜೆಟ್ ಭಾಷಣದಲ್ಲಿ ಪ್ರತಿಪಾದಿಸಿದ ಖಟ್ಟರ್, 'ಮೇರಿ ಫಸಲ್ ಮೇರಾ ಬೋರಾ (ನನ್ನ ಬೆಳೆ ನನ್ನ ಮಾಹಿತಿ)' ಪೋರ್ಟಲ್‌ನಲ್ಲಿ ನೋಂದಣಿಯನ್ನು ಹೊಂದಿರುವ ರೈತರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ 2023,ಸೆ.30ರವರೆಗೆ ಪಡೆದುಕೊಂಡಿರುವ ಬೆಳೆಸಾಲಗಳ ಅಸಲನ್ನು 2024 ಮೇ 31 ರೊಳಗೆ ಮರುಪಾವತಿಸಿದರೆ ಬಡ್ಡಿ ಮತ್ತು ದಂಡಗಳನ್ನು ಮನ್ನಾ ಮಾಡಲಾಗುವುದು ಎಂದು ತಿಳಿಸಿದರು. ಬಳಿಕ ರೈತರು ಖಾರಿಫ್ ಬೆಳೆ ಸಾಲಕ್ಕಾಗಿ ಅರ್ಹರಾಗಿರುತ್ತಾರೆ ಎಂದರು.

ನೀವು ರೈತರ ಬಗ್ಗೆ ಮಾತನಾಡುತ್ತಿದ್ದೀರಿ, ಆದರೆ ರೈತರ ವಿರುದ್ದ ರಾಷ್ಟ್ರೀಯ ಭದ್ರತಾ ಕಾಯ್ದೆಯನ್ನು ಹೇರಲು ಮುಂದಾಗಿರುವುದು ಏಕೆ ಎಂದು ಪ್ರಶ್ನಿಸಿದ ಪ್ರತಿಪಕ್ಷ ನಾಯಕ ಭೂಪಿಂದರ್ ಸಿಂಗ್ ಹೂಡಾ ಅವರು, ರೈತರು ಹರ್ಯಾಣದ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಹೇಳಿದರು.

Read These Next

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...