ಭಟ್ಕಳದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ  : ಜಿಲ್ಲಾಧಿಕಾರಿ ಡಾ.ಕೆ ಹರೀಶಕುಮಾರ್

Source: sonews | By Staff Correspondent | Published on 27th March 2020, 6:44 PM | Coastal News | Don't Miss |

ಕಾರವಾರ: ಕರೋನಾ (ಕೋವಿಡ-19) ವೈರಸ್ ವ್ಯಾಪಕ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ  ಭಟ್ಕಳ ತಾಲೂಕಿನಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಹರೀಶ ಕುಮಾರ ಕೆ. ಅವರು ಹೇಳಿದರು. 
 
ಅವರು  ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ಗೊಷ್ಠಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ದುಬೈನಿಂದ ಆಗಮಿಸಿದ್ದ  ಭಟ್ಕಳ್ ತಾಲೂಕಿನ ಇಬ್ಬರು ವ್ಯಕ್ತಿಗಳಲ್ಲಿ ಕೋವಿಡ್-19 ವೈರಾಣು ಇರುವುದು ದೃಡಪಟ್ಟಿದ್ದಲ್ಲದೇ ಹೆಚ್ಚಿನ ಸಂಖ್ಯೆಯಲ್ಲಿ ವಿದೇಶದಿಂದ ಅದರಲ್ಲೂ ಒಂದೇ ದೇಶದಿಂದ ಆಗಮಿಸಿದವರ ಸಂಖ್ಯೆ ಭಟ್ಕಳ ತಾಲೂಕಿನಲ್ಲಿಯೇ ಹೆಚ್ಚಾಗಿ ಇರುವುದು ಕಂಡು ಬಂದಿರುವದರಿಂದ ಮುಂಜಾಗೃತ ಕ್ರಮವಾಗಿ ಭಟ್ಕಳ ಪುರಸಭೆ, ಜಾಲಿ ಪಟ್ಟಣ ಪಂಚಾಯತ್ ಹಾಗೂ ಶಿರಾಲಿ, ಹೆಬಳೆ, ಮಾವಿನಕುರ್ವಾ, ಮುಂಡಳ್ಳಿ, ಯಲ್ವಡಿಕವೂರ ಮತ್ತು ಮುಟ್ಟಳ್ಳಿ ಗ್ರಾಮ ಪಂಚಾಯತ್‍ಗಳಲ್ಲಿ ತಕ್ಷಣ ಜಾರಿಗೆ ಬರುವಂತೆ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ ಎಂದು  ತಿಳಿಸಿದರು. 
 
ಜಿಲ್ಲೆಯ ಭಟ್ಕಳದಲ್ಲಿ ವಿದೇಶದಿಂದ ಬಂದಂತಹ ಶೇ.40 ರಷ್ಟು ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಿದ್ದು, ಅವರ ವರದಿ ಬರುವರೆಗೂ ಅವರನ್ನು ಮುರುಡೇಶ್ವರದ ಆರ್.ಎನ್.ಎಸ್. ಆಸ್ಪತ್ರೆಯಲ್ಲಿ ಇಡಲಾಗುವುದು. ವರದಿಯು ನೆಗೆಟಿವ್ ಬಂದಲ್ಲಿ ಅಂತವರನ್ನು ಮನೆಗೆ ಕಳುಹಿಸಲಾಗುವುದು, ಪೊಸಿಟಿವ್ ಬಂದವರನ್ನು ಕಾರವಾರ ನೌಕಾನೆಲೆಯ ಪತಂಜಲಿ ಆಸ್ಪತ್ರೆಗೆ ದಾಖಲಿಸಲಾಗುವುದು ಭಟ್ಕಳ ತಾಲೂಕಿನ ಆರೋಗ್ಯ  ಮೂಲಭೂತ ಸೌಕರ್ಯಗಳಿಗಾಗಿ ಆರ್ಥಿಕ ನಿರ್ಭಂದವನ್ನು ವಿಧಿಸದೇ ಆರ್ಥಿಕ ಸಹಾಯ ನೀಡಲಾಗುವುದು. ಜನರು ಆತಂಕ ಪಡಬೇಕಾಗಿಲ್ಲ. ಭಟ್ಕಳ ಹೊರತು ಪಡಿಸಿ ಜಿಲ್ಲೆಯ ಉಳಿದೆಲ್ಲ ಕಡೆ ಸುರಕ್ಷಿತವಾಗಿದ್ದು ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿರುತ್ತದೆ ಎಂದರು.     

ಜಿಲ್ಲಾ ಪೂಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಅವರು ಮಾತನಾಡಿ ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿ ಹರಿದಾಡಿದಲ್ಲಿ ಅಂತವರ ವಿರುದ್ದು ಕಠೀಣ ಕ್ರಮ ಕೈಗೊಳ್ಳಲಾಗುವುದು.  ಸಾರ್ವಜನಿಕರಿಗೆ  ಆರೋಗ್ಯ ತುರ್ತು ಸಂಧರ್ಭ ಬಂದಲ್ಲಿ ಅಂತವರಿಗೆ ಆ ದಿನದ ಮಟ್ಟಿಗೆ ಸ್ಥಳಿಯ ಪೊಲೀಸ್ ಠಾಣೆಗಳಲ್ಲಿ ಕಫ್ರ್ಯೂ ಪಾಸ್ ಪಡೆಯಬಹುದಾಗಿರುತ್ತದೆ. ಭಟ್ಕಳ ಜನತೆ ಸಹಕಾರ ನೀಡಿದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಸಡಿಸಲಾಗುವುದು ಎಂದರು  
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...