ಅವಧಿ ಮುಗಿದಿರುವ ಗ್ರಾಮ ಪಂಚಾಯತ್ ಚುನಾವಣೆ ವೇಳಾಪಟ್ಟಿ ಪ್ರಕಟಿಸಲು ಹೈಕೋರ್ಟ್ ನಿರ್ದೇಶ‌ನ‌

Source: SO News | By Laxmi Tanaya | Published on 13th November 2020, 10:39 PM | State News |

ಬೆಂಗಳೂರು: ಗ್ರಾಮ ಪಂಚಾಯತ್  ಚುನಾವಣಾ ವೇಳಾಪಟ್ಟಿ ಪ್ರಕಟಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಕಾಂಗ್ರೆಸ್ ವಿಧಾನ ಪರಿಷತ್‌ ಸದಸ್ಯ ಕೆ.ಸಿ. ಕೊಂಡಯ್ಯ ಹಾಗೂ ಇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕಾ‌ ನೇತೃತ್ವದ ವಿಭಾಗೀಯ ಪೀಠ ಶುಕ್ರವಾರ ಈ ಆದೇಶವನ್ನು ನೀಡಿದೆ.

ಅವಧಿ ಪೂರ್ಣವಾಗಿರುವ ಗ್ರಾಮ ಪಂಚಾಯಿತಿಗಳಿಗೆ ಶೀಘ್ರ ಚುನಾವಣೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು.

ಚುನಾವಣಾ ಆಯೋಗ ಗ್ರಾಮ ಪಂಚಾಯಿತಿಗಳ ಅವಧಿ ಮುಗಿಯುವ ಮೊದಲು ಚುನಾವಣೆ ನಡೆಸುವ ಸಾಂವಿಧಾನಿಕ ಆದೇಶವನ್ನು ಪಾಲಿಸುವ ಸ್ವತಂತ್ರ ಸಂಸ್ಥೆಯಾಗಿದೆ ಎಂದು ನ್ಯಾಯಪೀಠ ಹೇಳಿದೆ.

ಚುನಾವಣಾ ಆಯೋಗಕ್ಕೆ ರಾಜ್ಯ ಸರ್ಕಾರವು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು. ಸಿಬ್ಬಂದಿಯ ಅಗತ್ಯವಿದ್ದರೆ ಚುನಾವಣಾ ಆಯೋಗ ರಾಜ್ಯಪಾಲರನ್ನು ಸಂಪರ್ಕಿಸಬಹುದು. ಆದರೆ ರಾಜ್ಯ ಸರ್ಕಾರವನ್ನಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

Read These Next

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...