ಹಾಸನ ಅರ್ಥಪೂರ್ಣವಾಗಿ ಮೂಡಿ ಬಂದ ಗಣರಾಜ್ಯ ಕಾರ್ಯಕ್ರಮಗಳು

Source: S.O. News Service | By MV Bhatkal | Published on 26th January 2020, 8:18 PM | Coastal News | Don't Miss |

ಹಾಸನ:ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿಂದು 70ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಧ್ವಜಾರೋಹಣ ಮಾಡಿ ನಂತರ ಜನ ಪ್ರತಿನಿಧಿಗಳೊಂದಿಗೆ ಮತ್ತು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.
ಗೌರವ ವಂದನೆ ಸ್ವೀಕರಿಸಿದ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಜನತೆಗೆ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು.
ನಂತರ ಮಾತನಾಡಿದ ಅವರು ಸಮಗ್ರ ಭಾರತದ ಒಕ್ಕೂಟ ವ್ಯವಸ್ಥೆಯಡಿ ಗಣರಾಜ್ಯದ ಉದಾತ್ತ ಪರಿಕಲ್ಪನೆಗಳು ಮತ್ತು ದೇಶದ ಪ್ರತಿಯೊಬ್ಬ ಪ್ರಜೆಯ ಹಿತದೃಷ್ಟಿಗೆ ನಮ್ಮ ಭಾರತ ಸಂವಿಧಾನ ನೀಡಿರುವ ಕೊಡುಗೆಗಳು ಅಪಾರವಾದುದು. ಇವುಗಳ ರಕ್ಷಣೆಯೊಂದಿಗೆ ದೇಶದ ಏಕತೆ ಮತ್ತು ಸಮಗ್ರತೆಗಳನ್ನು ಕಾಯ್ದುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದರು. ನಾಡಿನ ಸಮಗ್ರತೆ, ಐಕ್ಯತೆಗಾಗಿ ಎಲ್ಲರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದರಲ್ಲದೆ, ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ 2019-20ನೇ ಸಾಲಿನಲ್ಲಿ ಅತ್ಯುತ್ತಮ ಸೇವೆಸಲ್ಲಿಸಿದ ರಾಜ್ಯ ಸರ್ಕಾರಿ ನೌಕರರಿಗೆ ಸರ್ವೋತಮ ಸೇವಾ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆಯಾದವರ ವಿವರ: ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸಗೌಡ, ಚನ್ನರಾಯಪಟ್ಟಣ ಉಪ ಖಜನೆ ಜಿಲ್ಲಾ ಸಹಾಯಕ ನಿರ್ದೇಶಕರಾದ ಓಂಕಾರಪ್ಪ ಜಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎಸ್. ಹರ್ಷ, ಬೇಲೂರು ತಾಲ್ಲೂಕು ಅಡಗೂರು ಪಶು ಚಿಕಿತ್ಸಾಲಯದ ಪಶು ವೈದ್ಯಕೀಯ ಪರೀಕ್ಷಕರಾದ ಹೆಚ್.ಬಿ.ನಾಗರಾಜ್, ಹಾಸನ ತಾಲ್ಲೂಕು ಸಾಲಗಾಮೆ ಹೋಬಳಿಯ ಉಪ ತಹಸೀಲ್ದಾರ್ ಯು.ಎಂ. ಮೋಹನ್‍ಕುಮಾರ್, ಹೊಳೆನರಸೀಪುರ ತಾಲ್ಲೂಕು ಹಳೇಕೋಟೆ ಹೋಬಳಿಯ ರಾಜಸ್ವ ನಿರೀಕ್ಷಕರಾದ ಶಿವಕುಮಾರಸ್ವಾಮಿ ಎಸ್.ಟಿ, ಹಾಸನ ಜಿಲ್ಲಾಧಿಕಾರಿಗಳ ಕಛೇರಿ ಪ್ರಥಮ ದರ್ಜೆ ಸಹಾಯಕರಾದ ಕೆ.ಎನ್. ಮೇನಕಾ, ಚನ್ನರಾಯಪಟ್ಟಣ ತಾಲ್ಲೂಕು ಗ್ರಾಮ ಲೆಕ್ಕಾಧಿಕಾರಿ ಸುಬ್ರಮಣ್ಯ, ಸಕಲೇಶಪುರ ತಾಲ್ಲೂಕು ಗ್ರಾಮಲೆಕ್ಕಾಧಿಕಾರಿ ಕಾಳಪ್ಪ ಜಿ ಲಮಾಣಿ, ಹಾಸನ ತಾಲ್ಲೂಕು ಮೊಸಳೆಹೊಸಹಳ್ಳಿ ಸಮುದಾಯ ಆರೋಗ್ಯ ಕೇಂದ್ರ ಗ್ರೇಡ್-2, ಹಾಸ್ಪಿಟಲ್ ಅಟೆಂಡೆಂಟ್ ಶಿವಾನಂದ ಎಂ.ಎಂ., ಅವರುಗಳು ಜಿಲ್ಲಾ ಕ್ರೀಡಾಂಗಣದಲ್ಲಿಂದು ನಡೆದ 70ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಸ್ವೀಕರಿಸಿದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸನ್ಮಾನಿತರ ವಿವರ:ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕ್ರೀಡಾ ವಿಭಾಗ: ರಾಷ್ಟ್ರ ಮಟ್ಟದ ಕ್ರೀಡಾ ಪಟುಗಳ ವಿಭಾಗದಲ್ಲಿ ವಿಭಾ ಶ್ರೀನಿವಾಸ್ ಮತ್ತು ಶಿಕ್ಷಕರಾದ ಹನುಮಂತೇಗೌಡ ಕೆ, ಸಮಾಜ ಸೇವೆ ವಿಭಾಗದಲ್ಲಿ ಮಕ್ಕಳ ತಜ್ಞರಾದ ಡಾ|| ಪಾಲಾಕ್ಷ, ಜಿಲ್ಲಾ ರೋಟರಿ ಸನ್‍ರೈಸ್‍ನ ಮಾಜಿ ಅಧ್ಯಕ್ಷರಾದ ಎಂ.ಸಿ ರಾಜು, ಎನ್.ಸಿ.ಸಿ., ವಿಭಾಗದಲ್ಲಿ ಸರ್ಕಾರಿ ವಿಜಾÐನ ಕಾಲೇಜಿನ ಹೇಮಂತ್, ಸ್ಕೌಟ್ ಮತ್ತು ಗೈಡ್ ವಿಭಾಗದಲ್ಲಿ ಅರಸೀಕೆರೆ ತಾಲ್ಲೂಕಿನ ಗೊಲ್ಲರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಜೆ.ಎಲ್. ಲೀಲಾ ಮಹೇಶ್ವರ್.

ಶಿಕ್ಷಣ ವಿಭಾಗದ: ಜಾನಪದ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ|| ಹೆಬ್ಬಾಲೆ ಕೆ. ನಾಗೇಶ್, ಪೌರ ಕಾರ್ಮಿಕ ವಿಭಾಗದಲಲ್ಲಿ ಎ. ರಾಮು ಬಿನ್ ಎರ್ರಸ್ವಾಮಿ, ಹೋಂ ಗಾರ್ಡ್ ವಿಭಾಗದಲ್ಲಿ ಹೊಳೆನರಸಿಪುರ ತಾಲ್ಲೂಕಿನ ಗೃಹ ರಕ್ಷಕಕ ದಳದ ಸೀನಿಯರ್ ಪ್ಲಟೂನ್ ಕಮಾಂಡರ್ ಹೆಚ್.ಆರ್.ಪ್ರದೀಪ್ ಕುಮಾರ್.

ಸರ್ಕಾರಿ ವಿಭಾಗ: ಅಬಕಾರಿ ನಿರೀಕ್ಷಕ ಕಚೇರಿಯ ಹಿರಿಯ ವಾಹನ ಚಾಲಕರಾದ ರಮೇಶ್, ಭಾರತ ನೌಕಾ ಪಡೆ ವಿಭಾಗದಲ್ಲಿ ಸಬ್ ಲೆಫ್ಟಿನೆಂಟ್ ಅಧಿಕಾರಿ ನೇವಿಲ್ ಡಿಸೋಜಾ ಇವರುಗಳನ್ನು ಜಿಲ್ಲಾ ಕ್ರೀಡಾಂಗಣದಲ್ಲಿಂದು ನಡೆದ 70ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಶಾಸಕರಾದ ಪ್ರೀತಂ ಜೆ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ವೇತಾ ದೇವರಾಜ್, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ನಿಂಗೇಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ನಿವಾಸ್ ಸೆಪಟ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಎ. ಪರಮೇಶ್, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಸಿವರಾಂ ಬಾಬು, ಅಪರ ಜಿಲ್ಲಾಧಿಕಾರಿ ಕವಿತಾ ರಾಜರಾಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ, ಉಪ ವಿಭಾಗಾಧಿಕಾರಿ ಡಾ|| ನವೀನ್ ಭಟ್, ತಹಶೀಲ್ದಾರ್ ಶಿವಶಂಕರಪ್ಪ, ಮಾಜಿ ಸ್ವಾತಂತ್ರ್ಯ ಹೋರಾಟಗಾರ ಶಿವಣ್ಣ, ಮತ್ತಿತರ ಗಣ್ಯರು ಹಾಗೂ ಇತರೆ ಇಲಾಖಾಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಆಕರ್ಷಕ ಪಥ ಸಂಚಲನ: ಗೃಹರಕ್ಷಕ ದಳ, ಸಶಸ್ತ್ರ ಸೇನಾಪಡೆ, ಎನ್.ಸಿ.ಸಿ., ಸ್ಕೌಟ್ಸ್ ಅಂಡ್ ಗೈಡ್ಸ್, ಸೇವಾದಳ, ನಿವೃತ್ತ ಸೈನಿಕರ ತಂಡ ವಿವಿಧ ಶಾಲಾ ಕಾಲೇಜುಗಳ ತಂಡ ಸೇರಿದಂತೆ ಒಟ್ಟು 45 ತಂಡಗಳಿಂದ ಆಕರ್ಷಕ ಪಥ ಸಂಚಲನ ಮೂಡಿ ಬಂದಿತು. ಪಥ ಸಂಚಲನದಲ್ಲಿ ಭಾಗವಹಿಸಿ ಅತ್ಯುತ್ತಮವಾಗಿ ಮೂಡಿಬಂದ ತಂಡಗಳಿಗೆ ಬಹುಮಾನವನ್ನು ನೀಡಲಾಯಿತು.

ಸಾಂಸ್ಕøತಿಕ ಕಾರ್ಯಕ್ರಮ: ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಭಾವೈಕ್ಯತೆ ಮೆರೆಯುವ ಹಾಡುಗಳಿಗೆ ಸಾವಿರಾರು ಮಕ್ಕಳು ನೃತ್ಯ ಪ್ರದರ್ಶನ ನೀಡಿ ಗಣ್ಯರ ಮತ್ತು ನೋಡುಗರ ಕಣ್ಮನ ಸೇಳೆದರು. ಹಲವು ಶಾಲೆಗಳ 1500 ವಿದ್ಯಾರ್ಥಿಗಳ ಧ್ವಜ ಕವಾಯತು ಪ್ರದರ್ಶನ ನೋಡುಗರ ಮೆಚ್ಚುಗೆ ಗಳಿಸಿತು.
ಅಗ್ನಿ ಶಾಮಕ ಇಲಾಖೆ ವತಿಯಿಂದ ಅಗ್ನಿ ಸುರಕ್ಷತೆಯ ಕುರಿತಂತೆ ವಿವಿಧ ಬಗೆಯ ಅಗ್ನಿ ನಂದಕಗಳನ್ನು ಪ್ರಾಯೋಗಿಕವಾಗಿ ಬಳಸುವುದರ ಬಗ್ಗೆ ಪ್ರಾತ್ಯಕ್ಷತೆಯನ್ನು ನೀಡಲಾಯಿತು.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...