ಹಾಸನ ಭ್ರಷ್ಟಾಚಾರ ಕುರಿತು ಜಾಗೃತಿ

Source: so news | By MV Bhatkal | Published on 5th April 2019, 12:19 AM | State News | Don't Miss |

ಹಾಸನ;ಚನ್ನರಾಯಪಟ್ಟಣ ತಾಲ್ಲೂಕು ನುಗ್ಗೇಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ಜನ ಸಂಪರ್ಕ ನಡೆಸಲಾಯಿತು.
ಸಭೆಯಲ್ಲಿ ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರ ಕೆಲಸ ನಿರ್ವಹಿಸುವಲ್ಲಿ ವಿಳಂಬ, ಲಂಚಕ್ಕಾಗಿ ಒತ್ತಾಯ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ, ನೌಕರರ ವಿರುದ್ದ ನಮಗೆ ದೂರನ್ನು ನೀಡಬಹುದಾಗಿದೆ ಹಾಗೂ ಸಂಬಂದಪಟ್ಟ ಅಧಿಕಾರಿಯ ವಿರುದ್ದ ಹಾಸನ ಭ್ರಷ್ಟಾಚಾರ ನಿಗ್ರಹದಳ ಪೊಲೀಸ್ ಠಾಣೆಗೆ ಭೇಟಿ ಮಾಡಿ ಅಧಿಕಾರಿಗಳ ಬಗ್ಗೆ ಮಾಹಿತಿಯನ್ನು ಒದಗಿಸಬಹುದಾಗಿದೆ, ಹಾಗೂ ಸರ್ಕಾರಿ ನೌಕರರು ತನ್ನ ಆಧಾಯಕ್ಕಿಂತ ಹೆಚ್ಚಿನ ಆಧಾಯ ಹೊಂದಿದ್ದರೆ, ಅಂಚೆ ಮೂಲಕ ನಮಗೆ ಅಕ್ರಮ ಆಸ್ತಿಯ ಬಗ್ಗೆ ತಿಳಿಸಬಹುದು ಎಂದು ಜಾಗೃತಿಯನ್ನು ಮೂಡಿಸಲಾಯಿತು.
ಅಕ್ರಮ ಆಸ್ತಿಯ ಮಾಹಿತಿ ತಿಳಿಸಿದ ವ್ಯಕ್ತಿಯ ಹೆಸರನ್ನು ನಾವು ಬಹಿರಂಗಪಡಿಸುವುದಿಲ್ಲ ಎಂದು ಸಾರ್ವಜನಿಕರಿಗೆ ಕರಪತ್ರಗಳನ್ನು ವಿತರಿಸುವ ಮೂಲಕ ಮನವರಿಕೆ ಮಾಡಿ ಸಭೆ ನಡೆಸಲಾಯಿತು. ಹಾಸನ ಎಸಿಬಿ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಎಂ.ಎಸ್. ಪೂರ್ಣಚಂದ್ರ ತೇಜಸ್ವಿ ರವರು ಮತ್ತು ಪೊಲೀಸ್ ನಿರೀಕ್ಷಕರಾದ, ಸಿ.ಡಿ.ಜಗದೀಶ್ ರವರು ಸಿಬ್ಬಂದಿಗಳೊಂದಿಗೆ ಹಾಜರಿದ್ದು ಸಭೆ ನಡೆಸಲಾಯಿತು ಎಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...